ಉಡುಪಿ | ಕೋಟದಲ್ಲಿ 294ನೇ ಭಾನುವಾರದ ಸ್ವಚ್ಛತಾ ಅಭಿಯಾನ – ರಾಷ್ಟ್ರಿಯ ಹೆದ್ದಾರಿಯಲ್ಲಿ ತ್ಯಾಜ್ಯ ತೆರವು

Date:

ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ನೇತೃತ್ವದಲ್ಲಿ 294ನೇ ಭಾನುವಾರದ ಸ್ವಚ್ಛತಾ ಅಭಿಯಾನವನ್ನು ಕೋಟದ ಮಣೂರು ಹಾಗೂ ಹರ್ತಟ್ಟು ಭಾಗದ ರಾಷ್ಟ್ರಿಯ ಹೆದ್ದಾರಿಯಲ್ಲಿ ತ್ಯಾಜ್ಯ ತೆರವು ಮಾಡುವ ಮೂಲಕ ಹಮ್ಮಿಕೊಳ್ಳಲಾಯಿತು.

ಈ ಸ್ವಚ್ಛತಾ ಕಾರ್ಯಕ್ರಮಕ್ಕೆ ನಿವೃತ್ತ ಬಿಎಸ್‌ಎನ್‌ಎಲ್ ಅಧಿಕಾರಿ ಮಣೂರು ವಿಷ್ಣುಮೂರ್ತಿ ಮಯ್ಯ ಚಾಲನೆ ನೀಡಿದರು. ಈ ವೇಳೆ ಹೆದ್ದಾರಿಯ ಸುಮಾರು ಒಂದೂವರೆ ಕಿಲೋಮೀಟರ್ ವ್ಯಾಪ್ತಿಯಲ್ಲಿ ಹರಡಿಕೊಂಡಿದ್ದ ಹೆಚ್ಚಿನ ಪ್ರಮಾಣದ ತ್ಯಾಜ್ಯವನ್ನು ಸ್ವಯಂಸೇವಕರು ತೆರವುಗೊಳಿಸಿದರು.

WhatsApp Image 2026 03 15 at 4.15.30 PM 2
ಜಾಹಿರಾತು

ಈ ಸಂದರ್ಭದಲ್ಲಿ ಮಾತನಾಡಿದ ವಿಷ್ಣುಮೂರ್ತಿ ಮಯ್ಯ, ರಾಷ್ಟ್ರಿಯ ಹೆದ್ದಾರಿಯಲ್ಲಿ ತ್ಯಾಜ್ಯ ಎಸೆಯುವವರ ವಿರುದ್ಧ ಸ್ಥಳೀಯ ಆಡಳಿತವು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸಂಘಟನೆಗಳು ಪ್ರತೀ ಬಾರಿ ಸ್ವಚ್ಛತಾ ಕಾರ್ಯ ನಡೆಸಿದರೂ ಪುನಃ ತ್ಯಾಜ್ಯ ಎಸೆಯುವ ಘಟನೆಗಳು ನಡೆಯುತ್ತಿವೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು. ಇದನ್ನು ತಡೆಯಲು ಪ್ರಮುಖ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಸುವಂತೆ ಕೂಡ ಅವರು ಸಲಹೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಕಾರ್ಯಕ್ರಮದಲ್ಲಿ ಚಿತ್ತಾರಿ ಟ್ರಸ್ಟ್‌ನ ಗೋಪಾಲ್ ಪೈ, ಪಂಚವರ್ಣ ಯುವಕ ಮಂಡಲದ ಮಾಜಿ ಅಧ್ಯಕ್ಷ ಅಜಿತ್ ಆಚಾರ್, ಗಿರೀಶ್ ಆಚಾರ್, ಉಪಾಧ್ಯಕ್ಷ ದಿನೇಶ್ ಆಚಾರ್, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್, ಸಂಚಾಲಕಿ ಸುಜಾತ ಬಾಯರಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಗೀತಾನಂದ ಫೌಂಡೇಶನ್ ಮಣೂರು, ಹಂದಟ್ಟು ಮಹಿಳಾ ಬಳಗ, ಫ್ರೆಂಡ್ಸ್ ಹಾಗೂ ಸಮುದ್ಯತಾ ಗ್ರೂಪ್ಸ್ ಕೋಟ ಇವರ ಸಹಯೋಗದೊಂದಿಗೆ ಕಾರ್ಯಕ್ರಮ ನಡೆಯಿತು. ಕೋಟ ಗ್ರಾಮ ಪಂಚಾಯತ್ ಹಾಗೂ ಎಸ್‌ಎಲ್‌ಆರ್‌ಎಂ ಘಟಕ ಸಹಕಾರ ನೀಡಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...