ಧರ್ಮಸ್ಥಳ ಪೊಲೀಸ್ ಠಾಣೆಗೆ ಆಯೋಗದ ಅಧ್ಯಕ್ಷರ ಭೇಟಿ

Date:

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್.ಕೋಸಂಬೆ ಅವರು ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಪೊಲೀಸ್ ಠಾಣೆಗೆ ಭಾನುವಾರ ದಿಡೀರ್ ಭೇಟಿ ನೀಡಿದರು.

ಶಾಲಾ ಕಾಲೇಜುಗಳಲ್ಲಿ ತೆರೆದ ಮನೆ ಕಾರ್ಯಕ್ರಮವನ್ನು ಪ್ರತಿ ಗುರುವಾರ ಕೈಗೊಂಡು, ಮಕ್ಕಳಿಗೆ ಮಕ್ಕಳ ಹಕ್ಕುಗಳ ಸಂಭಂಧಿತ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳನ್ನು ಜೆಜೆಬಿ ಬೋರ್ಡ್ ಮುಂದೆ ಸಾದರ ಪಡಿಸಲು ಫಾರಂ ನಂ: 1 ಹಾಗೂ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಮಕ್ಕಳನ್ನು ಸಮಾಲೋಚನೆಗೆ ಕರೆದೊಯ್ದಾಗ ಫಾರಂ:17 ಕಡ್ಡಾಯವಾಗಿ ಭರ್ತಿ ಮಾಡಬೇಕು ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ ಮಕ್ಕಳ ವಿಶೇಷ ಪೊಲೀಸ್ ಘಟಕದ ಕಾರ್ಯ ವೈಖರಿಯನ್ನು ಗಮನಿಸಿದ ಅವರು, ತೆರದ ಮನೆ ಕಾರ್ಯಕ್ರಮದ ರಿಜಿಸ್ಟ್ರಾರ್ ಹಾಗೂ ಮಕ್ಕಳ ಪ್ರಕರಣಗಳ ಕುರಿತ ದಾಖಲು ವಹಿಯನ್ನು ಪರಿಶೀಲಿಸಿದರು.

ಮಕ್ಕಳ ಅಪಹರಣ ಪ್ರಕರಣ, ಪೋಕ್ಸೋ ಪ್ರಕರಣ, ಬಾಲ್ಯ ವಿವಾಹ ಪ್ರಕರಣ ಸೇರಿದಂತೆ ಮಕ್ಕಳ ಹಕ್ಕುಗಳ ಉಲ್ಲಂಘನೆ
ವಿಷಯಕ್ಕೆ ಸಂಬಂಧಿತ ಪ್ರಕರಣಗಳನ್ನು ಸಕಾಲದಲ್ಲಿ
ವರದಿ ಮಾಡಿಕೊಳ್ಳಲು ಸೂಚಿಸಿದರು.

1010036681
ಜಾಹಿರಾತು

ಮಕ್ಕಳ ನ್ಯಾಯ ( ಮಕ್ಕಳ ರಕ್ಷಣೆ ಮತ್ತು ಪೋಷಣೆ) ಕಾಯ್ದೆ-2015, ಕಲಂ 107 ಹಾಗೂ ಮಕ್ಕಳ ನ್ಯಾಯ ( ಮಕ್ಕಳ ರಕ್ಷಣೆ ಮತ್ತು ಪೋಷಣೆ) ಮಾದರಿ ನಿಯಮ -2016 ರ 8(6) ಹಾಗೂ 86(11) ಅನ್ವಯ ಪದನಿಮಿತ್ತ ಅಧಿಕಾರಿಗಳ ಹೆಸರು, ವಿಳಾಸ, ದೂರವಾಣಿ ಸಂಖ್ಯೆಗಳನ್ನು ಒಳಗೊಂಡಂತೆ ಮಾಹಿತಿ ಫಲಕವನ್ನು ಹಾಗೂ ಮಕ್ಕಳ ಸಹಾಯ ವಾಣಿ ಸಂಖ್ಯೆ 1098 ಶಾಶ್ವತ ಫಲಕದಲ್ಲಿ ತ್ವರಿತವಾಗಿ ಅಳವಡಿಸಬೇಕು ಎಂದು
ಆಯೋಗದ ಅಧ್ಯಕ್ಷರು ತಿಳಿಸಿದರು.

ಈ ವೇಳೆ ಧರ್ಮಸ್ಥಳ ಪೊಲೀಸ್ ಠಾಣೆಯ ಪಿ ಎಸ್ ಐ ಸಮರ್ಥ ಗಾಣಿಗೇರ್ ಹಾಗೂ ಸಿಬ್ಬಂದಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...