ಉಡುಪಿ | ಇಂದು ದೇಶ ರೂಪಿಸಿದ ಮಹನೀಯರ ಬಗ್ಗೆ ತಪ್ಪಾಭಿಪ್ರಾಯ ಜಾಹಿರು ಪಡಿಸಲಾಗುತ್ತಿದೆ : ಸುಧಾಕರ ದೇವಾಡಿಗ

Date:

ಈ ದಿನಮಾನದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ದೇಶವನ್ನು ಕಟ್ಟಿದ ಮಹನೀಯರ ಬಗ್ಗೆ ನಮಗೆ ಗೊತ್ತಿಲ್ಲದೆ ಅವರ ಬಗ್ಗೆ ತಪ್ಪು ಸಂಗತಿಗಳನ್ನು ಪ್ರಸರಿಸುವ ಮಂದಿಯ ಮೋಡಿಗೆ ನಾವು ಬಲಿಯಾಗಿ ಅವರ ಬಗ್ಗೆ ತಪ್ಪು ಅಭಿಪ್ರಾಯವನ್ನು ಹೊಂದಿರುತ್ತೇವೆ. ಹಾಗಾಗಿ ದೇಶದ ಸ್ವತಂತ್ರ ಚಳವಳಿಗಳಲ್ಲಿ ಭಾಗವಹಿಸಿ ದೇಶ ಕಟ್ಟಿದ ಗಾಂಧಿ, ನೆಹರೂ, ವಲ್ಲಭ ಬಾಯಿ ಪಟೇಲ್, ಸುಭಾಸ್ ಚಂದ್ರ ಬೋಸ್ ಇವರ ಬಗ್ಗೆ ನಾವು ತಿಳಿದು ಕೊಳ್ಳ ಬೇಕಾದ ಅನಿವಾರ್ಯತೆ ಹಿಂದಿಗಿಂತಲೂ ಈಗ ಹೆಚ್ಚಿದೆ. ದೇಶದ ಪ್ರಥಮ ಪ್ರಧಾನಿಯಾದ ನೆಹರೂರವರು ಪ್ರಧಾನಿಯಾಗಿ ಈ ದೇಶದ ಆಡಳಿತವನ್ನು ಕೈಗೆತ್ತಿಕೊಂಡಾಗ ಈ ದೇಶ ಬಡತನದಿಂದ ಕೂಡಿತ್ತು. ದೇಶದಲ್ಲಿ ನಿರಾಶ್ರಿತರ ಸಮಸ್ಯೆ ನಿರುದ್ಯೋಗದ ಸಮಸ್ಯೆ ತಾಂಡವ ಮಾಡುತ್ತಿತ್ತು. ಪಂಚವಾರ್ಷಿಕ ಯೋಜನೆಯ ಮೂಲಕ ದೇಶದಲ್ಲಿ ಕೈಗಾರಿಕೆ ಮತ್ತು ಕೃಷಿಗೆ ಪ್ರಾಧಾನ್ಯತೆ ಕೊಟ್ಟು ನೆಹರೂರವರು ದೇಶವನ್ನು ಕಟ್ಟಿದರು. ಹುಟ್ಟಿನಿಂದಲೇ ಅಗರ್ಭ ಶ್ರೀಮಂತರಾದ ನೆಹರೂರವರು ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ ಕೈಗೊಂಡ ಯೋಜನೆಗಳು ಸಮ ಸಮಾಜದ ಕನಸು ಸಾಕಾರಗೊಳಿಸುವಲ್ಲಿ ಮೊದಲ ಹೆಜ್ಜೆ ಇಟ್ಟಿದ್ದವು ಎಂದು ಕೋಟೇಶ್ವರ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಶ್ರೀ ಸುಧಾಕರ್ ದೇವಾಡಿಗ ಅವರು 2017 ಸಾಲಿನ ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇವಾ ಮತ್ತು ಸಾಂಸ್ಕೃತಿಕ ವೇದಿಕೆ ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಸೈಂಟ್ ಪ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಜರಗಿದ ನೆಹರು ಜಯಂತಿ ಮತ್ತು ಮಕ್ಕಳ ದಿನಾಚರಣೆಯ ಪ್ರಯುಕ್ತ ಗ್ರಾಮದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ದೇಶ ಭಕ್ತಿ ಗೀತೆ ಸಮೂಹ ಗಾಯನ ಸ್ಪರ್ಧೆ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ನುಡಿದರು.

