ಉಡುಪಿ | ಯುವಪೀಳಿಗೆಗೆ ಕಾರಂತರ ಮೌಲ್ಯ ಪರಿಚಯಿಸಿದ ‘ಅರಿವಿನ ಬೆಳಕು’ ಉಪನ್ಯಾಸ

Date:

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ವೆಂಕಟರಮಣ ಮಹಿಳಾ ಕಾಲೇಜು ಕಾರ್ಕಳ ಇವರ ಸಹಯೋಗದಲ್ಲಿ ಶನಿವಾರ ಕಾಲೇಜು ಸಭಾಂಗಣದಲ್ಲಿ ಅರಿವಿನ ಬೆಳಕು ಉಪನ್ಯಾಸ ಮಾಲೆ -11 ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮವನ್ನು ಕಾರ್ಕಳ ಎಸ್.ವಿ.ಎಜುಕೇಶನ್ ಟ್ರಸ್ಟ್ ನ ಕಾರ್ಯದರ್ಶಿ ಕೆ.ಪಿ.ಶೆಣೈ ಉದ್ಘಾಟಿಸಿ ಮಾತನಾಡಿ, ಕಾರಂತರು ಕೇವಲ ಸಾಹಿತ್ಯ ಕ್ಷೇತ್ರಕ್ಕೆ ಸೀಮಿತವಾಗದೇ ಯಕ್ಷಗಾನ ಹಾಗೂ ವಿವಿಧ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸಿ ಯಕ್ಷಗಾನಕ್ಕೆ ಹೊಸ ರೂಪ ನೀಡಿದರು. ಇಂದಿನ ಯುವ ಪೀಳಿಗೆಗಳು ಅವರ ಕೃತಿಗಳನ್ನು ಓದುವ ಮೂಲಕ ಅದರ ಮೌಲ್ಯಗಳನ್ನು ಜೀವನದಲ್ಲಿ ಆಳವಡಿಸಿಕೊಳ್ಳಬೇಕು ಎಂದರು.

ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಮಾತನಾಡಿ, ಡಾ.ಶಿವರಾಮ ಕಾರಂತರು ಕನ್ನಡ ಸಾಹಿತ್ಯ ಮಾತ್ರವಲ್ಲದೇ ಭಾರತೀಯ ಸಾಹಿತ್ಯದಲ್ಲಿಯೂ ಸಹ ದೊಡ್ಡ ಹೆಸರು. ಕರಾವಳಿ ಕರ್ನಾಟಕದ ದೈತ್ಯ ಪ್ರತಿಭೆ
ಕಾರಂತರ ಪರಿಚಯ ವ್ಯಾಪಕವಾಗಿ ನಡೆದಿಲ್ಲ. ವಿದ್ಯಾರ್ಥಿಗಳಿಗೆ ಕಾರಂತರನ್ನು ಪರಿಚಯಿಸುವುದರೊಂದಿಗೆ ಸಾಹಿತ್ಯ ಮತ್ತು ಸಂಸ್ಕೃತಿಯ ವಿಚಾರವನ್ನು ತಿಳಿಸಿ ಓದುವ ಹವ್ಯಾಸವನ್ನು ಬೆಳೆಸುವುದು ಕಾರ್ಯಕ್ರಮ ಮುಖ್ಯ ಉದ್ದೇಶವಾಗಿದೆ
ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಉಪನ್ಯಾಸಕಿ ಶಾಲಿನಿ ಯು.ಬಿ “ಕಾರಂತರ ಕಾದಂಬರಿಗಳ ಸಿನೆಮಾಗಳಲ್ಲಿ ಬದುಕಿನ ಅಭಿವ್ಯಕ್ತಿ” ಎಂಬ ವಿಷಯದ ಕುರಿತು
ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಡಾ.ಶಿವರಾಮ ಕಾರಂತ ಟ್ರಸ್ಟಿನ ಸದಸ್ಯೆ ಆತ್ರಾಡಿ ಅಮೃತ ಶೆಟ್ಟಿ, ಉಪನ್ಯಾಸಕಿ ರೇಖಾ, ಸಾಹಿತ್ಯ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲೆ ಪ್ರೊ.ಗೀತಾ ಪ್ರಾಸ್ತಾವಿಕವಾಗಿ
ಮಾತನಾಡಿ ಸ್ವಾಗತಿಸಿ, ಕಾಲೇಜಿನ ವಿದ್ಯಾರ್ಥಿನಿ ಮಂಜುಳ ನಿರೂಪಿಸಿ, ಶ್ರೀನಿಧಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...