ಉಡುಪಿ | ಭಾರೀ ಮಳೆ ಸಾಧ್ಯತೆ, ರೆಡ್ ಅಲರ್ಟ್ ಘೋಷಣೆ

Date:

ಉಡುಪಿ ಜಿಲ್ಲೆಯಲ್ಲಿ ಮೇ 26ರ ವರೆಗೆ ಗುಡುಗು, ಮಿಂಚು, ಗಾಳಿ ಸಹಿತ ಮಳೆ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯು ಮೇ 21ರಂದು ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಿಸಿದೆ. ಮಳೆ ಹೆಚ್ಚಾದ ಹಿನ್ನೆಲೆಯಲ್ಲಿ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು, ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ಮರ ಮತ್ತು ವಿದ್ಯುತ್‌ ಕಂಬದ ಹತ್ತಿರ ಸುಳಿಯಬಾರದು. ತುಂಡಾದ ವಿದ್ಯುತ್ ತಂತಿಗಳಿಂದ ದೂರವಿರಬೇಕು ಎಂದು ಜಿಲ್ಲಾಡಳಿತ ಎಚ್ಚರಿಸಿದೆ.

ಅರಬಿ ಸಮುದ್ರದಲ್ಲಿ ಗಂಟೆಗೆ 45ರಿಂದ 55 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಳೆ ಗಾಳಿ ಹಿನ್ನೆಲೆ ಬಂದರಿನಲ್ಲಿ ಕೆಲವು ಮೀನುಗಾರಿಕಾ ಬೋಟುಗಳು ಲಂಗರು ಹಾಕಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...