ಉಡುಪಿ | ಹಾಸ್ಟೆಲ್‌ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು ಪ್ರಕರಣ; ತನಿಖೆಗೆ ಪೋಷಕರ ಒತ್ತಾಯ

Date:

ಕುಂದಾಪುರ ಗುರುಕುಲ ಶಾಲೆಯ ವಿದ್ಯಾರ್ಥಿನಿ ಕಾರವಾರ ಸಮೀಪದ ಕಾಜೂಬಾಗ್‌ನ ತನ್ವಿ ಪಾಲೇಕರ್(14) ಸಾವಿನ ಪ್ರಕರಣದ ಬಗ್ಗೆ ತನಿಖೆ ನಡೆಸಿ ನ್ಯಾಯ ಒದಗಿಸಿಕೊಡುವಂತೆ ವಿದ್ಯಾರ್ಥಿನಿಯ ತಂದೆ ರೋಶನ್ ನಾರಾಯಣ ಪಾಲೇಕರ್ ಆಗ್ರಹಿಸಿದ್ದಾರೆ.

ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಒಂಬತ್ತನೇ ತರಗತಿಯಲ್ಲಿ ಕಲಿಯುತ್ತಿರುವ ನನ್ನ ಮಗಳು, ಶಾಲೆಯ ಹಾಸ್ಟೆಲ್‌ನಲ್ಲಿಯೇ ಉಳಿದುಕೊಂಡಿದ್ದಳು. ಜೂ.5ರಂದು ಬೆಳಗಿನ ಜಾವ ಆಕೆ ಹಾಸ್ಟೆಲ್ ಕಟ್ಟಡದ ಎರಡನೇ ಮಹಡಿಯಿಂದ ಅಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿರುವುದಾಗಿ ಶಾಲೆಯವರು ತಿಳಿಸಿದ್ದರು. ಆದರೆ ನಮಗೆ ಈ ಸಾವಿನ ಬಗ್ಗೆ ಸಂಶಯ ಇದೆ. ಅದರಂತೆ ಕುಂದಾಪುರ ಠಾಣೆಯಲ್ಲಿ ಸಂಶಯಾಸ್ಪದ ಸಾವು ಎಂಬುದಾಗಿ ದೂರು ದಾಖಲಿಸಿದ್ದೇವೆ. ಈ ಕುರಿತು ಪೊಲೀಸರು ತನಿಖೆ ನಡೆಸಬೇಕು” ಎಂದು ಒತ್ತಾಯಿಸಿದರು.

“ಆಕೆ ಕಟ್ಟಡದ ಮೇಲಿನಿಂದ ಕಾಲು ಜಾರಿ ಬೀಳಲು ಅಥವಾ ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಸಾಧ್ಯವೇ ಇಲ್ಲ. 4.4 ಅಡಿ ಎತ್ತರ ಇರುವ ಆಕೆ ನೆಲದಿಂದ ಏಳು ಅಡಿ ಎತ್ತರದಲ್ಲಿರುವ ಜಾಗದಿಂದ ಹೇಗೆ ಕೆಳಗೆ ಬೀಳಲು ಸಾಧ್ಯ? ಎಂದು ಪ್ರಶ್ನಿಸಿದ ಅವರು, ಆಕೆ ಮನೆಯಿಂದ ತುಂಬಾ ಖುಷಿಯಾಗಿಯೇ ಬಂದಿದ್ದಾಳೆ. ಕಲಿಯುವುದರಲ್ಲಿ ಪ್ರತಿಭಾನ್ವಿತೆ ಹಾಗೂ ಧೈರ್ಯವಂತೆ ಆಗಿದ್ದ ತನ್ವಿ, ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳುವ ಮನಸ್ಥಿತಿಯವಳು ಅಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ವಾಂತಿ-ಭೇದಿ ಪ್ರಕರಣ ಹೆಚ್ಚಳ; ಗಾರವಾಳ ಗ್ರಾಮದಲ್ಲಿ ತೆರೆದ ತಾತ್ಕಾಲಿಕ ಆರೋಗ್ಯ ಕೇಂದ್ರ

ಘಟನೆ ಹಿನ್ನೆಲೆ

ಉಡುಪಿ ಜಿಲ್ಲೆಯ ಕುಂದಾಪುರದ ಗುರುಕುಲ ಶಾಲೆಯ ಹಾಸ್ಟೆಲ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಮೃತಪಟ್ಟಿದ್ದ ಘಟನೆ ಜೂನ್‌ 7ರಂದು ನಡೆದಿತ್ತು.

ಕಾರವಾರದ ರಂಜನ ಪಾಲೇಕರ್ ಎಂಬವರ ಪುತ್ರಿ ತನ್ವಿ(14) ಮೃತ ವಿದ್ಯಾರ್ಥಿನಿ. ತನ್ವಿ ವಕ್ವಾಡಿ ಗ್ರಾಮದ ಗುರುಕುಲ ವಸತಿಶಾಲೆಯ ವಿದ್ಯಾರ್ಥಿನಿಯಾಗಿದ್ದು, ಹಾಸ್ಟೆಲ್ ಕಟ್ಟಡದ 2ನೇ ಮಹಡಿಯಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾಳೆಂದು ತಿಳಿದುಬಂದಿತ್ತು. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸುದ್ದಿಗೋಷ್ಠಿಯಲ್ಲಿ ವಿದ್ಯಾರ್ಥಿನಿಯ ತಾಯಿ ರಂಜನ ಆರ್ ಪಾಲೇಕರ್, ರಾಘುನಾಕ್, ಜ್ಯೋತಿ, ಈಶ್ವರನಾಕ್, ದತ್ತರಾಮ ನಾಕ್, ಪ್ರಕಾಶ್ ಕಾಮತ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...