ಉಡುಪಿ | ಅಕ್ಕ ಸಂಜೀವಿನಿ ಸೂಪರ್ ಮಾರ್ಕೆಟ್ ನಲ್ಲಿ ದೀಪ ಸಂಜೀವಿನಿಗೆ ಚಾಲನೆ

Date:

ಉಡುಪಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿ- ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ದೀಪ ಸಂಜೀವಿನಿ ಕಾರ್ಯಕ್ರಮವನ್ನು ಉಡುಪಿ ತಾಪಂ ಕಟ್ಟಡದಲ್ಲಿರುವ ಅಕ್ಕ ಸಂಜೀವಿನಿ ಸೂಪರ್ ಮಾರ್ಕೆಟ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಜಿಪಂ ಯೋಜನಾ ನಿರ್ದೇಶಕ ವಿಜಯ ಕುಮಾರ್ ಮಾತನಾಡಿ, ಮಹಿಳೆಯರು ಮನೆಯಲ್ಲಿಯೇ ತಯಾರಿಸಿದ ಉತ್ಪನ್ನಗಳಿಗೆ ಅಕ್ಕ ಸಂಜೀವಿನಿ ಸೂಪರ್ ಮಾರ್ಕೆಟ್‌ನಲ್ಲಿ ಮಾರುಕಟ್ಟೆ ಕಲ್ಪಿಸುವ ಕಾರ್ಯ ಮಾಡಲಾಗುತ್ತಿದೆ. ಇಲ್ಲಿನ ಉತ್ಪನ್ನಗಳನ್ನು ಬ್ರಾಂಡ್ ರೀತಿಯಲ್ಲಿ ಪ್ರಚಾರ ಮಾಡಬೇಕಾದ ಅಗತ್ಯ ಇದೆ. ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಬರುವಂತೆ ಆಕರ್ಷಿಸಬೇಕು. ಮಹಿಳೆಯರು ಸ್ವಾವಲಂಬಿಗಳಾಗಿ ಆದಾಯ ಗಳಿಸುವುದರಿಂದ ಮನೆ ಬೆಳಗುತ್ತದೆ ಮತ್ತು ಸಮಾಜ ಬೆಳೆಯುತ್ತದೆ ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ಉಡುಪಿ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಮಾತನಾಡಿ, ಸರಕಾರ ಮಹಿಳೆಯರಿಗೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಅದರ ಸದುಪಯೋಗವನ್ನು ಮಹಿಳೆಯರು ಪಡೆದುಕೊಳ್ಳಬೇಕು. ಇಲ್ಲಿನ ಉತ್ಪನ್ನಗಳು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯ ಅಗತ್ಯವಾಗಿ ಮಾಡಬೇಕು. ಆ ಮೂಲಕ ತಮ್ಮದೇ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಬಹುದಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ ಅಸೋಸಿಯೇಶನ್ ಅಧ್ಯಕ್ಷ ಹರಿಪ್ರಸಾದ್ ರೈ, ತಾಪಂ ವ್ಯವಸ್ಥಾಪಕಿ ಫರ್ಯಾನ, ಸ್ವರ್ಣ ಸಂಜೀವಿನಿ ಉಡುಪಿ ತಾಲೂಕು ಒಕ್ಕೂಟದ ಅಧ್ಯಕ್ಷೆ ಸುಲೋಚನಾ ಕುಂದರ್, ಉದ್ದಿಮೆದಾರೆ ಗೀತಾ ಪಾಲನ್ ಉಪಸ್ಥಿತರಿದ್ದರು.

ಅಂಬಲಪಾಡಿ ಉಜ್ವಲ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಐರಿನ್ ಅಂದ್ರಾದೆ ಸ್ವಾಗತಿಸಿದರು. ಕಾರ್ಯದರ್ಶಿ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು. ದೀಪಾವಳಿ ಹಬ್ಬವನ್ನು ಆಚರಿಸಲು ಬೇಕಾದ ವಿವಿಧ ರೀತಿ ಉತ್ಪನ್ನಗಳನ್ನು ಇಲ್ಲಿ ಲಭ್ಯ ಇದೆ. ಇದರ ಪ್ರಯೋಜನ ಪಡೆಯುವಂತೆ ಸಾರ್ವಜನಿಕರಲ್ಲಿ ವಿನಂತಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...