ಉಡುಪಿ ಜಿಲ್ಲೆಯಲ್ಲಿ ಶಾಲೆಯ ಶೌಚಾಲಯವನ್ನು ವಿದ್ಯಾರ್ಥಿಗಳೇ ಸ್ವಚ್ಛಗೊಳಿಸುವ ವಿಡಿಯೋವೊಂದು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.
ದೈಹಿಕ ಶಿಕ್ಷಣ ಶಿಕ್ಷಕರೊಬ್ಬರು ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಘಟನೆ ನಡೆದಿರುವುದು ಉಡುಪಿಯ ನಿಟ್ಟೂರಿನ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ.
ಈಗಾಗಲೇ ಸರಕಾರದಿಂದ ಈ ಕುರಿತಾಗಿ ಸುತ್ತೋಲೆ ಕೂಡ ಬಂದಿದ್ದು, ಮಕ್ಕಳಿಂದ ಶೌಚಾಲಯವನ್ನು ಸ್ವಚ್ಛಗೊಳಿಸಿದ್ದಲ್ಲಿ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಿಬ್ಬಂದಿಯ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿತ್ತು.
ಉಡುಪಿ: ಮಕ್ಕಳಿಂದ ಶಾಲೆಯ ಶೌಚಾಲಯ ಸ್ವಚ್ಛಗೊಳಿಸಿದ ದೈಹಿಕ ಶಿಕ್ಷಣ ಶಿಕ್ಷಕ
ಶಾಲೆಯ ಶೌಚಾಲಯವನ್ನು ವಿದ್ಯಾರ್ಥಿಗಳೇ ಸ್ವಚ್ಛಗೊಳಿಸುವ ವಿಡಿಯೋ ವೈರಲ್ ಆಗುತ್ತಿದೆ. ದೈಹಿಕ ಶಿಕ್ಷಣ ಶಿಕ್ಷಕರೊಬ್ಬರು ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಘಟನೆ ನಡೆದಿರುವುದು ಉಡುಪಿಯ ನಿಟ್ಟೂರಿನ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ.@laxmi_hebbalkar pic.twitter.com/7KZepANieE
— eedina.com ಈ ದಿನ.ಕಾಮ್ (@eedinanews) July 5, 2024
ಎಸ್‌ಡಿಎಂಸಿ ಸಹಕಾರದೊಂದಿಗೆ ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲ ಬಳಸಿಕೊಂಡು ಸ್ವಚ್ಛತೆ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿತ್ತು. ಇದೆಲ್ಲದರ ಹೊರತಾಗಿಯೂ ಬುದ್ಧಿವಂತರ ಜಿಲ್ಲೆ ಎನಿಸಿಕೊಂಡ ಉಡುಪಿಯಲ್ಲಿ ವಿದ್ಯಾರ್ಥಿಗಳಿಂದ ಶಾಲೆಯ ಶೌಚಾಲಯವನ್ನು ಸ್ವಚ್ಛಗೊಳಿಸಿರುವ ಘಟನೆಗೆ ಸಾರ್ವಜನಿಕರಿಂದ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗಿದೆ.





