ಉಡುಪಿ | ಅಸಹಾಯಕ ಸ್ಥಿಯಲ್ಲಿದ್ದ ಯುವಕನ‌ ರಕ್ಷಣೆ: ಪೊಲೀಸರಿಂದ ಸಂಬಂಧಿಕರ ಪತ್ತೆ ಕಾರ್ಯ ಯಶಸ್ವಿ

Date:

‌‌‌‌‌‌‌ಉಡುಪಿ ನಗರದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸನಿಹ‌‌ ಅಸಹಾಯಕ ಸ್ಥಿತಿಯಲ್ಲಿದ್ದ‌ ಅಪರಿಚಿತ ವ್ಯಕ್ತಿಯನ್ನು ರಕ್ಷಿಸಿ, ದೊಡ್ಡಣಗುಡ್ಡೆಯ ಡಾ.ಎ.ವಿ.ಬಾಳಿಗಾ ಆಸ್ಪತ್ರೆಗೆ ದಾಖಲುಪಡಿಸಿರುವ‌ ಘಟನೆ ನಡೆದಿದೆ.

ನಗರದ ರಸ್ತೆಗಳಲ್ಲಿ ಯುವಕನೊಬ್ಬ ಅನಾವಶ್ಯಕ ಅಲೆದಾಡುವುದನ್ನು ಗಮನಿಸಿದ, ಆಭರಣ ಮಳಿಗೆಯ ಸಿಬ್ಬಂದಿ ರುಡಲ್ಫ್ ಪ್ರಜ್ವಲ್ ಅವರು, ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ.‌

ತಕ್ಷಣ ಸ್ಥಳಕ್ಕೆ ಬಂದ ನಿತ್ಯಾನಂದ ಅವರು ಯುವಕನನ್ನು ವಿಚಾರಿಸಿದಾಗ ಸರಿಯಾದ‌ ಸ್ಪಂದನೆ ದೊರೆಯಲಿಲ್ಲ, ಮಾನಸಿಕ ರೋಗಿ ಎಂದು‌ ತಿಳಿದುಬಂದಿತು. ಯುವಕನಿಗೆ ತುರ್ತು ಚಿಕಿತ್ಸೆಯ ಅವಶ್ಯಕತೆ ಇರುವುದರಿಂದ ನಗರ ಪೋಲಿಸ್ ಠಾಣೆಯ‌ ಎ.ಎಸ್.ಐ ಹರೀಶ್ ಅವರಿಂಧ ನೆರವು ಪಡೆದು‌, ರಕ್ಷಿಸಲ್ಪಟ್ಟ‌ ಯುವಕನನ್ನು ದೊಡ್ಡಣಗುಡ್ಡೆಯ ಬಾಳಿಗ‌ ಆಸ್ಪತ್ರೆಗೆ ದಾಖಲುಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯುವಕನ ಸಂಬಂಧಿಕರ ವಿವರಗಳನ್ನು ಪತ್ತೆ ಹಚ್ಚಲೆಂದು ಪೊಲೀಸರು ಯುವಕನ ಫೋಟೋ ಹಾಗೂ ವಿವರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದರು. ಆ ಬಳಿಕ ಯುವಕನ ಸಂಬಂಧಿಕರನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾದರು.‌

ಇದನ್ನು ಓದಿದ್ದೀರಾ? ಚಾಮರಾಜ ನಗರ | ಹೊಗೇನಕಲ್ ಫಾಲ್ಸ್: ಪೊಲೀಸರ ಜಂಟಿ ಸಭೆ ಯಶಸ್ವಿ; ತೆಪ್ಪ ಸಂಚಾರ ಪುನರಾರಂಭ

ಯುವಕನ‌ ಹುಡುಕಾಟದಲ್ಲಿದ್ದ ಮನೆಯವರು, ಬೆಂಗಳೂರಿನಿಂದ ಬಂದು ಆಸ್ಪತ್ರೆಯಲ್ಲಿ ಯುವಕನನ್ನು ಸಂಪರ್ಕಿಸಲಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...