ಉಡುಪಿ | ಡಿಕ್ಕಿ ಹೊಡೆದು ದ್ವಿಚಕ್ರ ವಾಹನದ ಮೇಲೆಯೇ ಬಿದ್ದ ಮಣ್ಣು ತುಂಬಿದ್ದ ಲಾರಿ: ಸ್ಕೂಟಿಯಲ್ಲಿದ್ದ ಮಹಿಳೆಯ ರಕ್ಷಣೆ

Date:

ಸ್ಕೂಟಿಯಲ್ಲಿ ಸಾಗುತ್ತಿದ್ದ ಮಹಿಳೆಗೆ ಮಣ್ಣು ತುಂಬಿದ ಲಾರಿಯೊಂದು ಡಿಕ್ಕಿ ಹೊಡೆದು ಆಕೆಯ ಮೇಲೆಯೇ ಓರೆಯಾಗಿ ಮಗುಚಿ ಬಿದ್ದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರು ಉಪ್ರಳ್ಳಿಯಲ್ಲಿ ಸಂಭವಿಸಿದೆ.

ಮಣ್ಣಿನಡಿ ಸಿಲುಕಿದ್ದ ಉಪ್ರಳ್ಳಿ ಮೂಲದ ಆರತಿ ಶೆಟ್ಟಿ ಎಂಬ ಮಹಿಳೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಣ್ಣು ತುಂಬಿದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿ ಹೋಗುತ್ತಿದ್ದ ಆರತಿ ಅವರ ಸ್ಕೂಟರ್​ಗೆ ಡಿಕ್ಕಿ ಹೊಡೆದಿದ್ದಲ್ಲದೇ ಪಲ್ಟಿಯಾಗಿ ಮಗುಚಿ ಬಿದ್ದಿದೆ. ಲಾರಿಯಲ್ಲಿದ್ದ ಮಣ್ಣು ಮಹಿಳೆ ಮೇಲೆ ಬಿದ್ದಿದ್ದರಿಂದ ಸಿಲುಕಿಕೊಂಡಿದ್ದರು. ಈ ವೇಳೆ ಘಟನಾ ಸ್ಥಳದಲ್ಲಿದ್ದ ಸಮಾಜ ಸೇವಕ ಕೋಡಿ ಅಶೋಕ ಪೂಜಾರಿ ಎಂಬುವವರು ಮಹಿಳೆಯನ್ನು ಕೂಡಲೇ ಮಣ್ಣಿನಿಂದ ರಕ್ಷಣೆ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಗ್ರೌಂಡ್ ರಿಪೋರ್ಟ್‌ | ಕಡಕೋಳ ಗಲಭೆ: ಗ್ರಾಮವನ್ನೇ ತೊರೆದ 70ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು!

ಅಶೋಕ್ ಪೂಜಾರಿ ತನ್ನ ಕೈಗಳಿಂದಲೇ ಮಣ್ಣನ್ನು ತೆಗೆದು ಮಹಿಳೆಯನ್ನು ರಕ್ಷಿಸಿ ನಂತರ ಸ್ಥಳೀಯರ ಸಹಕಾರದಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಿದರು. ಕ್ಷಿಪ್ರ ಸಮಯದಲ್ಲಿ ಮಹಿಳೆಯನ್ನು ರಕ್ಷಿಸಿ ಜೀವ ಉಳಿಸಿದ ಸಮಾಜ ಸೇವಕ ಕೋಡಿ ಅಶೋಕ್ ಪೂಜಾರಿ ಅವರಿಗೆ ಸಾರ್ವಜನಿಕರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

WhatsApp Image 2024 10 31 at 3.59.13 PM
Irshad Venoor
Website |  + posts

ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಇರ್ಷಾದ್ ವೇಣೂರು
ಇರ್ಷಾದ್ ವೇಣೂರುhttps://eedina.com
ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...