ಉಡುಪಿ | ಸ್ವಯಂಪ್ರೇರಿತವಾಗಿ ರಕ್ತದಾನ ಮಾಡುವ ಅಭ್ಯಾಸ ಬೆಳೆಸಿಕೊಳ್ಳಿ : ಎಡಿಸಿ ಆಬೀದ್‌ ಗದ್ಯಾಳ

Date:

ಮುಸ್ಲಿಂ ವೆಲ್‌ಫೇರ್ ಎಸೋಸಿಯೇಶನ್ (ರಿ.) ಮತ್ತು ಬ್ಲಡ್ ಸೆಂಟರ್ ಕೆ.ಎಂ.ಸಿ. ಮಣಿಪಾಲ ಸಹಯೋಗದಲ್ಲಿ ಇಂದು ಉಡುಪಿ ಜಾಮೀಯ ಮಸೀದಿಯಲ್ಲಿ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಆಬೀದ್‌ ಗದ್ಯಾಳ, ರಕ್ತದಾನವು ಮಾನವ ಜೀವ ಉಳಿಸುವ ಅತ್ಯಂತ ಶ್ರೇಷ್ಠ ದಾನ. ಇಂತಹ ಕಾರ್ಯಗಳು ಸಮಾಜದಲ್ಲಿ ಮಾನವೀಯತೆ, ಸಹಕಾರ ಮತ್ತು ಬಾಂಧವ್ಯವನ್ನು ವೃದ್ಧಿಸುತ್ತವೆ. ಒಂದು ರಕ್ತದ ಹನಿಯು ಅನೇಕ ಜೀವ ಉಳಿಸಬಲ್ಲದು. ಎಲ್ಲರೂ ಸ್ವಯಂಪ್ರೇರಿತವಾಗಿ ರಕ್ತದಾನ ಮಾಡುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಮುಸ್ಲೀಮ್ ವೆಲ್ಫೇರ್ ಅಸೋಸಿಯೇಷನ್‌ನಿಂದ ಇಂತಹ ಸಾಮಾಜಿಕ ಸೇವಾ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿರುವುದು ಪ್ರಶಂಸನೀಯ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಇಂತಹ ಸಮಾಜಮುಖಿ ಕಾರ್ಯಗಳು ನಡೆಯಲಿ ಎಂದು ಹಾರೈಸಿದರು.

WhatsApp Image 2025 11 11 at 1.29.11 AM

ಕೆಎಂಸಿ ಮಣಿಪಾಲದ ಪ್ರೊಫೆಸರ್ ಮತ್ತು ಬ್ಲಡ್ ಸೆಂಟರ್ ವಿಭಾಗದ ಮುಖ್ಯಸ್ಥರಾದ ಡಾ| ಶಮೀ ಶಾಸ್ತ್ರೀ ಮಾತನಾಡಿ, ರಕ್ತದಾನ ಕೇವಲ ಒಬ್ಬನ ಜೀವ ಉಳಿಸುವ ಕಾರ್ಯವಲ್ಲ, ಆತನ ಆರೋಗ್ಯಕ್ಕೂ ಪ್ರಯೋಜನಕಾರಿ. ನಿಯಮಿತ ರಕ್ತದಾನದಿಂದ ದೇಹದಲ್ಲಿ ಹೊಸ ರಕ್ತಕಣಗಳ ಉತ್ಪಾದನೆ ಹೆಚ್ಚುತ್ತದೆ, ರಕ್ತದ ಒತ್ತಡ ಸಮತೋಲನದಲ್ಲಿರುತ್ತದೆ, ಮತ್ತು ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಯಲು ಸಹಾಯಕವಾಗುತ್ತದೆ. ರಕ್ತದಾನದಿಂದ ಶರೀರದ ಚೈತನ್ಯ ಹೆಚ್ಚುತ್ತದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 11 11 at 1.29.10 AM 1

ಉಡುಪಿ ಜಾಮಿಯಾ ಮಸೀದಿಯ ಅಧ್ಯಕ್ಷರಾದ ರಿಯಾಝ್ ಅಹಮದ್, ಸಾಮಾಜಿಕ ಕಾರ್ಯಕರ್ತರಾದ ಮುನೀರ್ ಕಲ್ನಾಡಿ ಮುಸ್ಲಿಂ ವೆಲ್‌ಫೇರ್ ಎಸೋಸಿಯೇಶನ್ ಅಧ್ಯಕ್ಷರಾದ ಮುನೀರ್ ಮುಹಮ್ಮದ್ ವೇದಿಕೆಯಲ್ಲಿ ಉಪಸ್ಥತರಿದ್ದರು. ಪ್ರಧಾನ ಕಾರ್ಯದರ್ಶಿ ವಿ. ಎಸ್. ಉಮರ್ ಪ್ರಾಸ್ತವಿಕವಾಗಿ ಮಾತನಾಡಿದರು. ರಿಯಾಜ್‌ ಕುಕ್ಕಿಕಟ್ಟೆ ಧನ್ಯವಾದವಿತ್ತರು, ಇಕ್ಬಾಲ್‌ ಮನ್ನ ಕಾರ್ಯಕ್ರಮ ನಿರೂಪಿಸಿದರು.

WhatsApp Image 2025 11 11 at 1.29.10 AM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...