ಉಡುಪಿ | ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ; ಶಕ್ತಿ ಯೋಜನೆ ನಿಲ್ಲಲ್ಲ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Date:

ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಗುರುವಾರ ತಮ್ಮ ಗೃಹ ಕಚೇರಿಯಲ್ಲಿ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದ ಲಕ್ಷಾಂತರ ಮಹಿಳೆಯರಿಗೆ ಅನುಕೂಲ ಆಗಿದೆ. ಯಾರೋ ಒಂದಿಬ್ಬರು ಯೋಜನೆ ನಿಲ್ಲಿಸಿ ಎಂದು ಸರ್ಕಾರಕ್ಕೆ ಹೇಳಿದಾಕ್ಷಣ ಯೋಜನೆಯನ್ನು ನಿಲ್ಲಿಸಲು ಸಾಧ್ಯವೇ ಎಂದು ಕೇಳಿದರು.

ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಸಾರಿಗೆ ಸಂಸ್ಥೆಯ ನಿಗಮಗಳು ಒಳ್ಳೆಯ ಹೆಸರು ಪಡೆದಿದ್ದು, ಉತ್ತಮ ಲಾಭದಲ್ಲಿವೆ. ಮಹಿಳೆಯರ ಪಾಲಿಗೆ ಶಕ್ತಿ ಯೋಜನೆ ಸಂಜೀವಿನಿಯಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾದ ಬಳಿಕ ರಾಜ್ಯದ ಮಹಿಳೆಯರು ಬೆಲೆ ಏರಿಕೆ ಬಗ್ಗೆ ತಮ್ಮ ಅಳಲು ತೋಡಿಕೊಂಡಿದ್ದರು. ಮಹಿಳೆಯರಿಗೆ ಅನುಕೂಲ ಮಾಡಿಕೊಡುವ ಸಲುವಾಗಿ ಡಿ.ಕೆ.ಶಿವಕುಮಾರ್ ಅವರು ನಾ ನಾಯಕಿ ಎಂಬ ಕಾರ್ಯಕ್ರಮ ರೂಪಿಸಿದರು. ಬೆಲೆ ಏರಿಕೆ ಬರೆಯನ್ನ ಅಳಿಸುವ ಸಲುವಾಗಿ ಕಾಂಗ್ರೆಸ್ ಪಕ್ಷ ಚುನಾವಣೆಗೂ ಮುನ್ನವೇ ಪಂಚ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತು. ಚುನಾವಣೆಗೂ ಮುನ್ನ ಪ್ರಿಯಾಂಕಾ ಗಾಂಧಿಯವರು ಶಕ್ತಿ ಯೋಜನೆಯನ್ನು ಘೋಷಿಸಿದ್ದರು. ಅದರಂತೆಯೇ ಶಕ್ತಿ ಯೋಜನೆ ಜಾರಿಗೆ ತರಲಾಗಿದೆ ಎಂದು ಸಚಿವರು ಹೇಳಿದರು.

ಡಿ.ಕೆ.ಶಿವಕುಮಾರ್ ಅವರ ಕಲ್ಪನೆಯ ಯೋಜನೆಯೇ ಶಕ್ತಿ ಯೋಜನೆಯಾಗಿದ್ದು, ಇದನ್ನು ನಿಲ್ಲಿಸಲು ಸಾಧ್ಯವೇ ಇಲ್ಲ. ಯೋಜನೆಯನ್ನು ನಿಲ್ಲಿಸಲಾಗುತ್ತದೆ ಎಂಬುದು ಸತ್ಯಕ್ಕೆ ದೂರವಾದ ವಿಷಯ ಎಂದು ಸಚಿವರು ಸ್ಪಷ್ಟಪಡಿಸಿದರು.

ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು

ಮುಂಬರುವ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿದ್ದು, ಸರ್ವೇ ಜನ ಸುಖಿನೋ ಭವಂತು ಅನ್ನುವ ಹಾಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೆಲಸ ಮಾಡುತ್ತಿದ್ದು, ಜನರು ನಮ್ಮನ್ನು ಕೈ ಹಿಡಿಯುವ ವಿಶ್ವಾಸವಿದೆ ಎಂದು ಸಚಿವರು ಹೇಳಿದರು.

ಇದನ್ನು ಓದಿದ್ದೀರಾ? ಗ್ರೌಂಡ್ ರಿಪೋರ್ಟ್‌ | ಕಡಕೋಳ ಗಲಭೆ: ಗ್ರಾಮವನ್ನೇ ತೊರೆದ 70ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು!

ವಕ್ಫ್ ಮಂಡಳಿಗೆ ಜಮೀನು ಬಿಟ್ಟು ಕೊಡುವಂತೆ ರೈತರಿಗೆ ನೋಟೀಸ್ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಸ್ಪಷ್ಟಪಡಿಸಿದ್ದು, ರೈತರ ಒಂದು ಇಂಚೂ ಜಾಗ ಬಿಟ್ಟು ಕೊಡುವುದಿಲ್ಲ ಅಂತ ಹೇಳಿದ್ದಾರೆ. ನಾವು ಪಕ್ಷಾತೀತ, ಜಾತ್ಯತೀತವಾಗಿ ಸರ್ಕಾರ ನಡೆಸುತ್ತೇವೆ. ಇಂಥ ವಿಚಾರಗಳಿಗೆ ಕಿವಿ ಕೊಡಬೇಡಿ. ರೈತರಿಗೆ ನೀಡಿರುವ ನೋಟೀಸ್ ಅನ್ನು ಹಿಂಪಡೆಯುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಕೂಡ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಯಾವುದೇ ಸಂಘಟನೆ, ಜಾತಿಯನ್ನು ಓಲೈಸುವ ಕೆಲಸ ಆಗಬಾರದು ಎಂದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...