ಉಡುಪಿ | ಕಾಲುಬಾಯಿ ಲಸಿಕೆ ಕಾರ್ಯಕ್ರಮ: ಶೇ.100ರಷ್ಟು ಪ್ರಗತಿ ಸಾಧಿಸಲು ಜಿಲ್ಲಾಧಿಕಾರಿ ಕರೆ

Date:

ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಆರನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಪ್ರತಿಶತಃ ನೂರರಷ್ಟು ಪ್ರಗತಿ ಸಾಧಿಸಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ತಿಳಿಸಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಾನುವಾರು ಕಾಲುಬಾಯಿ ಜ್ವರ ರೋಗ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಜಾನುವಾರುಗಳಲ್ಲಿ ಕಂಡುಬರುವ ಕಾಲುಬಾಯಿ ಜ್ವರ ರೋಗ ನಿಯಂತ್ರಣಕ್ಕೆ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಅಕ್ಟೋಬರ್ 21ರಿಂದ ನವೆಂಬರ್ 20ರವರೆಗೆ ಹಮ್ಮಿಕೊಳ್ಳಲಾಗುತ್ತಿದ್ದು, ಜಾನುವಾರುಗಳಿಕೆ ಲಸಿಕೆ ಹಾಕಿಸುವುದರೊಂದಿಗೆ, ಯಾವುದೇ ಜಾನುವಾರುಗಳು ಲಸಿಕೆಯಿಂದ ಬಿಟ್ಟುಹೋಗದಂತೆ ನೋಡಿಕೊಳ್ಳಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಲುಬಾಯಿ ಲಸಿಕಾ ಕಾರ್ಯಕ್ರಮದ ಬಗ್ಗೆ ನಗರ, ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಸ ವಿಲೇವಾರಿ ವಾಹನಗಳಲ್ಲಿ ಪ್ರಚಾರ ಕೈಗೊಂಡು, ಸಾರ್ವಜನಿಕರಿಗೆ ಲಸಿಕಾ ಕಾರ್ಯಕ್ರಮದ ಕುರಿತು ಅರಿವು ಮೂಡಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಪಶು ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಮನೆಗಳಿಗೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಸಹಕಾರ ನೀಡುವಂತೆ ತಿಳಿಸಿದ ಅವರು, ಹೆಚ್ಚಿನ ಸಂಖ್ಯೆಯ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಬೇಕು ಎಂದರು.

ಐದನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಕಾರ್ಯಕ್ರಮದಲ್ಲಿ ಜಿಲ್ಲೆಯ 2,15,401 ಜಾನುವಾರುಗಳ ಗುರಿ ನಿಗದಿಪಡಿಸಿ, 2,08,558 ಜಾನುವಾರುಗಳಿಗೆ ಲಸಿಕೆ ಹಾಕಿಸಿ, ಶೇ. 96.82 ರಷ್ಟು ಪ್ರಗತಿ ಸಾಧಿಸಿದ್ದು, ಆರನೇ ಸುತ್ತಿನಲ್ಲಿಯೂ ಸಹ ಹೆಚ್ಚಿನ ಸಂಖ್ಯೆಯ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಅವುಗಳ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದರು.

ಇದನ್ನು ಓದಿದ್ದೀರಾ? ಆಹಾರಕ್ಕೆ ಮೂತ್ರ ಬೆರೆಸುತ್ತಿದ್ದ ವಿಕೃತ ಮಹಿಳೆ; ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಮಾಧ್ಯಮಗಳು

ಈ ಸಂದರ್ಭದಲ್ಲಿ ಕಾಲುಬಾಯಿ ರೋಗದ ಕುರಿತ ಮಾಹಿತಿಯುಳ್ಳ ಭಿತ್ತಿಪತ್ರವನ್ನು ಬಿಡುಗಡೆ ಮಾಡಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಎಂ.ಸಿ ರೆಡ್ಡಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಮಹಿಳಾ ಮತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ತಾಲೂಕು ಮುಖ್ಯ ಪಶುವೈದ್ಯಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...