ಉಡುಪಿ | ಕ್ಯಾನ್ಸರ್ ವಿರುದ್ಧ ಜಾಗೃತಿ ಅವಶ್ಯ: ಶಾಸಕ ಯಶ್ ಪಾಲ್ ಸುವರ್ಣ

Date:

ಕ್ಯಾನ್ಸರ್ ಮಾರಣಾಂತಿಕ ರೋಗವಾಗಿದ್ದು, ರೋಗದ ಆರಂಭಿಕ ಪತ್ತೆಯಿಂದ ಅನೇಕ ಜೀವಗಳನ್ನು ಉಳಿಸಬಹುದು. ಅನಾರೋಗ್ಯಕರ ಜೀವನಶೈಲಿಯಿಂದ ಕ್ಯಾನ್ಸರ್ ಬರುವ ಸಂಭವ ಹೆಚ್ಚು. ರೋಗ ಹಾಗೂ ಆರಂಭಿಕ ಚಿಕಿತ್ಸೆ ಬಗ್ಗೆ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿದಾಗ ಕ್ಯಾನ್ಸರ್ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ತಗ್ಗಿಸಿ ಆರೋಗ್ಯಯುಕ್ತ ಜೀವನವನ್ನು ನಮ್ಮದಾಗಿಸಿಕೊಳ್ಳಬಹುದು ಎಂದು ಶಾಸಕ ಯಶ್‌ಪಾಲ್ ಸುವರ್ಣ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಆದರ್ಶ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಆದರ್ಶ ಗ್ರೂಪ್ ಆಫ್ ಇನ್‌ಸ್ಟಿಟ್ಯೂಟ್, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಸಾಂಕ್ರಾಮಿಕ ರೋಗಗಳ ಘಟಕ ಎನ್‌ಸಿಡಿ ಉಡುಪಿ, ಜಿಲ್ಲಾ ಆಸ್ಪತ್ರೆ ಎನ್‌ಸಿಡಿ ವಿಭಾಗ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ, ಉಡುಪಿ ಕಾಲೇಜ್ ಆಫ್ ನರ್ಸಿಂಗ್, ಸಿಎಸ್‌ಐ ಲೊಂಬಾರ್ಡ ಮೆಮೋರಿಯಲ್ ಕಾಲೇಜ್ ಆಫ್ ನರ್ಸಿಂಗ್, ನ್ಯೂ ಸಿಟಿ ಕಾಲೇಜ್ ಆಫ್ ನರ್ಸಿಂಗ್ ಉಡುಪಿ ಇವರ ಸಹಯೋಗದಲ್ಲಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಡೆದ ವಿಶ್ವ ಕ್ಯಾನ್ಸರ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣ, ಪ್ರವಾಸೋದ್ಯಮ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಜಿಲ್ಲೆಯು ಆರೋಗ್ಯ ಸೇವೆಯಲ್ಲಿಯೂ ಇತರ ಜಿಲ್ಲೆಗಳಿಗೆ ಮಾದರಿಯಾಗಿದೆ. ಜಿಲ್ಲೆಯ ವೈದ್ಯರು ಗುಣಮಟ್ಟದ ಆರೋಗ್ಯ ಸೇವೆ ನೀಡುವ ಮೂಲಕ ವಿಶ್ವದಾದ್ಯಂತ ಹೆಸರುವಾಸಿಯಾಗಿದ್ದಾರೆ. ತಮ್ಮ ಕರ್ತವ್ಯದ ಜೊತೆಗೆ ಸಮಾಜ ಸೇವೆಯಲ್ಲಿ ನಿರತರಾಗಿರುವ ವೈದ್ಯಾಧಿಕಾರಿಗಳು ಅಸಾಂಕ್ರಾಮಿಕ ರೋಗಗಳ ಬಗ್ಗೆ ಜನಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ. ಜನರೂ ಕೂಡಾ ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಪೋಷಕಾಂಶಯುಕ್ತ ಆಹಾರ ಸೇವನೆ ಮತ್ತು ದಿನನಿತ್ಯ ಕನಿಷ್ಟ 2 ಗಂಟೆ ವ್ಯಾಯಾಮ ಮಾಡುವ ಜೊತೆಗೆ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು ಎಂದ ಅವರು, ನೂತನ ಜಿಲ್ಲಾಸ್ಪತ್ರೆಯ ಕಾಮಗಾರಿಗಳು ಶೇ.70 ರಷ್ಟು ಪೂರ್ಣಗೊಂಡಿದ್ದು, ಬಾಕಿ ಉಳಿದಿರುವ ಕಾಮಗಾರಿಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಲು ಪ್ರಯತ್ನಿಸಲಾಗುತ್ತಿದೆ. ಆಸ್ಪತ್ರೆಯು ಸಾರ್ವಜನಿಕರಿಗೆ ಮುಕ್ತವಾದಲ್ಲಿ ಜಿಲ್ಲೆಯ ಜನರಿಗೂ ಗುಣಮಟ್ಟದ ಆರೋಗ್ಯ ಸೇವೆ ಲಭ್ಯವಾಗಲಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಂಸಿಎಚ್ ಆಸ್ಪತ್ರೆ ಸ್ತ್ರೀ ರೋಗ ತಜ್ಞೆ ಡಾ. ಕವಿತಾ ಹಾಗೂ ಆದರ್ಶ ಆಸ್ಪತ್ರೆ ಕ್ಯಾನ್ಸರ್ ತಜ್ಞ ಡಾ.ಅನಂತ ಎಸ್.ಮಠದ್ ಕ್ಯಾನ್ಸರ್ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ಕೀಮೋ ಚಿಕಿತ್ಸೆ ಫಲಾನುಭವಿಗಳಿಗೆ ಆಹಾರದ ಕಿಟ್ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ಜನ್ ಡಾ. ಹೆಚ್ ಅಶೋಕ್, ಜಿಲ್ಲಾ ಆಸ್ಪತ್ರೆ ನಿವಾಸಿ ವೈದ್ಯಾಧಿಕಾರಿ ಡಾ ವಾಸುದೇವ್, ಜಿಲ್ಲಾ ಅಸಾಂಕ್ರಾಮಿಕ ರೋಗಗಳ ಕಾರ್ಯಕ್ರಮ ಅಧಿಕಾರಿ ಡಾ. ಲತಾ ನಾಯಕ್, ಆದರ್ಶ ಆಸ್ಪತ್ರೆ ಮುಖ್ಯಸ್ಥ ಡಾ. ಜಿ ಎಸ್ ಚಂದ್ರಶೇಖರ್, ಫುಡ್ ಫಾರ್ ದ ಹಂಗ್ರಿ ಫೌಂಡೇಶನ್ ನ ನಿಧಿ, ಐಎಂಎ ಅಧ್ಯಕ್ಷ ಡಾ. ಅಶೋಕ್ ಕುಮಾರ್, ಕಾರ್ಯದರ್ಶಿ ಡಾ. ಮಾನಸ ಈ.ಆರ್ ಉಪಸ್ಥಿತರಿದ್ದರು.

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸತೀಶ್ ರಾವ್ ಸ್ವಾಗತಿಸಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಚಂದ್ರಕಲಾ ನಿರೂಪಿಸಿ, ಶಶಿಧರ್ ಹೆಚ್ ವಂದಿಸಿದರು.

ಕಾರ್ಯಕ್ರಮದ ನಂತರ ಜಿಲ್ಲಾ ಆಸ್ಪತ್ರೆ ಆವರಣದಿಂದ ಬ್ರಹ್ಮಗಿರಿ ಸರ್ಕಲ್ ಸುತ್ತುವರೆದು ಪುನಃ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಸಮಾಪನಗೊಂಡ ಕ್ಯಾನ್ಸರ್ ಜಾಗೃತಿ ಜಾಥಾಕ್ಕೆ ಜಿಲ್ಲಾ ಸರ್ಜನ್ ಡಾ. ಹೆಚ್ ಅಶೋಕ್ ಬಲೂನ್ ಹಾರಿ ಬಿಡುವುದರ ಮೂಲಕ ಚಾಲನೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...