ಉಡುಪಿ | ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಕಾರು: ಪ್ರಯಾಣಿಕರಿಗೆ ಗಾಯ

Date:

ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಕೀಯಾ ಶೋರೂಂ ಮುಂಭಾಗದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡ ಘಟನೆ ಶನಿವಾರ ರಾತ್ರಿ ನಡೆದಿದೆ.

ಕಾರಿನಲ್ಲಿ ಮಹಿಳೆಯರೂ ಸೇರಿ ಐದು ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದಿಂದ ಗಾಯಗೊಂಡಿದ್ದರು. ಡಿವೈಡ‌ರ್ ಮೇಲೇರಿದ ಕಾರು ಕ್ರಾಶ್ ಗಾರ್ಡ್ ಗೆ ಢಿಕ್ಕಿ ಹೊಡೆದು ನಿಂತಿದ್ದು, ಕಾರು ಜಖಂ ಹೊಂದಿದೆ.

ಕಾಪು ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಕಾರು ಮಣಿಪಾಲದಿಂದ ಪಡುಬಿದ್ರೆಯತ್ತ ತೆರಳುತ್ತಿತ್ತು. ಗಾಯಗೊಂಡ ಪ್ರಯಾಣಿಕರನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರು ತನ್ನ ವಾಹನದಲ್ಲಿ ಪಡುಬಿದ್ರೆ ಆಸ್ಪತ್ರೆಯತ್ತ ಕರೆದೊಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಪಘಾತದ ಸಂದರ್ಭದಲ್ಲಿ ಈ ರಸ್ತೆ ಮಾರ್ಗದಲ್ಲಿಯೇ ತೆರಳುತ್ತಿದ್ದ ಕಾಪು ಕ್ಷೇತ್ರ ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಕಾಪು ಬಿಜೆಪಿ ಮಂಡಲ ಅಧ್ಯಕ್ಷ ಜಿತೇಂದ್ರ ಶೆಟ್ಟಿಯವರು ಗಾಯಾಳುಗಳ ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯುವಲ್ಲಿ ನೆರವಾದರು. ಅಪಘಾತಕ್ಕೀಡದವರನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಸಹಕಾರದಿಂದ ಆಸ್ಪತ್ರೆಗೆ ಕರೆದೊಯ್ಯಲಾಯಿತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...