ಉಡುಪಿ | ಸಾರಿಗೆ ನೌಕರರ ಒತ್ತಡದ ದುಡಿಮೆಯಿಂದ ಅನಾರೋಗ್ಯ ಹೆಚ್ಚಳ: ಸುರೇಶ್ ಕಲ್ಲಾಗರ

Date:

ಸಾರಿಗೆ ನೌಕರರ ಒತ್ತಡದ ದುಡಿಮೆಯಿಂದ ಅನಾರೋಗ್ಯ ಹೆಚ್ಚಳವಾಗುತ್ತಿದೆ. ಆಟೋರಿಕ್ಷಾ ಚಾಲಕರು ತಮ್ಮ ಕುಟುಂಬಗಳ ನಿರ್ವಹಣೆಗಾಗಿ 12-14 ಘಂಟೆಗಳ ಕಾಲ ದುಡಿಯುವ ಅನಿವಾರ್ಯತೆ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಹೃದಯಾಘಾತದಂತಹ ಅನಾರೋಗ್ಯಗಳು ಕಾಡುತ್ತಿದ್ದು, ಹಿಂದಿನ ಒಂದು ವರ್ಷದಲ್ಲಿ ಸುಮಾರು 11 ಸಾವಿರ ಮಂದಿ ಅಪಘಾತಗಳಲ್ಲಿ ಸಾವನ್ನಪ್ಪಿದ್ದಾರೆ ಎಂದು ಸಿಐಟಿಯು ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದರು.

ಉಡುಪಿ ಜಿಲ್ಲೆಯ ಕುಂದಾಪುರದ ಹಂಚು ಕಾರ್ಮಿಕರ ಭವನದಲ್ಲಿ ನಡೆದ 48ನೇ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿದರು.

“ಕರ್ನಾಟಕ ರಾಜ್ಯ ಸರ್ಕಾರವು ಸಾರಿಗೆ ನೌಕರರಾಗಿರುವ ಆಟೋರಿಕ್ಷಾ ಚಾಲಕರು, ಬಸ್‌ ಚಾಲಕರು, ನಿರ್ವಾಹಕರು, ಕ್ಲೀನರ್, ವಾಹನಗಳನ್ನು ದುರಸ್ತಿ ಮಾಡುವ ಮೆಕ್ಯಾನಿಕ್, ಆಟೋಮೊಬೈಲ್‌ನಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಮೋಟಾರು ವಾಹನ ನೌಕರರ ಕಲ್ಯಾಣ ಮಂಡಳಿಗೆ ರಾಜ್ಯಪಾಲರು ಅಂಕಿತ ಹಾಕಿರುವುದು ಸಿಐಟಿಯು ಹೋರಾಟಕ್ಕೆ ಸಂದ ಜಯವಾಗಿದೆ. ಸರ್ಕಾರ ಕೂಡಲೇ ಸೌಲಭ್ಯಗಳನ್ನು ಜಾರಿ ಮಾಡಬೇಕು” ಎಂದು ಓತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಚನೆ ಆಗಿರುವ ಕಲ್ಯಾಣ ಮಂಡಳಿಯನ್ನು ರಕ್ಷಿಸಿಕೊಳ್ಳಲು ಬಜೆಟ್‌ನಲ್ಲಿಯೂ ಅನುದಾನ ನೀಡಲು ಒತ್ತಾಯಿಸಲು ಸಾರಿಗೆ ಸಂಘಟನೆಗಳನ್ನು ಜಿಲ್ಲೆಯಲ್ಲಿ ಬಲಿಷ್ಠಗೊಳಿಸಬೇಕು. ಸಾರಿಗೆ ನೌಕರರ ಇಂತಹ ಹೋರಾಟಗಳಿಗೆ ಸಿಐಟಿಯು ಸಂಪೂರ್ಣ ಬೆಂಬಲಿಸಿ ಪಾಲ್ಗೊಳ್ಳುತ್ತದೆ” ಎಂದರು.

ಮಹಾಸಭೆಯಲ್ಲಿ ಸಿಐಟಿಯು ಮುಖಂಡ ಎಚ್ ನರಸಿಂಹ, ಸಿಐಟಿಯು ತಾಲೂಕು ಸಂಚಾಲಕ ಚಂದ್ರಶೇಖರ, ವಿ ಸಂಘದ ಗೌರವಾಧ್ಯಕ್ಷ ಎಚ್ ಕರುಣಾಕರ ಸಭೆಯನ್ನುದ್ದೇಶಿಸಿ ಮಾತನಾಡಿದರು.

1.ಆಟೋ, ಟ್ಯಾಕ್ಸಿ, ಗೂಡ್ಸ್ ವಾಹನಗಳಿಗೆ ಅಧಿಕೃತ ನಿಲ್ದಾಣಗಳನ್ನು ಗುರುತಿಸಬೇಕು.
2.ಬೈಂದೂರು-ಕುಂದಾಪುರಕ್ಕೆ ತಲಾ ಎರಡು ಸಿಎನ್‌ಜಿ ಬಂಕ್‌ಗಳನ್ನು ತೆರೆಯಬೇಕು.
3.ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಮೋಟಾರು ವಾಹನ ಕಾಯ್ದೆ-2019 ಹಿಂಪಡೆಯಬೇಕು.
4.ನೂತನ ಕಾರ್ಮಿಕ ಕಾಯ್ದೆ, ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಹಿಂಪಡೆಯಬೇಕು ಎಂಬ ನಿರ್ಣಯಗಳನ್ನು ಮಂಡಿಸಿದರು.

ನೂತನ ಸಮಿತಿ ಆಯ್ಕೆ: ಸಂಘದ ನೂತನ ಅಧ್ಯಕ್ಷರಾಗಿ ರಮೇಶ್ ವಿ, ಪ್ರಧಾನ ಕಾರ್ಯದರ್ಶಿಯಾಗಿ ರಾಜು ದೇವಾಡಿಗ, ಸಂಘಟನಾ ಕಾರ್ಯದರ್ಶಿಯಾಗಿ ಚಂದ್ರಶೇಖರ ವಿ ಸೇರಿದಂತೆ 22 ಮಂದಿ ಪದಾಧಿಕಾರಿಗಳನ್ನೊಳಗೊಂಡ ಸಮಿತಿ ಆಯ್ಕೆ ಮಾಡಿದರು.

ಈ ಸುದ್ದಿ ಓದಿದ್ದೀರಾ? ಗದಗ | ದೊಡ್ಡೂರ ಗ್ರಾಮ ಪಂಚಾಯಿತಿಯಲ್ಲಿ ಹಡಪದ ಅಪ್ಪಣ್ಣ ಜಯಂತಿ ಆಚರಣೆ

ಸಂಘದ ಅಧ್ಯಕ್ಷ ರಮೇಶ್ ವಿ ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ರಾಜು ದೇವಾಡಿಗ ವಾರ್ಷಿಕ ವರದಿ ಮಂಡಿಸಿದರು. ಸಂಘದ ಕೋಶಾಧಿಕಾರಿ ಸಂತೋಷ ಕಲ್ಲಾಗರ ನಿರ್ಣಯ ಮಂಡಿಸಿದರು. ಈ ಸಂದರ್ಭದಲ್ಲಿ ಬ್ರಹ್ಮಾವರ ಆಟೋರಿಕ್ಷಾ ಸಂಘದ ಮುಖಂಡ ಸದಾಶಿವ ಪೂಜಾರಿ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...