ಉಡುಪಿ | ನೌಕಾ ಸೇನೆಗೆ ಸಂಬಂಧಿಸಿದ ಗೌಪ್ಯ ಮಾಹಿತಿ ಪಾಕಿಸ್ತಾನಕ್ಕೆ ಲೀಕ್‌: ಮತ್ತೊಬ್ಬ ಆರೋಪಿ ಬಂಧನ

Date:

ಉಡುಪಿ ಕೊಚ್ಚಿನ್‌ ಶಿಪ್ಯಾರ್ಡ್‌ ಮಲ್ಪೆ ಘಟಕದ ಸಬ್‌ಕಂಟ್ರಾಕ್ಟರ್‌ ಸಂಸ್ಥೆಯೊಂದರಲ್ಲಿ ನಡೆದಿರುವ ಗಂಭೀರ ರಾಷ್ಟ್ರ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ತನಿಖೆ ಮುಂದುವರಿದಿದ್ದು, ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಲ್ಪೆ ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 128/2025ರಂತೆ, M/S Shushma Marine Private Limited ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಉತ್ತರ ಪ್ರದೇಶ ಮೂಲದ ರೋಹಿತ್‌ ಮತ್ತು ಸಂತ್ರಿ ಎಂಬ ಇಬ್ಬರು ಆರೋಪಿಗಳು, ಭಾರತದ ನೌಕಾ ಸೇನೆಗೆ ಸಂಬಂಧಿಸಿದ ಹಡಗುಗಳ ಸಂಖ್ಯೆಗಳ ಗೌಪ್ಯ ಪಟ್ಟಿ ಸೇರಿದಂತೆ ಇತರೆ ಗೌಪ್ಯ ಮಾಹಿತಿಯನ್ನು ವಾಟ್ಸಪ್‌ ಮೂಲಕ ಅನಧಿಕೃತವಾಗಿ ಹಂಚಿಕೊಂಡು ಅಕ್ರಮ ಲಾಭ ಪಡೆದಿರುವ ಆರೋಪದಡಿ ಕಲಂ 152 BNS ಹಾಗೂ OFFICIAL SECRETS ACT, 1923ರ ಕಲಂ 3 ಮತ್ತು 5ರಂತೆ ಪ್ರಕರಣ ದಾಖಲಾಗಿದೆ.

ಈ ಪ್ರಕರಣದ ತನಿಖೆಯನ್ನು ಕಾರ್ಕಳ ಉಪವಿಭಾಗದ ಸಹಾಯಕ ಪೊಲೀಸ್‌ ಅಧೀಕ್ಷಕಿ ಹರ್ಷ ಪ್ರಿಯಂವದಾ ಐಪಿಎಸ್‌ ಅವರ ನೇತೃತ್ವದ ವಿಶೇಷ ತಂಡ ಕೈಗೆತ್ತಿಕೊಂಡಿದ್ದು, ಮುಖ್ಯ ಆರೋಪಿಗಳಾದ ರೋಹಿತ್‌ ಮತ್ತು ಸಂತ್ರಿಯನ್ನು ಈಗಾಗಲೇ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತನಿಖೆಯನ್ನು ಇನ್ನಷ್ಟು ವಿಸ್ತರಿಸಿದ ಪೊಲೀಸ್‌ ತಂಡ, ಆರೋಪಿಗಳು ಬಳಸುತ್ತಿದ್ದ ಮೊಬೈಲ್‌ ಸಿಮ್‌ ಕಾರ್ಡ್‌ ಮೂಲದ ಪತ್ತೆ ಹಚ್ಚಿದ ಹಿನ್ನೆಲೆಯಲ್ಲಿ, ಹಣಕ್ಕಾಗಿ ತನ್ನ ಹೆಸರಿನಲ್ಲಿ ಸಿಮ್‌ ತೆಗೆದು ಆರೋಪಿಗಳಿಗೆ ನೀಡಿದ್ದ ಆರೋಪದಡಿ ಗುಜರಾತ್‌ ರಾಜ್ಯದ ಆನಂದ ತಾಲೂಕಿನ ಕೈಲಾಸ್‌ ನಗರಿ, ನಿವಾಸಿ ಹೀರೇಂದ್ರ ಕುಮಾರ್‌ ಭರತ್‌ ಕುಮಾರ್‌ ಖಡಯಾತ್‌ (34) ಎಂಬುವವನನ್ನು ಡಿಸೆಂಬರ್‌ 21ರಂದು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ ಎಂದು ಪೊಲೀಸ್‌ ಇಲಾಖೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...