ಉಡುಪಿ‌ | ಸರ್ವರ್ ಸಮಸ್ಯೆ: ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ಪಡಿತರ ವಿತರಣೆಗೆ ಸೂಚನೆ

Date:

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವತಿಯಿಂದ ವಿತರಣೆ ಮಾಡುವ ಪಡಿತರ ಪಡೆದುಕೊಳ್ಳಲು ಸರ್ವ‌ರ್ ಸಮಸ್ಯೆ ಎದುರಾಗಿದ್ದು, ಸಾರ್ವಜನಿಕರು ಹಾಗೂ ನ್ಯಾಯಬೆಲೆ ಅಂಗಡಿ ಮಾಲೀಕರು ಪರದಾಡುವಂತಾಗಿದೆ.

ನ್ಯಾಯಬೆಲೆ ಅಂಗಡಿಗಳಲ್ಲಿ ಎಲೆಕ್ಟ್ರಾನಿಕ್ ಪಾಯಿಂಟ್ ಆಪ್ ಸೇಲ್ (ಇ-ಪಿಒಎಸ್) ಯಂತ್ರಗಳ ಕಾರ್ಯಾಚರಣೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಆನ್‌ಲೈನ್ ವ್ಯವಸ್ಥೆಗೆ ಇಲಾಖೆ ನೂತನ ಸರ್ವರ್ ಅಳವಡಿಸಿದೆ. ಅದರ ದೋಷದಿಂದಾಗಿ ರಾಜ್ಯಾದ್ಯಂತ ಸಾರ್ವಜನಿಕರ ಪಡಿತರ ವಿತರಣೆ ವ್ಯವಸ್ಥೆ ನಿಧಾನಗತಿಯಲ್ಲಿ ಸಾಗುತ್ತಿದೆ.

ನ್ಯಾಯಬೆಲೆ ಅಂಗಡಿಗಳ ಮೂಲಕ ಈ ಮುಂಚಿನ ವ್ಯವಸ್ಥೆಯಂತೆ ಪಡಿತರ ವಿತರಣೆಗೆ ಬಯೋಮೆಟ್ರಿಕ್ ಹಾಗೂ ಮೊಬೈಲ್ ಒಟಿಪಿ ಮೂಲಕ ಗ್ರಾಹಕರಿಗೆ ಪಡಿತರ ವಿತರಣೆ ಆಗುತ್ತಿತ್ತು. ಇದೀಗ ಮೊಬೈಲ್ ಒಟಿಪಿ ಸಂಪೂರ್ಣ ಬಂದ್ ಆಗಿದೆ. ಬಯೋಮೆಟ್ರಿಕ್ ಕಾರ್ಯ ಎನ್‌ಐಸಿಯಿಂದ ನಿರ್ವಹಿಸಲಾಗುತ್ತಿತ್ತು. ಇದೀಗ ಕರ್ನಾಟಕ ಸ್ಟೇಟ್ ಡಾಟಾ ಸೆಂಟರ್‌ಗೆ ನೂತನ ಸರ್ವ‌ರ್ ಅಳವಡಿಸಿದ್ದೇ ಇಷ್ಟೆಲ್ಲ ಸಮಸ್ಯೆಗೆ ಕಾರಣ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಈ ದಿನ.ಕಾಮ್ ಜೊತೆ ಮಾತನಾಡಿದ ಹೇರೂರು ಗ್ರಾಮದ ಸುದರ್ಶನ್, “ಪ್ರತಿಬಾರಿಯೂ ಈ ಸಮಸ್ಯೆ ತಪ್ಪಿದ್ದಲ್ಲ ಎಲ್ಲಾ ಕೆಲಸ ಕಾರ್ಯ ಬಿಟ್ಟು ಗಂಟೆಗಟ್ಟಲೆ ಕಾಯಲೇಬೇಕು. ಇದಕ್ಕೆ ಪರ್ಯಾಯ ವ್ಯವಸ್ಥೆ ಕೂಡಲೇ ಮಾಡಿದರೆ ಎಲ್ಲರಿಗೂ ಅನುಕೂಲ” ಎಂದು ಹೇಳಿದರು.

ಈ ತಾಂತ್ರಿಕ ತೊಂದರೆಯನ್ನು ಮನಗಂಡು ಉಡುಪಿ ಜಿಲ್ಲಾಡಳಿತವು ಜಿಲ್ಲೆಯಲ್ಲಿರುವ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಯನ್ನು ಅಕ್ಟೋಬರ್ ತಿಂಗಳಲ್ಲಿ ಕೆ.ಎಸ್.ಡಿ.ಸಿ ಗೆ ಮೈಗ್ರೇಶನ್ ಆಗಿರುವ ಹೊಸ ಸರ್ವರ್ ಮೂಲಕ ವಿತರಣೆ ಮಾಡುವ ಕಾರ್ಯ ಪ್ರಾರಂಭಿಸಿದೆ. ಈ ಸಂಬಂಧ ಹಲವು ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿದ್ದು, ಪಡಿತರ ಚೀಟಿದಾರರಿಂದ ಹಲವು ದೂರುಗಳು ಕೇಳಿ ಬಂದಿರುತ್ತದೆ. ಪ್ರಸ್ತುತ ಹೊಸ ಸರ್ವರ್ ಅಳವಡಿಸಿರುವುದರಿಂದ ಪ್ರಸಕ್ತ ತಿಂಗಳಲ್ಲಿ ತಡವಾಗಿ (ಅಕ್ಟೋಬರ್ 18 ನೇ ತಾರೀಕಿನಿಂದ) ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ಮಾಡುತ್ತಿದೆ.

