ಬ್ರೇಕಿಂಗ್ ನ್ಯೂಸ್ | ನಾಲ್ವರ ಕೊಲೆ ಪ್ರಕರಣ; ಆರೋಪಿ ಸಿವಿಲ್ ಪೊಲೀಸ್‌?

Date:

ಉಡುಪಿಯ ನೇಜಾರು ಬಳಿ ನಡೆದಿದ್ದ ನಾಲ್ವರ ಕೊಲೆ ಪ್ರಕರಣದಲ್ಲಿ ಹಲವು ಆಯಾಮಗಳಲ್ಲಿ ತನಿಖೆ ನಡೆಸಿದ್ದೇವೆ. ಹಲವಾರು ಶಂಕಿತರನ್ನು ವಿಚಾರಣೆಗೆ ಒಳಪಡಿಸಿ, ಒಬ್ಬನನ್ನು ವಶಕ್ಕೆ ಪಡೆದಿದ್ದೇವೆ ಎಂದು ಉಡುಪಿ ಜಿಲ್ಲಾ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಹೇಳಿದ್ದಾರೆ.

ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಮಾಹಿತಿ ನೀಡಿದರು. “ಬೆಳಗಾವಿ ಜಿಲ್ಲೆಯ ಕುಡುಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರವೀಣ್ ಅರುಣ್ ಚೌಗಲೆ ಎಂಬಾತನನ್ನು ಉಡುಪಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಚಾರಣೆಯಲ್ಲಿ ಆತನೇ ಆರೋಪಿ ಎಂಬುದು ಖಚಿತವಾದರೆ, ಆತನನ್ನು ಬಂಧಿಸಿ, ನ್ಯಾಯಾಲಯದಲ್ಲಿ ಹಾಜರು ಪಡಿಸುತ್ತೇವೆ” ಎಂದು ಹೇಳಿದ್ದಾರೆ.

“ಶಂಕಿತ ಆರೋಪಿ ಸಿಆರ್‌ಪಿಎಫ್‌ ಅಥವಾ ಸಿವಿಲ್‌ ಪೊಲೀಸ್‌ ಇಲಾಖೆಯಲ್ಲಿ ಇದ್ದ ಎಂಬ ಮಾತುಗಳಿವೆ. ಆ ಬಗ್ಗೆ ನಿಖರ ಮಾಹಿತಿ ಇಲ್ಲ. ತನಿಖೆಯಲ್ಲಿ ಗೊತ್ತಾಗಬೇಕು” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಾಂತ್ರಿಕ ವಿಶ್ಲೇಷಣೆ, ಸಿಸಿ ಟಿಸಿ ದೃಶ್ಯಗಳು ಮತ್ತು ಗುಪ್ತಚರ ಮಾಹಿತಿ ಆಧರಿಸಿ ಆತನನ್ನು ವಶಕ್ಕೆ ಪಡೆದಿದ್ದೇವೆ. ಕಾನೂನಾತ್ಮಕವಾಗಿ ಕ್ರಮ ತೆಗೆದುಕೊಳ್ಳುತ್ತೇವೆ. ತನಿಖಾಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ವರದಿ ಬಂದ ಮೇಲೆ ಹೆಚ್ಚಿನ ಮಾಹಿತಿ ನೀಡುತ್ತೇವೆ” ಎಂದು ಹೇಳಿದ್ದಾರೆ.

“ಯಾವುದೇ ಅಹಿತಕರ ಘಟನೆ ನಡೆಯದಂತೆ ಉಡುಪಿ ಹಲವು ಭಾಗಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಿದ್ದೇವೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...