ಉಡುಪಿ‌ | ಸತ್ಯಾಧಾರಿತ ಪತ್ರಿಕೋದ್ಯಮ ಸಮಾಜಕ್ಕೆ ಅತ್ಯಗತ್ಯ: ಪ್ರೊ. ಜಯಪ್ರಕಾಶ್ ಶೆಟ್ಟಿ

Date:

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಿಡಿಯಡಕ, ಐಕ್ಯುಎಸಿ, ಎನ್‌ಎಸ್‌ಎಸ್, ಕನ್ನಡ ವಿಭಾಗ ಹಾಗೂ ಮಾಸ್ ಮೀಡಿಯಾ ಫೌಂಡೇಶನ್ ಇವರ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗಾಗಿ “ಪ್ರಸ್ತುತ ವಿದ್ಯಮಾನಗಳಲ್ಲಿ ಡಿಜಿಟಲ್ ಮಾಧ್ಯಮದ ಪಾತ್ರ”‌ ವಿಷಯದ ಕುರಿತ ಮಾಧ್ಯಮ ಕಾರ್ಯಗಾರ ಇಂದು ನಡೆಯಿತು.

1010014512

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಜಯಪ್ರಕಾಶ್ ಶೆಟ್ಟಿ ಹೆಚ್, ಇಂದಿನ ಯುಗದಲ್ಲಿ ಡಿಜಿಟಲ್ ಮಾಧ್ಯಮಗಳು ಮಾಹಿತಿ ಪ್ರಸರಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ. ವಿದ್ಯಾರ್ಥಿಗಳು ಸಾಮಾಜಿಕ ಜವಾಬ್ದಾರಿಯುತವಾಗಿ ಹಾಗೂ ನೈತಿಕತೆಯಿಂದ ಮಾಧ್ಯಮಗಳನ್ನು ಬಳಸಬೇಕು ಎಂದು ಸಲಹೆ ನೀಡಿದರು.

ಇಂದಿನ ದಿನಗಳಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಫೇಕ್ ಸುದ್ದಿಗಳ ಸಮಸ್ಯೆ ಹೆಚ್ಚಾಗುತ್ತಿರುವುದನ್ನು ಉಲ್ಲೇಖಿಸಿ, ಜನರಿಗೆ ಸತ್ಯವಾದ ಮಾಹಿತಿ ಅಗತ್ಯವಿದ್ದರೂ ಕೆಲವು ಮಾಧ್ಯಮಗಳು ಅದನ್ನು ಸರಿಯಾಗಿ ನೀಡುವುದಿಲ್ಲ ಎಂಬ ಗೊಂದಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1010014515

ಸುಳ್ಳು ಸುದ್ದಿಗಳನ್ನು ಸೃಷ್ಟಿಸದೇ, ಸತ್ಯವನ್ನು ಪರಿಶೀಲಿಸಿ ಸುದ್ದಿ ನೀಡುವ ಮಾಧ್ಯಮಗಳು ಸಮಾಜಕ್ಕೆ ಅತ್ಯಂತ ಅಗತ್ಯ. ಆದರೆ ಟಿಆರ್‌ಪಿ ಗಾಗಿ ನಾಟಕೀಯತೆ ಹೆಚ್ಚುತ್ತಿರುವ ಕಾಲದಲ್ಲಿ ಜನಪರ ಮಾಧ್ಯಮಗಳು ಉಳಿಯುವುದು ಕಷ್ಟಕರವಾಗುತ್ತಿದೆ. ಆದರೂ ಈ ದಿನ.ಕಾಮ್ ನಂತಹ ಮಾಧ್ಯಮಗಳು ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.

ಈ ದಿನ.ಕಾಮ್ ಕೇವಲ ಸುದ್ದಿಗಳನ್ನು ಮಾತ್ರ ಪ್ರಕಟಿಸುವುದಲ್ಲದೆ, ಯಾರೂ ಪ್ರಕಟಿಸದ ವಿಶಿಷ್ಟ ಲೇಖನಗಳು ಮತ್ತು ವಿಶೇಷ ಸಂಚಿಕೆಗಳನ್ನು ಕೂಡ ಹೊರತರುತ್ತಿದೆ. “ನಮ್ಮ ಕರ್ನಾಟಕ”, “ಅರಿವೇ ಅಂಬೇಡ್ಕರ್” ಮೊದಲಾದ ವಿಶೇಷ ಸಂಚಿಕೆಗಳ ಮೂಲಕ ಮಾಧ್ಯಮದ ಆಶಯವನ್ನು ಜನರ ಮುಂದೆ ತಂದುಕೊಡುತ್ತಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

1010014511

ಯಾವ ಮಾಧ್ಯಮ ಯಾವ ಜನಪರ ದೃಷ್ಟಿಕೋನವನ್ನು ಹೊಂದಿದೆ ಎಂಬುದು ಅದರ ಬರವಣಿಗೆ ಮತ್ತು ಮಾತಿನ ಮೂಲಕ ಗೋಚರಿಸುತ್ತದೆ. ಆ ಹಿನ್ನೆಲೆಯಲ್ಲೇ ಈ ದಿನ.ಕಾಮ್ ಜನಪರ ಧೋರಣೆಯೊಂದಿಗೆ ಕೆಲಸ ಮಾಡುತ್ತಿದೆ ಎಂದು ನಾನು ನಂಬಿದ್ದೇನೆ ಎಂದು ಹೇಳಿದರು ‌

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದ ಈ ದಿನ.ಕಾಮ್ ಕೇಂದ್ರ ಸಂಯೋಜಕರಾದ ಸಂತೋಷ್ ಹೆಚ್.ಎಂ, ಡಿಜಿಟಲ್ ಮಾಧ್ಯಮಗಳ ವೇಗ, ವ್ಯಾಪ್ತಿ ಮತ್ತು ಪ್ರಭಾವದ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಿದರು. ಇಂದಿನ ಸಮಾಜದಲ್ಲಿ ಸುದ್ದಿಯ ವಿಶ್ವಾಸಾರ್ಹತೆ, ಮಾಹಿತಿ ಪರಿಶೀಲನೆ ಹಾಗೂ ಸಾಮಾಜಿಕ ಜಾಲತಾಣಗಳ ಜವಾಬ್ದಾರಿಯುತ ಬಳಕೆಯ ಕುರಿತು ಅವರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

1010014510

ಕಾರ್ಯಕ್ರಮದಲ್ಲಿ ಕನ್ನಡ ವಿಭಾಗ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸೌಮ್ಯಲತಾ, ಐಕ್ಯುಎಸಿ ಸಂಚಾಲಕರಾದ ಡಾ. ಲಿತಿನ್ ಬಿ.ಎಂ, ಎನ್‌ಎಸ್‌ಎಸ್ ಯೋಜನಾಧಿಕಾರಿ ನಂದೀಶ್ ಕುಮಾರ್ ಕೆ.ಸಿ, ಈ ದಿನ.ಕಾಮ್ ಉಡುಪಿ ಜಿಲ್ಲಾ ವರದಿಗಾರ ಶಾರೂಕ್ ತೀರ್ಥಹಳ್ಳಿ ಉಪಸ್ಥಿತರಿದ್ದರು.

ಕಾಲೇಜಿನ ವಿದ್ಯಾರ್ಥಿ ಮಹಾದೇವ ಸ್ವಾಗತಿಸಿದರು. ದೇವಿಕಾ ಪದ್ಮಶಾಲಿ ಕಾರ್ಯಕ್ರಮ ನಿರೂಪಿಸಿದರು. ರಶ್ಮಿ ಧನ್ಯವಾದವಿತ್ತರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...