ಪ್ರಸಕ್ತ ತಿಂಗಳಲ್ಲಿ ಪಡಿತರ ವಿತರಣೆಯು ವಿಳಂಬವಾಗಿ ಪ್ರಾರಂಭವಾಗಿರುವುದರಿಂದ ಆಹಾರ ಇಲಾಖೆಯ ಆಯುಕ್ತರು ಅಕ್ಟೋಬರ್-2024ರ ಮಾಹೆಗೆ ಮಾತ್ರ ಪಡಿತರ ವಿತರಣೆಯನ್ನು ಬೆಳಗ್ಗೆ 6 ಗಂಟೆಯಿಂದ ರಾತ್ರಿ 10 ರ ವರೆಗೆ ನಿಗದಿಪಡಿಸಿ ಎಂದು ಈಗಾಗಲೇ ಪ್ರಕಟಣೆಯನ್ನು ಸಹ ಹೊರಡಿಸಿದೆ.

ತಾಂತ್ರಿಕ ಸಮಸ್ಯೆಯಿಂದ ಪಡಿತರ ವಿತರಣೆಯು ವಿಳಂಬವಾಗಿರುವುದರಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿದಾರರು ಹೆಚ್ಚಿನ ಸಂಖ್ಯೆಯಲ್ಲಿ ಸರತಿ ಸಾಲಿನಲ್ಲಿ ನಿಂತು ಪಡಿತರ ಪಡೆಯಲು ತೊಂದರೆಯಾಗುತ್ತಿರುವುದು ಆಹಾರ ಇಲಾಖೆಯ ಆಯುಕ್ತರ ಗಮನಕ್ಕೆ ತಂದಿದ್ದು, ತಾಂತ್ರಿಕ ಸಮಸ್ಯೆಯನ್ನು ಕೂಡಲೇ ಬಗೆಹರಿಸುವುದಾಗಿ ಹಾಗೂ ಸಾರ್ವಜನಿಕರು ಈ ಬಗ್ಗೆ ಯಾವುದೇ ಆತಂಕ ಪಡುವುದು ಬೇಡ ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ದಾವಣಗೆರೆ | ಅಕ್ರಮವಾಗಿ ಮರ ಮಾರಾಟ: ಉಪ ಅರಣ್ಯಾಧಿಕಾರಿ, ಗಸ್ತು ಅರಣ್ಯ ರಕ್ಷಕ ಅಮಾನತು

ಅದರ ಜೊತೆ ಜೊತೆಗೆ ಅನರ್ಹ ಪಡಿತರ ಚೀಟಿದಾರರ ಬಗ್ಗೆ, ಜಿಲ್ಲೆಯ ಎಲ್ಲಾ ತಾಲೂಕಿನ ಆಹಾರ ಶಿರಸ್ತೇದಾರರು ಮತ್ತು ಆಹಾರ ನಿರೀಕ್ಷಕರು ಪರಿಶೀಲನೆ ನಡೆಸುತ್ತಿದ್ದು, ಈ ವೇಳೆ ಸಾರ್ವಜನಿಕರು ತಾವಾಗಿಯೇ ಬಿ.ಪಿ.ಎಲ್ ಪಡಿತರ ಚೀಟಿ ಪಡೆಯಲು ಅನರ್ಹತೆ ಹೊಂದಿದ್ದಲ್ಲಿ ಸ್ವತಃ/ ತಾವಾಗಿಯೇ ಪಡಿತರ ಚೀಟಿಯನ್ನು ಸೆರೆಂಡರ್ ಮಾಡಬೇಕು. ಈ ಬಗ್ಗೆ ಆಹಾರ ಶಾಖೆಗೆ ಪರಿಶೀಲನೆಗೆ ಒಳಪಡಿಸಲು ತಿಳಿಸಿರುವ ಪಡಿತರ ಚೀಟಿದಾರರಿಗೆ ಅಕ್ಟೋಬರ್ ತಿಂಗಳಲ್ಲಿ ಪಡಿತರವನ್ನು ನೀಡಲು ಈಗಾಗಲೇ ತಿಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ತಿಳಿಸಿದೆ.

WhatsApp Image 2023 08 22 at 3.23.15 PM
ಶಾರೂಕ್ ತೀರ್ಥಹಳ್ಳಿ
+ posts

ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...