ಉಡುಪಿ | ಬೀದಿ ಪಾಲಾದ ಬಿಎಸ್ಸಿ ಪದವೀಧರ ಮಾನಸಿಕ ಅಸ್ವಸ್ಥನ ರಕ್ಷಣೆ; ಸೂಚನೆ

Date:

ಕಳೆದ ಒಂದೂವರೆ ವರ್ಷದಿಂದ ಉಡುಪಿ ನಗರದಲ್ಲಿ ಮನ ಬಂದಂತೆ ತಿರುಗಾಡುತ್ತಾ, ಕೂಗುತ್ತಾ ಕೆಲವೊಂದು ಬಾರಿ ಭಯದ ವಾತಾವರಣ ಸೃಷ್ಟಿಸಿ, ಕೊಳಕು ಬಟ್ಟೆ ಕ್ಷೌರ ಸ್ನಾನವನ್ನು ಮಾಡದೆ ಬೀದಿ ಪಾಲಾದ ಬಿಎಸ್ಸಿ ಪದವೀಧರ ವ್ಯಕ್ತಿಯನ್ನು ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ ಮಂಜೇಶ್ವರದ ದೈಗೋಳಿ ಯ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರ ಶ್ರೀ ಸಾಯಿ ಸೇವಾಶ್ರಮ ಕ್ಕೆ ಚಿಕಿತ್ಸೆ ಹಾಗೂ ಪುನರ್ವಸತಿಗೆ ದಾಖಲಿಸಿದ ಮಾನವೀಯ ಘಟನೆ ನಡೆದಿದೆ.

ವ್ಯಕ್ತಿ ತನ್ನ ಹೆಸರು ಪ್ರಶಾಂತ್ ಸಾಲಿಯನ್ (40) ಮಲ್ಪೆ ಪಂದುಬೆಟ್ಟುವಿನ ಮೊಗವೀರ ಸಮಾಜದವರು ಎಂಬ ಮಾಹಿತಿ ನೀಡಿದ್ದಾರೆ. ಬಿಎಸ್ಸಿ ಪದವೀಧರರಾದ ಇವರು ಹಲವು ಭಾಷೆಗಳಲ್ಲಿ ನಿರರ್ಗಳವಾಗಿ ಮಾತನಾಡುತ್ತಿದ್ದು ಪ್ರತಿಭಾವಂತ ವ್ಯಕ್ತಿಯಾಗಿದ್ದಾರೆ. ಯಾವುದೋ ವಿಷಯಕ್ಕೆ ಮನನೊಂದು ಮಾನಸಿಕ ಅಸ್ವಸ್ತರಾಗಿ ಚಿಕಿತ್ಸೆ ಪಡೆಯದೆ ಬೀದಿ ಪಾಲಾಗಿ ಬದುಕು ನಡೆಸುತ್ತಿದ್ದು ಬಹಳಷ್ಟು ಸಾರ್ವಜನಿಕರು ಕೂಡ ಇವರ ಬಗ್ಗೆ ಅನುಕಂಪ ಹೊಂದಿದ್ದರು.

ಸಾರ್ವಜನಿಕರ ವಿನಂತಿಯ ಮೇರೆಗೆ ವಿಶು ಶೆಟ್ಟಿ ರಕ್ಷಿಸಿ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಆಶ್ರಮದ ಮುಖ್ಯಸ್ಥರಲ್ಲಿ ವಿಶು ಶೆಟ್ಟಿ ಮಾಡಿದ ಮನವಿಗೆ ಅನುಮತಿ ನೀಡಿದ್ದು ತನ್ನ ವಾಹನದಲ್ಲಿ ಆಶ್ರಮಕ್ಕೆ ದಾಖಲು ಮಾಡಿದ್ದಾರೆ ಮತ್ತು ಸಂಬಂಧಪಟ್ಟವರು ಹಾಗೂ ಅಧಿಕಾರಿಗಳು ಶ್ರೀ ಸಾಯಿ ಸೇವಾಶ್ರಮ ಸಂಪರ್ಕಿಸುವಂತೆ ವಿನಂತಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ನಗರ ಠಾಣೆಗೆ ಮಾಹಿತಿ ನೀಡಲಾಗಿದೆ. ರಕ್ಷಣಾ ಕಾರ್ಯದಲ್ಲಿ ಸಾಮಾಜಿಕ ಕಾರ್ಯಕರ್ತರಾದ ಉದ್ಯಾವರದ ಹರೀಶ್ ರಾಮದಾಸ್ ಪಾಲನ್ ಹಾಗೂ ಸಂದೇಶ್ ಉಚ್ಚಿಲ್ ಸಹಕರಿಸಿದ್ದಾರೆ.

ಸಮಾಜದಲ್ಲಿ ಬಹಳಷ್ಟು ಮಾತೆಯರು ಮಕ್ಕಳ ಮಾನಸಿಕ ತೊಂದರೆಯಿಂದ ಅಸಹಾಯಕರಾಗಿ ಬದುಕಲಾರದ ಬದುಕಿನಲ್ಲಿ ಬದುಕುತ್ತಿದ್ದಾರೆ. ಅದರಲ್ಲಿ‌ಬಹಳಷ್ಟು ಜನ ಆರ್ಥಿಕವಾಗಿಯೂ ಕಷ್ಟದಲ್ಲಿದ್ದು , ಜನ ಬಲವೂ ಇಲ್ಲದೇ ಸಾವಿಗೆ ಶರಣಾಗುವ ಹಂತದಲ್ಲಿದ್ದಾರೆ. ಈ ಬಗ್ಗೆ ಹಲವು ಬಾರಿ ಸರಕಾರ ಹಾಗೂ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಸ್ಪಂದನೆ ಇಲ್ಲ. ಸಂಬಂಧಪಟ್ಟ ಅಧಿಕಾರಿಗಳು ಸ್ವಲ್ಪ ಯೋಚಿಸಿ ಎಂದು ಸಾಮಾಜ ಸೇವಕ ವಿಶು ಶೆಟ್ಟಿ ಹೇಳಿದ್ದಾರೆ‌

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...