ಉಡುಪಿ | ಸೌಜನ್ಯ ಅತ್ಯಾಚಾರ ಪ್ರಕರಣ ಆರೋಪಿ ʼಕೊರಗಜ್ಜ ಕೊರಗಜ್ಜʼ ಎಂದೇಳಿ ಹುಚ್ಚನಂತೆ ಅಲೆಯಲಿ: ನಿತ್ಯಾನಂದ ಒಳಕಾಡು

Date:

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪಿಗಳು ʼಕೊರಗಜ್ಜ ಕೊರಗಜ್ಜʼ ಎಂದು ರಸ್ತೆಯಲ್ಲಿ ಹುಚ್ಚನಂತೆ ಅಲೆದಾಡಲಿ ಎಂದು ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರು ಕರಾವಳಿಯ ಕಾರಣಿಕ ದೈವ ಕೊರಗಜ್ಜನಿಗೆ ಉರುಳು ಸೇವೆಯ ಮೂಲಕ ಪೂಜೆ ಸಲ್ಲಿಸಿ ಪ್ರತಿಭಟಿಸಿದರು.

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರಾವಳಿಯಲ್ಲಿ ಈಗಾಗಲೇ ಹೋರಾಟದ ಕಿಚ್ಚು ಜೋರಾಗಿದ್ದು, ಮರು ತನಿಖೆಗೆ ಆಗ್ರಹಿಸಿ ಅಲ್ಲಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಇನ್ನು ಹಲವು ಕಡೆ ದೈವ ದೇವರಿಗೆ ಮೊರೆ ಹೋಗುವ ಮೂಲಕ ಸೌಜನ್ಯಾಳಿಗೆ ನ್ಯಾಯ ಸಿಗಬೇಕು ಅಂತ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ. ಅಂತೆಯೇ ಭಾನುವಾರ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ಇರುವ ನೆಲ್ಲಿಕಟ್ಟೆ ಕೊರಗಜ್ಜ ದೇವಸ್ಥಾನದಲ್ಲಿ ಜಿಲ್ಲಾ ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು ಅವರಿಂದ ವಿಶೇಷ ಉರುಳು ಸೇವೆ ನಡೆಯಿತು.

ಮೊದಲು ಪ್ರಾರ್ಥನೆ ಸಲ್ಲಿಸಿದ ನಿತ್ಯಾನಂದ ಒಳಕಾಡು, ಬಳಿಕ ಸೌಜನ್ಯಾಳ ಭಾವ ಚಿತ್ರ ಹಿಡಿದು ಉರುಳು ಸೇವೆ ನಡೆಸಿ ಮಾತನಾಡಿದ ಅವರು, “ಸೌಜನ್ಯಾಗೆ ನ್ಯಾಯ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಅನೇಕ ಪ್ರತಿಭಟನೆಗಳು ನಡೆಯುತ್ತಿದ್ದರೂ ಸರ್ಕಾರ ಈ ಬಗ್ಗೆ ಮೌನ ವಹಿಸಿದೆ. ಸೌಜನ್ಯಳನ್ನು ಅತ್ಯಾಚಾರ ಮಾಡಿದ ಆರೋಪಿಗೆ ಕೊರಗಜ್ಜನೇ ಶಿಕ್ಷೆ ಕೊಡಬೇಕು. ಇದಕ್ಕಾಗಿ ಉರುಳು ಸೇವೆ ಮೂಲಕ ಪ್ರಾರ್ಥನೆ ಸಲ್ಲಿಸಿದ್ದೇನೆ‌. ಆರೋಪಿ ಯಾರೆಂಬುದು ಪತ್ತೆ ಆಗಬೇಕು. ಆರೋಪಿಯೇ ಮುಂದೆ ಬಂದು ತಪ್ಪೊಪ್ಪಿಕೊಳ್ಳಬೇಕು. ಇಲ್ಲವಾದರೆ ʼಕೊರಗಜ್ಜ ಕೊರಗಜ್ಜʼ ಎಂದು ಹುಚ್ಚನಂತೆ ಅಲೆದಾಡಲಿ” ಎಂದು ಪ್ರಾರ್ಥಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸೌಜನ್ಯ ಪ್ರಕರಣ | ಅಣ್ಣಪ್ಪ ಬೆಟ್ಟದಲ್ಲಿ ಸೌಜನ್ಯ ತಾಯಿ, ಆರೋಪ ಹೊತ್ತವರು ಮುಖಾಮುಖಿ

ನಿತ್ಯಾನಂದ ಒಳಕಾಡುವವರ ವಿಶೇಷ ಉರುಳು ಸೇವೆಗೆ ದೇವಸ್ಥಾನದ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಳೀಯ ರಿಕ್ಷಾ ಚಾಲಕರು, ಸ್ಥಳೀಯ ನಾಗರಿಕರು ಸಾಥ್ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...