ತರತರ್

ಅವರು ಮುಂದುವರೆಯುತ್ತಾ ತನ್ನ ಆಡಳಿತದ ಪ್ರಾರಂಭದಲ್ಲಿ ದೇಶಕ್ಕೆ ಅತ್ಯುತ್ತಮವಾದ ಸಂವಿಧಾನವನ್ನು ನೀಡುವುದರ ಮೂಲಕ ದೇಶದ ಜನತೆಯ ಹಿತ ಕಾಯುವಲ್ಲಿ ಅಪಾರವಾದ ಸಾಧನೆಯನ್ನು ಗೈದರು. ವೈಜ್ಞಾನಿಕ ಶಿಕ್ಷಣ ಕೇಂದ್ರಗಳನ್ನು ಸ್ಥಾಪಿಸಿದರು. ಕೈಗಾರಿಕೆ ಮತ್ತು ಕೃಷಿಗೆ ಒತ್ತುಕೊಟ್ಟು ದೇಶವನ್ನು ಕೊಟ್ಟಲು ಶ್ರಮಿಸಿ ಅದರಲ್ಲಿ ಯಶಸ್ವಿಯಾದರು, ಇಂತಹ ನೆಹರೂರವರುನ್ನು ಸರಿಯಾಗಿ ಅರ್ಥಮಾಡಿಕೊಳ್ಳದೆ ಮತ್ತು ಇವತ್ತಿನ ಯುವ ತಲೆಮಾರಿಗೆ ಸರಿಯಾಗಿ ಅರ್ಥ ಮಾಡಿಸದೆ ದೇಶ ಕಟ್ಟಿದ ಮಹನೀಯರನ್ನು ಅವಮಾನಿಸಲಾಗುತ್ತಿದೆ. ರಾಜಕೀಯ ಕಾರಣಗಳಿಗಾಗಿ ಮಾಡುತ್ತಿರುವ ಈ ತಪ್ಪನ್ನು ಯುವ ಜನರು ಅರ್ಥ ಮಾಡಿಕೊಂಡು ಅವರ ವ್ಯಕ್ತಿತ್ವಕ್ಕೆ ಅಪಚಾರ ಮಾಡುವ ಕೆಲಸವನ್ನು ಬಿಡಬೇಕು ಎಂದರು.

ಅಧ್ಯಕ್ಷತೆಯನ್ನು ವಹಿಸಿದ ಸಂಸ್ಥೆಯ ಅಧ್ಯಕ್ಷರೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರೂ ಆದ ಉದ್ಯಾವರ ನಾಗೇಶ್ ಕುಮಾರ್ ರವರು ಮಾತನಾಡುತ್ತಾ ಎಷ್ಟೋ ಶಾಲೆಗಳಲ್ಲಿ ಮಕ್ಕಳ ದಿನಾಚರಣೆಯನ್ನು ನೆಹರೂರವರ ಜನ್ಮದಿನ ಎಂದು ದಾಖಲಿಸದೆ ಆಚರಿಸಲಾಗುತ್ತಿದೆ. ಅಂದು ನೆಹರೂರವರ ಜನ್ಮದಿನ ಎಂದು ಹೇಳಲು ಅದೇನೋ ಭಯ ಶಿಕ್ಷಕರನ್ನು ಕಾಡುತ್ತಿದೆ. ಇದನ್ನು ಬಿಟ್ಟು ಮಕ್ಕಳ ದಿನಾಚರಣೆ ಎಂದು ನೆಹರೂರವರ ಬಗ್ಗೆ ನೈಜ ಸಂಗತಿಗಳನ್ನು ಹೇಳಿ ಮಕ್ಕಳ ದಿನಾಚರಣೆಯನ್ನು ಆಚರಿಸಬೇಕಾಗಿದೆ. ಇಲ್ಲವಾದಲ್ಲಿ ಮುಂದೊಂದು ದಿನ ದೇಶ ಕಟ್ಟಿದ ಮಹನೀಯರ ಜನ್ಮದಿನವನ್ನು ಆಚರಿಸುವುದು ಅಪರಾಧ ಎಂದೆನಿಸಬಹುದು. ಈ ಬಗ್ಗೆ ಶಿಕ್ಷಕರು ಮತ್ತು ಹೆತ್ತವರು ಎಚ್ಚರ ವಹಿಸಬೇಕು ಎಂದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯ ಅತಿಥಿಗಳಾಗಿ ಆಗಮಿಸಿದ ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸಿಂತಿಯಾ ಪಿರೇರ ಸಂದರ್ಭೋಚಿತವಾಗಿ ಮಾತನಾಡಿದರು. ವೇದಿಕೆಯಲ್ಲಿ ಕೋಶಾಧಿಕಾರಿ ಸತೀಶ್ ಡಿ. ಸಾಲಿಯಾನ್ ಉಪಸ್ಥಿತರಿದ್ದರು

ಪ್ರಾರಂಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಗಿರೀಶ್ ಗುಡ್ಡೆಯಂಗಡಿ ಅವರು ಸ್ವಾಗತಿಸಿದರು. ಕೊನೆಯಲ್ಲಿ ಪ್ರಧಾನ ಕಾರ್ಯದರ್ಶಿ ಸುಹೇಲ್ ರಹಮತ್ತುಲ್ಲ ರವರು ವಂದಿಸಿದರು ಮಾಜಿ ಅಧ್ಯಕ್ಷರುಗಳಾದ ಅನುಪ್ ಕುಮಾರ್ ಮತ್ತು ತಿಲಕ್ ರಾಜ್ ಸಾಲಿಯಾನ್ ಅವರು ಕಾರ್ಯಕ್ರಮ ನಿರ್ವಹಿಸಿದರು

ಪ್ರಾರಂಭದಲ್ಲಿ ಸಂಗೀತಜ್ಞರಾದ ಹೇಮಲತಾ ಎಸ್. ರಾವ್ ಕಸ್ತೂರಿ ಕೆ. ಮತ್ತು ಗಣೇಶ್ ರಾವ್ ಎಲ್ಲೂರು ಸ್ಪರ್ಧೆಯನ್ನು ಉದ್ಘಾಟಿಸಿದರು. ಸ್ಪರ್ಧೆಯಲ್ಲಿ ಗ್ರಾಮದ 9 ಶಾಲೆಗಳ 13 ತಂಡಗಳು ಭಾಗವಹಿಸಿದ್ದವು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...