ಉಡುಪಿ | ಡಾ. ಭಾಸ್ಕರಾನಂದ ಕುಮಾರ್ ಅವರಿಗೆ ರಾಜ್ಯದ ಪ್ರತಿಷ್ಠಿತ ‘ರಂಗಭೂಮಿ ಪ್ರಶಸ್ತಿ 2025’

Date:

1965ರಲ್ಲಿ ಆರಂಭವಾದ ರಾಜ್ಯದ ಹಿರಿಯ ಹವ್ಯಾಸಿ ನಾಟಕ ಹಾಗೂ ಸಾಂಸ್ಕೃತಿಕ ಸಂಸ್ಥೆಯಾದ ರಂಗಭೂಮಿ (ರಿ.) ಉಡುಪಿ ಸಂಸ್ಥೆಯು 1967ರಿಂದ, ವಿವಿಧ ಕ್ಷೇತ್ರದಲ್ಲಿ ಅಭೂತಪೂರ್ವ ಸಾಧನೆಯನ್ನು ಮಾಡಿದ ಹಲವಾರು ಗಣ್ಯರಿಗೆ ಬಿರುದಿನೊಂದಿಗೆ ಗೌರವಿಸುತ್ತಾ ಬಂದಿದೆ.

ಖ್ಯಾತ ವೈದ್ಯರು, ನಾಟಕಕಾರರು ಹಾಗೂ ಯಕ್ಷಗಾನ ಮತ್ತು ನಾಟಕ ರಂಗದ ಹಿರಿಯ ಕಲಾವಿದರು, ಸಂಘಟಕರಾದ ಡಾ. ಭಾಸ್ಕರಾನಂದಕುಮಾರ್ ಅವರನ್ನು ಈ ಬಾರಿ ರಂಗಭೂಮಿ (ರಿ.) ಉಡುಪಿ ಸಂಸ್ಥೆಯ ‘ರಂಗಭೂಮಿ ಪ್ರಶಸ್ತಿ 2025’ ಯನ್ನು ನೀಡಿ ಗೌರವಿಸಲಾಗುವುದು. ಫೆಬ್ರವರಿ 2 ರಂದು ಉಡುಪಿ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆಯುವ ಈ ಸಮಾರಂಭದಲ್ಲಿ ಶ್ರೀ ಕೋಟ ಶ್ರೀನಿವಾಸ ಪೂಜಾರಿ, ಮಾನ್ಯ ಲೋಕಸಭಾ ಸದಸ್ಯರು, ಡಾ. ಹೆಚ್ .ಎಸ್. ಬಲ್ಲಾಳ್ ಸಹಕುಲಾಧಿಪತಿಗಳು ಮಾಹೆ ಹಾಗೂ ಮಂಗಳೂರಿನ ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಡಾ. ಎಂ.ಬಿ. ಪುರಾಣಿಕ್, ಉಡುಪಿಯ ಯಕ್ಷಗಾನ ಕೇಂದ್ರದ ಸಲಹಾ ಸಮಿತಿಯ ಅಧ್ಯಕ್ಷರಾದ ಶ್ರೀ ಪಳ್ಳಿ ಕಿಶನ್ ಹೆಗ್ಡೆ, ಎಂ.ಜಿ.ಎಂ. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಲಕ್ಷ್ಮೀನಾರಾಯಣ ಕಾರಂತ್, ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕ್ ಲಿ. ಇದರ ಅಧ್ಯಕ್ಷರಾದ ಶ್ರೀ ಹೆಚ್. ಜಯಪ್ರಕಾಶ್ ಕೆದ್ಲಾಯ ಮತ್ತು ಇನ್ನೂ ಹಲವಾರು ಗಣ್ಯರ ಸಮಕ್ಷಮದಲ್ಲಿ ಸನ್ಮಾನಿಸಲಾಗುವುದು ಎಂದು “ರಂಗಭೂಮಿ (ರಿ.) ಉಡುಪಿ” ಯ ಅಧ್ಯಕ್ಷರಾದ ಡಾ. ತಲ್ಲೂರು ಶಿವರಾಮ ಶೆಟ್ಟಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...