ಉಡುಪಿ | ನಾಲ್ವರ ಹತ್ಯೆ ಪ್ರಕರಣ; ಪ್ರಚೋದನಾಕಾರಿ ಪೋಸ್ಟ್‌ ಹಾಕಿದ್ದಾತನ ವಿರುದ್ಧ ‘ಕೇಸ್‌’ ದಾಖಲು

Date:

ಉಡುಪಿಯ ನೇಜಾರಿನಲ್ಲಿಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಯುವಕನೊಬ್ಬ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್‌ ಹಾಕಿದ್ದ. ಆತನ ವಿರುದ್ಧ ಪೊಲೀಸರು ಸಮೋಟೋ ಪ್ರಕರಣ ದಾಖಲಿಸಿದ್ದಾರೆ.

ಕೊಲೆ ಆರೋಪಿ ಪ್ರವೀಣ್ ಚೌಗಲೆಯನ್ನು ಬಂಧಿಸಿರುವ ಪೊಲೀಸರು, ಆತನನ್ನು ಮಹಜರಿಗಾಗಿ ಹತ್ಯೆಯ ಸ್ಥಳಕ್ಕೆ ಕರೆದೊಯ್ದಿದ್ದರು. ಆ ವೇಳೆ, ಜನರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದರು. ಜನರ ಮೇಲೆ ಪೊಲೀಸರು ಲಾಠಿ ಚಾರ್ಜ್‌ ನಡೆಸಿದ್ದರು.

ಆ ಘಟನೆಯನ್ನು ಉದ್ದೇಶಿಸಿ ಶಿವಮೊಗ್ಗ ಮೂಲದ ಹಫೀಜ್ ಮೊಹಮ್ಮದ್ ಎಂಬಾತ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಹಾಕಿದ್ದರು. ಪೋಸ್ಟ್‌ನಲ್ಲಿ “ಪ್ರಿಪರೇಶನ್ ಇಲ್ಲದೇ ಪ್ರವೀಣ್ ಚೌಗಲೆಯನ್ನು ಕೊಲ್ಲುವ ಒಂದು ಸುಲಭದ ದಾರಿಯನ್ನು ನೇಜಾರಿನವರು ಕಳೆದುಕೊಂಡರು” ಎಂದು ಬರೆದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಚೋದನಾಕಾರಿ ಪೋಸ್ಟ್‌ಅನ್ನು ಗಮನಿಸಿದ್ದ ಉಡುಪಿ ಪೊಲೀಸರು ಹಫೀಜ್ ವಿರುದ್ಧ ಉಡುಪಿ ಸೆನ್‌ ಪೊಲೀಸ್‌ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪರಾಧ ಕೃತ್ಯಕ್ಕೆ ಪ್ರಚೋದನೆ, ಸಾರ್ವಜನಿಕ ಶಾಂತಿ ಕದಡುವ ಆರೋಪದ ಮೇಲೆ ಐಪಿಸಿ ಸೆಕ್ಷನ್‌ 155, 505(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

post

ನವೆಂಬರ್ 12ರಂದು ಉಡುಪಿಯ ನೇಜಾರು ನಗರದಲ್ಲಿ ಏಕಾಏಕಿ ಮನೆಗೆ ನುಗ್ಗಿದ ಆರೋಪಿ ಪ್ರವೀಣ್ ಚೌಗಲೆ ಮನೆಯಲ್ಲಿದ್ದ ಹಸೀನಾ, ಅವರ ಮಕ್ಕಳಾದ ಅಯ್ನಾಝ್ ಮತ್ತು ಹಾಸೀಂ ಹಾಗೂ 11 ವರ್ಷದ ಬಾಲಕ ಅಫ್ನಾನ್‌ನನ್ನು ಬರ್ಬರವಾಗಿ ಕೊಲೆ ಮಾಡಿ, ಪರಾರಿಯಾಗಿದ್ದ. ಪ್ರಕರಣದ ಬೆನ್ನತ್ತಿದ ಪೊಲೀಸರು ಬೆಳಗಾವಿ ಜಿಲ್ಲೆಯಲ್ಲಿ ಆರೋಪಿಯನ್ನು ಬಂಧಿಸಿದ್ದರು. ವಿಚಾರಣೆ ವೇಳೆ, ತಾನೇ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಕೊಲೆಗೆ ಮೂರು ಕಾರಣಗಳಿವೆ ಎಂದು ಹೇಳಿಕೊಂಡಿದ್ದಾನೆ.

ತಾನು ಯುವತಿ ಅಯ್ನಾಝ್ ಅವರನ್ನು ಮಾತ್ರ ಕೊಲ್ಲಲು ಬಂದಿದ್ದೆ. ಆದರೆ, ತಡೆಯಲು ಬಂದವರಿಂದ ತಪ್ಪಿಸಿಕೊಳ್ಳಲು ಉಳಿದ ಮೂವರನ್ನು ಹತ್ಯೆಗೈದಿದ್ದಾಗಿ ವಿಚಾರಣೆ ವೇಳೆ ಆರೋಪಿ ಒಪ್ಪಿಕೊಂಡಿದ್ಧಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...