ಉಡುಪಿ | ಸ್ವಚ್ಛತಾ ಹೀ ಸೇವಾ ಅಭಿಯಾನಕ್ಕೆ ಚಾಲನೆ

Date:

ರಾಷ್ಟ್ರಪಿತ ಮಹಾತ್ಮ ಗಾಂಧಿಜೀಯವರ ಜಯಂತಿ ನಿಮಿತ್ತ ಪ್ರತಿ ವರ್ಷ ಅಕ್ಟೋಬರ್ 2 ನೇ ತಾರೀಕನ್ನು ಸ್ವಚ್ಛ ಭಾರತ್ ದಿನವನ್ನಾಗಿ ಆಚರಿಸುತ್ತಿದ್ದು ಪೂರ್ವಾಭಾವಿಯಾಗಿ ಹಲವು ಜಾಗೃತಿ ಕಾರ್ಯಕ್ರಮ ಹಾಗೂ ಸಾಮೂಹಿಕ ಸ್ವಚ್ಛತಾ
ಶ್ರಮದಾನಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ನಗರ ಮತ್ತು ಗ್ರಾಮೀಣ ಪ್ರದೇಶದ ಜನರಲ್ಲಿ ನೈರ್ಮಲ್ಯ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಮಂತ್ರಾಲಯ ಹಾಗೂ ಕೇಂದ್ರ ನಗರ ವಸತಿ ವ್ಯವಹಾರಗಳ ಸಚಿವಾಲಯವು ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ರವರೆಗೆ ಸ್ವಚ್ಛತಾ ಹೀ ಸೇವಾ ಪಾಕ್ಷಿಕ- 2025 ಅಭಿಯಾನವನ್ನು ‘ಸ್ವಚ್ಛೋತ್ಸವ’ ಎಂಬ ಘೋಷವ್ಯಾಕ್ಯದೊಂದಿಗೆ ಆಚರಿಸುತ್ತಿದೆ.

2017 ರಲ್ಲಿ ಆರಂಭವಾದ ಸ್ವಚ್ಛ ಭಾರತ್ ಅಭಿಯಾನವು 11ನೇ ವಾರ್ಷಿಕೋತ್ಸವನ್ನು ಆಚರಿಸುತ್ತಿದ್ದು, ಈ ಯೋಜನೆಯ ಮೈಲಿಗಲ್ಲನ್ನು ಗೌರವಿಸಲು ಹಾಗೂ ಸಾರ್ವಜನಿಕರ ಸಹಭಾಗಿತ್ವ, ಸಮುದಾಯದ ಭಾಗವಹಿಸುವಿಕೆ ಮತ್ತು ಶುಚಿತ್ವದ ಮಹತ್ವದ ಕುರಿತು ವ್ಯಾಪಕವಾದ ಅರಿವು ಮೂಡಿಸಲು ಉಡುಪಿ ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ನೈರ್ಮಲ್ಯ ಅರಿವು, ಸ್ವಚ್ಛತಾ ಶ್ರಮದಾನ, ಬೀಚ್‌ಗಳ ಸ್ವಚ್ಛತೆ, ಜಲ ಮೂಲಗಳ ಸ್ವಚ್ಛತೆ, ಸ್ವಚ್ಛತಾ ಸಿಬ್ಬಂದಿಗಳಿಗೆ ಸಫಾಯಿ ಮಿತ್ರ ಸುರಕ್ಷಾ ಶಿಬಿರಗಳು ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗಿದ್ದು ಸೆ.17 ರಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಸ್ವಚ್ಛತಾ ಪ್ರತಿಜ್ಞಾ ವಿಧಿ ಬೋಧನೆ ಮಾಡುವ ಮೂಲಕ ಸ್ವಚ್ಛತಾ ಹೀ ಸೇವಾ ಪಾಕ್ಷಿಕಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಯಶ್‌ಪಾಲ್ ಸುವರ್ಣ, ಸ್ವಚ್ಛ ಭಾರತ್ ಮಿಷನ್ ಜಿಲ್ಲಾ ನೋಡಲ್ ಅಧಿಕಾರಿ ಡಾ. ಉದಯ ಶೆಟ್ಟಿ, ಜಿ.ಪಂ ಉಪಕಾರ್ಯದರ್ಶಿ ಎಸ್.ಎಸ್ ಕಾದ್ರೋಳಿ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...