ಹಿರಿಯಡಕದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಐಕ್ಯುಎಸಿ ಹಾಗೂ ಮಹಿಳಾ ದೌರ್ಜನ್ಯ ತಡೆ ಸಮಿತಿ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸಾಮಾಜಿಕ ಚಟುವಟಿಕೆಗಳಲ್ಲಿ ಮಹಿಳಾ ಭಾಗವಹಿಸುವಿಕೆಯ ಮಾದರಿಯಾಗಿರುವ ಪೆರ್ಡೂರು ಎಸ್.ಎಲ್.ಆರ್.ಎಂ. ಸಂಸ್ಥೆಯ ಚಾಲಕಿ ಮತ್ತು ಮೇಲ್ವಿಚಾರಕರಾದ ಶ್ರೀಮತಿ ಶ್ಯಾಮಲ ಅವರನ್ನು ಆಹ್ವಾನಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಮಹಿಳೆಯರಿಗೆ ಗೌರವ ಮತ್ತು ಸುರಕ್ಷತೆ ನೀಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ಸಮಾಜಕ್ಕೆ ಮಾದರಿಯಾಗುತ್ತಿದ್ದಾರೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಹಿಳಾ ದೌರ್ಜನ್ಯ ತಡೆ ಸಮಿತಿಯ ಸಂಚಾಲಕಿ ಡಾ. ಸೌಮ್ಯಲತಾ ಪಿ., ಐಕ್ಯುಎಸಿ ಸಂಚಾಲಕ ಡಾ. ಲಿತಿನ್ ಬಿ.ಎಂ., ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ಮೀನಾಕ್ಷಿ ನಾಯ್ಕ, ಕನ್ನಡ ಉಪನ್ಯಾಸಕರಾದ ಡಾ. ಡಿ.ಎಸ್. ದೊಡ್ಡಮನಿ ಹಾಗೂ ಸಮಿತಿಯ ವಿದ್ಯಾರ್ಥಿ ಪ್ರತಿನಿಧಿಗಳು ಉಪಸ್ಥಿತರಿದ್ದರು.





