ಉಡುಪಿ | ವಿದೇಶಿ ಮರ್ಸಿಡಿಸ್‌ ಕಾರು ಅಕ್ರಮ ನೊಂದಣಿ, ಪ್ರಕರಣ ದಾಖಲು

Date:

ವಿದೇಶದಿಂದ ಆಮದು ಮಾಡಿಕೊಂಡ ಐಷಾರಾಮಿ ಮರ್ಸಿಡಿಸ್ ಬೆಂಜ್ ಕಾರನ್ನು ಅಕ್ರಮವಾಗಿ ನೋಂದಣಿ ಮಾಡುವ ಮೂಲಕ ಅಂದಾಜು ಕೋಟಿ ರೂ. ರಸ್ತೆ ತೆರಿಗೆ ಸರಕಾರಕ್ಕೆ ನಷ್ಟ ಮಾಡಿರುವ ಬಗ್ಗೆ ದಿನಪತ್ರಿಕೆಯೊಂದರಲ್ಲಿ ವರದಿ ಪ್ರಕಟವಾದ ಹಿನ್ನೆಲೆ, ಸದ್ರಿ ವರದಿಯ ಆಧಾರದ ಮೇಲೆ ಉಡುಪಿ ಲೋಕಾಯುಕ್ತ ಪೊಲೀಸರು ಮಾಹಿತಿಗಳನ್ನು ಕಲೆ ಹಾಕಿ ಸಂಬಂಧಪಟ್ಟ ದಾಖಲಾತಿಗಳನ್ನು ಪಡೆದು ಉಡುಪಿ ಆರ್.ಟಿ.ಓ ಕಚೇರಿಯಲ್ಲಿ ಸುಮಾರು 2 ಕೋಟಿ ರೂ. ಬೆಲೆ ಬಾಳುವ ಮರ್ಸಿಡಿಸ್ ಬೆಂಜ್ ಕಾರನ್ನು ಅದೇ ಕಂಪನಿಯ ಕಡಿಮೆ ಬೆಲೆಯ ಕಾರಿನ ಮಾಡೆಲ್ ಅನ್ನು ಎಡಿಟ್ ಮಾಡಿ 2017 ನೇ ಮಾಡೆಲ್‌ನ ಸದ್ರಿ ಕಾರನ್ನು ಫೆಬ್ರವರಿ 2025 ರಂದು ನೋಂದಣಿ ಮಾಡುವ ಮೂಲಕ ಅಲ್ಲಿನ ಅಧಿಕಾರಿ ಹಾಗೂ ಸಿಬ್ಬಂದಿಯವರು ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡು ಸರಕಾರಕ್ಕೆ ಲಕ್ಷಾಂತರ ರೂಪಾಯಿ ತೆರಿಗೆ ಹಣ ನಷ್ಟವನ್ನುಂಟು ಮಾಡಿರುವುದು ವಿಚಾರಣೆಯಿಂದ ತಿಳಿದು ಬಂದ ಹಿನ್ನೆಲೆ, ಆರ್.ಟಿ.ಓ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಲು ಸಕ್ಷಮ ಪ್ರಾಧಿಕಾರಕ್ಕೆ ವರದಿ ಸಲ್ಲಿಸಿ ಅನುಮತಿ ಪಡೆದುಕೊಂಡು ಪ್ರಾಥಮಿಕ ವಿಚಾರಣೆ ನಡೆಸಿ, ಪ್ರಾಥಮಿಕ ವಿಚಾರಣೆಯಲ್ಲಿ ಉಡುಪಿ ಹಾಗೂ ಮಂಗಳೂರು ಆರ್.ಟಿ.ಓ ಕಚೇರಿ ಅಧಿಕಾರಿ ಹಾಗೂ ಸಿಬ್ಬಂದಿಯವರ ಮೇಲಿನ ಆರೋಪಗಳು ದೃಢಪಟ್ಟಿರುವುದರಿಂದ ಮೇಲಾಧಿಕಾರಿಗಳ ಅನುಮತಿ ಪಡೆದು ನವೆಂಬರ್ 17 ರಂದು ಪ್ರಕರಣ ದಾಖಲಿಸಿ, ಅಧಿಕಾರ ದುರ್ಬಳಕೆ ಹಾಗೂ ದಾಖಲಾತಿಗಳ ತಿದ್ದುಪಡಿ ಕಾಯ್ದೆ ಅಡಿಯಲ್ಲಿ ಉಡುಪಿ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿರುವುದಾಗಿ ಉಡುಪಿ ಲೋಕಾಯುಕ್ತ ಪೊಲೀಸ್ ಕಛೇರಿ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...