ಉಡುಪಿ | ಅವೈಜ್ಞಾನಿಕ ಅಂಡರ್‌ಪಾಸ್ ಕಾಮಗಾರಿ; ಮಳೆಯ ಹೊಡೆತಕ್ಕೆ ಕುಸಿದು ಬಿದ್ದ ಸರ್ವಿಸ್ ರಸ್ತೆ

Date:

  • ಅಂಡರ್ ಪಾಸ್ ಕಾಮಗಾರಿ ಅವೈಜ್ಞಾನಿಕ ಎಂದ ಸಾರ್ವಜನಿಕರು
  • ಸರಿಯಾದ ಡಾಂಬರೀಕರಣವೂ ಇಲ್ಲದ ಪರ್ಯಾಯ ಮಾರ್ಗ

ಉಡುಪಿಯ ಸಂತೆಕಟ್ಟೆಯಲ್ಲಿ ನಡೆಯುತ್ತಿರುವ ಅಂಡರ್‌ಪಾಸ್ ಕಾಮಗಾರಿ ಪ್ರದೇಶದಲ್ಲಿ ದಿನನಿತ್ಯ ಮಣ್ಣು ಕುಸಿಯುತ್ತಿದ್ದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಕಳೆದ ಕೆಲವು ದಿನಗಳಿಂದ ವ್ಯಾಪಕವಾಗಿ ಸುರಿದ ಮಳೆಯಿಂದಾಗಿ ಸಂತೆಕಟ್ಟೆಯಲ್ಲಿ ಆರಂಭಗೊಂಡಿರುವ ಅಂಡರ್ ಪಾಸ್ ಕಾಮಗಾರಿ ನಡೆಯುವ ಪ್ರದೇಶದಲ್ಲಿ ಮಣ್ಣು ಕುಸಿಯಲಾರಂಭಿಸಿದೆ. ಇದರಿಂದ ಇಲ್ಲಿ ನಿರ್ಮಿಸಲಾದ ತಡೆಗೋಡೆ ಹಾಗೂ ಸರ್ವಿಸ್ ರಸ್ತೆಗೆ ಹಾನಿಯಾಗಿದೆ. ಅಷ್ಟು ಮಾತ್ರವಲ್ಲದೆ ಮಣ್ಣು ಕುಸಿತ ಹೆಚ್ಚಾಗುತ್ತಿದ್ದು ಇದರಿಂದ ಪಕ್ಕದಲ್ಲೇ ಇರುವ ಬೃಹತ್ ಕಟ್ಟಡ ಹಾಗೂ ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ.

ಕಾಮಗಾರಿ ನಡೆಯುತ್ತಿರುವ ಪರ್ಯಾಯ ಮಾರ್ಗ ಕೂಡ ಸರಿಯಾದ ಡಾಂಬರೀಕರಣ ಇಲ್ಲದ ಕಾರಣ ಪರದಾಡುವ ವಾಹನ ಸವಾರರು ಪರದಾಡುವ ಸ್ಥಿತಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿ ಕೂಡಲೇ ಕ್ರಮ ವಹಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂತೆಕಟ್ಟೆಯಲ್ಲಿ ಅಗತ್ಯ ಇದ್ದದ್ದು ಫ್ಲೈಓವರ್, ಆದರೆ ಅಧಿಕಾರಿಗಳು ಫ್ಲೈಓವರ್ ಮಾಡುವುದನ್ನು ಬಿಟ್ಟು ಅಂಡರ್‌ಪಾಸ್‌ನ ಯೋಜನೆ ಹಾಕಿದ್ದಾರೆ. ಇದುವೇ ಸಮಸ್ಯೆಗೆ ಕಾರಣವಾಗಿದೆ. ಸಂಸದರು, ಜನಪ್ರತಿನಿಧಿಗಳು ಈ ಕಡೆ ಬರೋದೆ ಇಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಉಡುಪಿ ಕಡೆಗೆ ಸಾಗುವಾಗ ಈ ಮುಂಚೆ ಸರ್ವಿಸ್ ರಸ್ತೆ ಬಳಸಲಾಗುತ್ತಿದ್ದು, ಡಿವೈಡರ್ ಒಡೆದು ರಸ್ತೆ ಅಗಲೀಕರಣ ಮಾಡಿದ್ದರೂ ಸೂಕ್ತ ಡಾಂಬರೀಕರಣ ಮಾಡದೆ ಅಗೆದ ರಸ್ತೆಯ ಡಾಂಬರು ತಂದು ಸಮತಟ್ಟು ಮಾಡಲಾಗಿತ್ತು. ಇದೀಗ ಮಳೆಯಲ್ಲಿ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿದೆ.

ಕೋಟ್ಯಂತರ ರೂಪಾಯಿ ಕಾಮಗಾರಿ ನಡೆಯುತ್ತಿದ್ದರೂ ವೈಜ್ಞಾನಿಕವಾಗಿ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಸ್ಥಳೀಯ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ವರದಿ : ಶಾರೂಕ್ ತೀರ್ಥಹಳ್ಳಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...