ಉಡುಪಿ | ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಅಪರಿಚಿತ ಮಹಿಳೆ ರಕ್ಷಣೆ

Date:

ಸಮಾಜಸೇವಕ ನಿತ್ಯಾನಂದ ಒಳಕಾಡುರವರು ಉಡುಪಿಯ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ ಅಪರಿಚಿತ ಮಹಿಳೆಯನ್ನು ರಕ್ಷಿಸಿದ್ದು, ಮಹಿಳೆಗೆ ಮಾನಸಿಕ ಖಿನ್ನತೆ, ಅನಾರೋಗ್ಯದ ಲಕ್ಷಣಗಳು ಕಂಡುಬಂದಿರುವುದರಿಂದ ಒಳಕಾಡು ಅವರೇ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲುಪಡಿಸಿದ್ದಾರೆ.

ರಕ್ಷಿಸಲ್ಪಟ್ಟ ಮಹಿಳೆಯ ಹೆಸರು‌ ಸುಕನ್ಯಾ(40). ಪತಿ ಡಾ. ಹೇಮಂತ್ ರಾಜ್ ದೆಹಲಿ ಎಂದು ಕನ್ನಡದಲ್ಲಿ ಅಸ್ಪಷ್ಟ ಮಾಹಿತಿ ನೀಡಿದ್ದಾರೆ.

ಉಡುಪಿಯ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಮಹಿಳೆಯು ಅಸಹಾಯಕ ಸ್ಥಿತಿಯಲ್ಲಿರುವುದನ್ನು ತಿಳಿದ ರೈಲ್ವೆ ಆರ್‌ಪಿಎಫ್ ಜೀನಾ ಪಿಂಟೋ ಅವರು, ಒಳಕಾಡು ಅವರಿಗೆ ಮಾಹಿತಿ ನೀಡಿದ್ದರು. ಆಸ್ಪತ್ರೆಗೆ ದಾಖಲು ಪ್ರಕ್ರಿಯೆ ನಡೆಸುವಾಗ ಮಣಿಪಾಲ ಪೊಲೀಸ್ ಠಾಣೆಯ‌ ಮಹಿಳಾ ಸಿಬ್ಬಂದಿಗಳಾದ ಸುಮಲತಾ, ವಿದ್ಯಾ ಟಿ ನೆರವಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ ವಿವಿ ಘಟಿಕೋತ್ಸವ; ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಶ್ರೀಗೆ ಗೌರವ ಡಾಕ್ಟರೇಟ್

ಸಂತ್ರಸ್ತ ಮಹಿಳೆಯ ಸಂಬಂಧಿಕರು ಉಡುಪಿ ಜಿಲ್ಲಾ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.‌

ಈಗಾಗಲೇ ಈ ಕರಾವಳಿ ಭಾಗದಲ್ಲಿ ಹಲವು ಅಪರಿಚಿತ ಶವ ಪತ್ತೆ ಪ್ರಕರಣಗಳು, ಅಪರಿಚಿತ ವ್ಯಕ್ತಿಗಳ ರಕ್ಷಣೆಯಂತಹ ಪ್ರಕರಣಗಳನ್ನು ಆಗಾಗ ಕಾಣುತ್ತಲೇ ಇರುತ್ತೇವೆ. ಆದರೆ ಸತ್ತಂತಹ ಅಪರಿಚಿತ ವ್ಯಕ್ತಿಗಳ ತನಿಖೆಯಾಗಿದೆಯೇ, ವಾರಸುದಾರರು ಪತ್ತೆಯಾಗಿದ್ದಾರೆಯೇ, ಅಥವಾ ಯಾವ ಕಾರಣಗಳಿಂದಾಗಿ ಇಂತಹ ಪ್ರಕರಣಗಳು ಹೆಚ್ಚುತ್ತಿವೆ ಎಂಬ ಪ್ರಶ್ನೆಗಳು ಪ್ರಶ್ನೆಗಳಾಗಿವೇ ಉಳಿದಿವೆ. ಸ್ಥಳೀಯ ಜನಪ್ರತಿನಿಧಿಗಳು, ಸ್ಥಳೀಯ ಆಡಳಿತ ಇಂತಹ ಪ್ರಕರಣಗಳನ್ನು ತನಿಖೆ ಮಾಡಿ, ಉತ್ತರ ನೀಡಲು ಮುಂದಾಗಬೇಕು. ಜತೆಗೆ ಮೃತಪಟ್ಟವರ ಹಿನ್ನೆಲೆ ತಿಳಿದು ಅವರು ಹೊರಗಿನಿಂದ ಬರುವ ಕಾರ್ಮಿಕರು ಎಂದಾದರೆ, ನಿರ್ಗತಿಕ ಕೇಂದ್ರಗಳ ಕುರಿತು ಮಾಹಿತಿ ನೀಡಿ ಅಂತಹವರಿಗೆ ಅಲ್ಲಿ ವ್ಯವಸ್ಥೆ ಮಾಡಬಹುದೇ ಎಂಬುದನ್ನು ಕಂಡುಕೊಳ್ಳುವುದು ಒಳಿತಾಗಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...