ಉಡುಪಿ ಪ್ರಕರಣ | ರಶ್ಮಿ ಸಮಂತ್ ವಿರುದ್ಧ ನೀಡಿದ ದೂರು ಟ್ವಿಟರ್‌ನಿಂದ ಮಾಯ- ಅಮೃತ್ ಶೆಣೈ ಆರೋಪ

Date:

“ಉಡುಪಿ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ರಶ್ಮಿ ಸಮಂತ್ ಎಂಬ ಮಹಿಳೆ ತನ್ನ ಟ್ವೀಟರ್ ಖಾತೆಯಲ್ಲಿ ಬರೆದ ಪ್ರಚೋದನಾಕಾರಿ ಸಂದೇಶಗಳನ್ನು ರಿಟ್ವೀಟ್ ಮಾಡಿ ದೂರನ್ನು‌ ಬರೆದು ಪೊಲೀಸರಿಗೆ ಹಾಗೂ ಜಿಲ್ಲಾಧಿಕಾರಿಗೆ ಟ್ಯಾಗ್ ಮಾಡಿದ್ದೆ. ಮರುದಿನವೇ ಆ ಟ್ವೀಟ್ ಡಿಲಿಟ್ ಆಗಿದೆ” ಎಂದು ಉಡುಪಿಯ ʼಸಹಬಾಳ್ವೆʼ ಅಧ್ಯಕ್ಷ ಅಮೃತ್‌ ಶೆಣೈ ದೂರಿದ್ದಾರೆ.

ಈ ದಿನ”ದ ಜೊತೆ ಮಾತನಾಡಿದ ಅವರು, ನಾನು ಕೆಲವು ಸ್ಕ್ರೀನ್ ಶಾಟ್‌ಗಳನ್ನು ಲಗತ್ತೀಕರಿಸಿದ್ದೆ. ಅವರ ಟ್ವೀಟ್‌ಗಳಲ್ಲಿ ಅವರು ಉಡುಪಿ ಕಾಲೇಜಿನ‌ ಪ್ರಕರಣದಲ್ಲಿ ಚಿತ್ರೀಕರಣ ಆದ ವೀಡಿಯೋ ‌ನೋಡಿದ್ದೇನೆ ಎಂದೂ‌ ಬರೆದಿದ್ದಾರೆ. ಎಸ್ ಪಿ ಯವರು ಸಾಮಾಜಿಕ‌ ತಾಣದಲ್ಲಿದ್ದ ವಿಡಿಯೋ ಈ ಪ್ರಕರಣದ್ದು ಅಲ್ಲ ಎಂದು ಹೇಳಿದ್ದಾರೆ. ತದನಂತರ ಯೂಟ್ಯೂಬ್ ನಲ್ಲಿ ವೀಡಿಯೋ ಅಪ್ಲೋಡ್ ಮಾಡಿದ ವ್ಯಕ್ತಿಯ ಮೇಲೆ ಪ್ರಕರಣ ದಾಖಲಾಗಿದೆ. ಆ ಬಳಿಕವೂ ರಶ್ಮಿ ತನ್ನ ಟ್ವೀಟ್ ಅನ್ನು ‌ಡಿಲೀಟ್ ಮಾಡಿಲ್ಲ. ಅದಲ್ಲದೇ ಅವರು ಮಾಧ್ಯಮದವರಲ್ಲಿ ಹಾಗೂ ತನ್ನ ಟ್ವೀಟ್‌ಗಳಲ್ಲಿ‌ ಪದೇ ಪದೇ ಉಡುಪಿ ಪೊಲೀಸರು ಅವರಿಗೆ ಕಿರುಕುಳ ನೀಡಿದ್ದಾರೆ ಆರೋಪ ಮಾಡಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Untitled 2
ರಶ್ಮಿ ಸಮಂತ್‌ ಅವರ ಪ್ರಚೋದನಕಾರಿ ಟ್ವೀಟ್‌

“ವೀಡಿಯೋ ‌ರೆಕಾರ್ಡಿಂಗ್‌ ಮಾಡಿದ್ದರೆ, ಅದನ್ನು‌ ನಾನೂ‌ ವಿರೋಧಿಸುತ್ತೇನೆ. ಯಾವ ಧರ್ಮದವರೇ ಇರಲಿ‌, ತಪ್ಪು ತಪ್ಪೇ. ಆದರೆ ಪೊಲೀಸರು ‌ತನಿಖೆ ನಡೆಸುವ ಮೊದಲೇ ತೀರ್ಪು‌ನೀಡಿದ ರೀತಿಯಲ್ಲಿ ಟ್ವೀಟ್ ಮಾಡುವುದು ಕಾನೂನು‌ ಬಾಹಿರ.

ಪ್ರಚೋದನಕಾರಿ ಹಾಗು ಸುಳ್ಳು ಆರೋಪ ಮಾಡಿರುವ ರಶ್ಮಿಯವರ ಮೇಲೂ‌ ಪ್ರಕರಣ ದಾಖಲು ಮಾಡಬೇಕೆ‌ಂದು ಉಡುಪಿ ಪೊಲೀಸರಿಗೆ ಈ‌ ಮೂಲಕ ಮನವಿ ಮಾಡುತ್ತೇನೆ. ಏಕೆಂದರೆ ಅವರಿಗೆ ಲಕ್ಷಾಂತರ ಫಾಲೊವರ್ಸ್ ಇದ್ದು, ಅವರು ಮಾಡಿದ ಟ್ವೀಟ್‌ಗಳು ಸಮಾಜದ ಶಾಂತಿಯನ್ನು‌ ಕದಡುತ್ತವೆ ಎಂಬುದು ಮೇಲ್ನೋಟಕ್ಕೆ ತೋರುತ್ತದೆ” ಎಂದು ಅಮೃತ್‌ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...