ಉಡುಪಿ | ಪೊಲೀಸ್ ಇಲಾಖೆಗೆ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಹೊಸ ಬೊಲೇರೋ ವಾಹನ ಹಸ್ತಾಂತರ

Date:

ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ (ಎಸ್‌ಸಿಡಿಸಿಸಿ) ವತಿಯಿಂದ ಪೊಲೀಸ್ ಇಲಾಖೆಗೆ ಸಿಎಸ್‌ಆರ್ ನಿಧಿಯಿಂದ ಒದಗಿಸಿದ ನೂತನ ಬೊಲೇರೋ ವಾಹನದ ಕೀಯನ್ನು ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರಕುಮಾರ್ ಅವರು ಒಂದು ಉಡುಪಿ ಜಿಲ್ಲಾ ವರಿಷ್ಠಾಧಿಕಾರಿ ಕಛೇರಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರಿಗೆ ಹಸ್ತಾಂತರಿಸಿದರು. ನಂತರ ಹೊಸ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ರಾಜೇಂದ್ರಕುಮಾರ್, “ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲೇ ಪೊಲೀಸ್ ಇಲಾಖೆ ಅತ್ಯಂತ ಸವಾಲಿನ ಕಾರ್ಯವ್ಯವಹಾರಗಳನ್ನು ನಿರ್ವಹಿಸುತ್ತದೆ. ಸಾರ್ವಜನಿಕರ ಸುರಕ್ಷತೆ, ಕಾನೂನು-ಸುವ್ಯವಸ್ಥೆ ಕಾಪಾಡುವುದು ಈ ಇಲಾಖೆಯ ದೊಡ್ಡ ಜವಾಬ್ದಾರಿ. ಇಲಾಖೆಯಿಂದ ಬಂದ ಮನವಿಗೆ ಸ್ಪಂದಿಸಿ ಈಗಾಗಲೇ ಎರಡು ವಾಹನಗಳನ್ನು ಒದಗಿಸಿದ್ದೇವೆ. ಇದೇ ಧೋರಣೆಯಲ್ಲಿ ಉಡುಪಿ ಎಸ್ಪಿಯವರ ಮನವಿಗೂ ಸ್ಪಂದಿಸಿ ಈ ಬೊಲೇರೋ ವಾಹನವನ್ನು ನೀಡುತ್ತಿದ್ದೇವೆ” ಎಂದು ಹೇಳಿದರು.

WhatsApp Image 2025 12 06 at 7.28.47 PM

ಅದಕ್ಕೂ ಮೊದಲು ನಡೆದ ಸರಳ ಸಮಾರಂಭದಲ್ಲಿ, ಇಲಾಖೆ ವತಿಯಿಂದ ವಾಹನ ಒದಗಿಸಿದ್ದಕ್ಕಾಗಿ ಡಾ. ರಾಜೇಂದ್ರಕುಮಾರ್ ಅವರಿಗೆ ಸ್ಮರಣಿಕೆ ನೀಡುವ ಮೂಲಕ ಸನ್ಮಾನಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಬೆಳಪು, ಡಿವೈಎಸ್ಪಿ ಡಿ.ಟಿ. ಪ್ರಭು, ಬ್ಯಾಂಕ್‌ನ ಹಿರಿಯ ಅಧಿಕಾರಿಗಳು ಹಾಗೂ ಪೊಲೀಸ್ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಜಿಲ್ಲಾ ಪೊಲೀಸ್ ಇಲಾಖೆಯ ಹಲವಾರು ವಾಹನಗಳು 15 ವರ್ಷಗಳ ಸೇವೆ ಪೂರೈಸಿರುವುದರಿಂದ ಹಾಗೂ ಕೆಲ ವಾಹನಗಳು ದುರಸ್ತಿಯಲ್ಲಿ ಇರುವ ಹಿನ್ನೆಲೆಯಲ್ಲಿ ಇಲಾಖೆಗೆ ಕರ್ತವ್ಯ ನಿರ್ವಹಣೆಯಲ್ಲಿ ಅಡಚಣೆ ಉಂಟಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಸಿಎಸ್‌ಆರ್ ನಿಧಿ ಮೂಲಕ ಹೊಸ ವಾಹನ ಒದಗಿಸುವಂತೆ ಬ್ಯಾಂಕ್‌ಗೆ ಮನವಿ ಸಲ್ಲಿಸಲಾಗಿತ್ತು.

WhatsApp Image 2025 12 06 at 7.28.48 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...