ಉಡುಪಿ | ಲಿಂಗತ್ವ ಅಲ್ಪಸಂಖ್ಯಾತರಿಗೆ ಯಕ್ಷಗಾನ ಕೌಶಲ್ಯ ತರಬೇತಿ

Date:

ಕುಟುಂಬ ಮತ್ತು ಸಮಾಜದಿಂದ ದೂರ ಉಳಿದಿರುವ ಲಿಂಗತ್ವ ಅಲ್ಪಸಂಖ್ಯಾತರು, ಇಷ್ಟವಿಲ್ಲದಿದ್ದರೂ ಜೀವನ ನಿರ್ವಹಣೆಗಾಗಿ ಭಿಕ್ಷಾಟನೆ ಮತ್ತಿತರ ಚಟುವಟಿಗಳಲ್ಲಿ ಅನಿವಾರ್ಯವಾಗಿ ತೊಡಗಿಸಿಕೊಂಡಿದ್ದಾರೆ. ಅವರಿಗೆ ಕೌಶಲ್ಯಾಬಿವೃಧ್ದಿ ತರಬೇತಿಗಳನ್ನು ನೀಡಿ, ಉತ್ತಮ ಬದುಕು ಕಟ್ಟಿಕೊಳ್ಳಲು ನೆರವು ನೀಡುವ ಉದ್ದೇಶದಿಂದ ‘ಯಕ್ಷಗಾನ ಕೌಶಲ್ಯ ತರಬೇತಿ’ ಶಿಬಿರ ನಡೆಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ತಿಳಿಸಿದ್ದಾರೆ.

ಶಿಬಿರ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಉಡುಪಿ ಜಿಲ್ಲಾಡಳಿತ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆ ಜೊತೆಗೂಡಿ ಶಿಬಿರ ಆಯೋಜಿಸಿದ್ದವು. ಜಿಲ್ಲೆಯಲ್ಲಿರುವ ಆಸಕ್ತ 19 ಮಂದಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಕಾರ್ಕಳದಲ್ಲಿ ಒಂದು ತಿಂಗಳು (ಜೂನ್ 5ರಿಂದ ಜುಲೈ 4) ಯಕ್ಷಗಾನ ತರಬೇತಿ ನೀಡಲಾಗಿದೆ. ಜೊತೆಗೆ, ಶಿಬಿರಾರ್ಥಿಗಳಿಗೆ 10,000 ರೂ. ಮಾಸಿಕ ಸ್ಟೈಪೆಂಡ್‌ ಕೂಡ ನೀಡಲಾಗಿದೆ” ಎಂದು ಹೇಳಿದ್ದರೆ.

“ಯಕ್ಷಗಾನ ನೃತ್ಯ, ಅಭಿನಯ, ಸಂಭಾಷಣೆಯ ಕುರಿತು ತರಬೇತಿ ನೀಡಲಾಗಿದೆ. ಅಲ್ಲದೆ, ‘ಶ್ವೇತ ಕುಮಾರ ಚೆರಿತ್ರೆ’ ಎಂಬ ಪೌರಾಣಿಕ ಯಕ್ಷಗಾನ ಪ್ರಸಂಗವನ್ನು ಶಿಬಿರಾರ್ಥಿಗಳು ಪ್ರದರ್ಶನ ಮಾಡಿದ್ದಾರೆ. ಶಿಬಿರಾರ್ಥಿಗಳಿಗೆ ಯಕ್ಷಗಾನ ತರಬೇತಿಯ ನಾಟ್ಯ ಗುರು ಸುಧೀರ್ ಉಪ್ಪೂರು ಮತ್ತು ವಿಜಯಗಾಣಿಗ ಬೀಜಮಕ್ಕಿ, ಚಂಡೆ ಶಶಿಕುಮಾರ್, ಮದ್ದಳೆ ನವೀನ್ ಕುಮಾರ್ ಮತ್ತು ಭಾಗವತಿಕೆಯಲ್ಲಿ ಸುದೀಪ್ ಚಂದ್ರ ಶೆಟ್ಟಿ ತರಬೇತಿ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಕ್ಷಗಾನ ತರಬೇತಿ ಪಡೆದಿರುವ ಈ ಲಿಂಗತ್ವ ಅಲ್ಪಸಂಖ್ಯಾತರು ಯಕ್ಷಗಾನ ಪ್ರಸಂಗಗಳಲ್ಲಿ ಸ್ವತಂತ್ರವಾಗಿ ವೇಷದಾರಿಗಳಾಗಿ ಅಭಿನಯಿಸುವ ಸಾಮರ್ಥ್ಯವನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಜೀವನ ನಿರ್ವಹಣೆಗಾಗಿ ಆರ್ಥಿಕವಾಗಿ ಸಂಪಾದನೆ ಮಾಡಲು ಹಾಗೂ ತಮ್ಮದೇ ತಂಡಗಳನ್ನು ರಚಿಸಿಕೊಂಡು ಸ್ವತಂತ್ರವಾಗಿ ಕಾರ್ಯಕ್ರಮಗಳನ್ನು ನೀಡಲು ಸಮರ್ಥರಾಗಿದ್ದಾರೆ. ಹೊರ ಜಿಲ್ಲೆ, ರಾಜ್ಯ, ದೇಶ, ವಿದೇಶಗಳಲ್ಲಿ ತಮ್ಮ ಕಲೆಯನ್ನು ಪ್ರದರ್ಶಿಸಲು ಉತ್ಸುಕರಾಗಿರುವ ಅವರಿಗೆ ಸೂಕ್ತ ಪ್ರೋತ್ಸಾಹ, ಬೆಂಬಲ ಮತ್ತು ಅವಕಾಶಗಳನ್ನು ನೀಡುವ ಮಹತ್ತರ ಜವಾಬ್ದಾರಿ ಇಡೀ ಸಮಾಜದ್ದಾಗಿದೆ” ಎಂದು ಹೇಳಿದ್ದಾರೆ.

“ಜಿಲ್ಲೆಯಲ್ಲಿ 283 ಮಂದಿ ಲಿಂಗತ್ವ ಅಲ್ಪಸಂಖ್ಯಾತರಿದ್ದಾರೆ. ಅವರು ಜೀವನ ನಿರ್ವಹಣೆಗೆ ತಮಗೆ ಇಷ್ಠವಿಲ್ಲದ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವ ಬದಲು, ಕೌಶಲ್ಯ ತರಬೇತಿಗಳ ಮೂಲಕ ಸ್ವಾವಲಂಬಿ ಜೀವನ ನಡೆಸಲು ಅನುವು ಮಾಡಿಕೊಡಲು ಯಕ್ಷಗಾನ ತರಬೇತಿ ನೀಡಲಾಗಿದೆ. ಕಲಾ ಪ್ರತಿಭೆಯ ಮೂಲಕ ಅವರು ಸಾಮಾಜಿಕವಾಗಿ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳಲು ಮತ್ತು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಸಾಧ್ಯವಿದೆ. ಯಕ್ಷಗಾನ ಮಾತ್ರವಲ್ಲದೇ ಇತರೇ ಕೌಶಲ್ಯಯುಕ್ತ ತರಬೇತಿ ಪಡೆಯಲು ಇಚ್ಚಿಸಿದಲ್ಲಿ ಜಿಲ್ಲಾಡಳಿತ ಎಲ್ಲಾ ಅಗತ್ಯ ನೆರವು ನೀಡಲಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...