ಉಡುಪಿ | 30 ವರ್ಷ ಜೀತದಾಳಾಗಿ ದುಡಿಸಿಕೊಂಡ ಪ್ರಕರಣ: ಕುಂದಾಪುರದಲ್ಲಿ ಮಹಿಳೆಯ ಬಂಧನ

Date:

ಪರಿಶಿಷ್ಟ ಪಂಗಡದ ವೃದ್ಧನನ್ನು ಸುಮಾರು 30 ವರ್ಷಗಳ ಕಾಲ ಜೀತದಾಳಾಗಿ ಕೆಲಸ ಮಾಡಿಸಿಕೊಂಡು ದೌರ್ಜನ್ಯ ಎಸಗಿದ ಆರೋಪದಲ್ಲಿ ಮಹಿಳೆಯನ್ನು ಕುಂದಾಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

ಕನ್ಯಾನ ಗ್ರಾಮದ ಕಬ್ಬೈಲು ಉಳಿಯಾರ ಮನೆ ನಿವಾಸಿ ನಾಗ (65) ಅವರು ಕೊರಗ ಸಮುದಾಯಕ್ಕೆ ಸೇರಿದವರಾಗಿದ್ದು, ಸುಮಾರು 30 ವರ್ಷಗಳ ಹಿಂದೆ ಕುಂದಾಪುರದ ಹೆಮ್ಮಾಡಿಯ ಕಬ್ಬೈಲು ನಿವಾಸಿ ಸುಬ್ಬಣ್ಣ ಶೆಟ್ಟಿ ಅಲಿಯಾಸ್ ಶಾನಪ್ಪ ಶೆಟ್ಟಿ ಅವರು ಅವರನ್ನು ಕರೆದುಕೊಂಡು ಬಂದು ಕೆಲಸಕ್ಕೆ ಇಟ್ಟುಕೊಂಡಿದ್ದರು ಎನ್ನಲಾಗಿದೆ. ಸುಬ್ಬಣ್ಣ ಶೆಟ್ಟಿ ಅವರ ನಿಧನದ ನಂತರ ಅವರ ಮಗಳು ರಜನಿ ಶೆಟ್ಟಿ ಮತ್ತು ಅಳಿಯ ಕರುಣಾಕರ ಶೆಟ್ಟಿ ಅವರು ನಾಗರನ್ನು ಮನೆಯಲ್ಲಿ ದನ ಕಾಯುವುದು ಹಾಗೂ ತೋಟದ ವಿವಿಧ ಕೆಲಸಗಳಿಗೆ ಬಳಸಿಕೊಂಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ನಾಗರಿಂದ ದನ-ಎಮ್ಮೆ ನೋಡಿಕೊಳ್ಳುವುದು, ಸಗಣಿ ತೆಗೆದು ಹಾಕುವುದು, ಗದ್ದೆ ಕೆಲಸ, ಮನೆಯ ಶೌಚಾಲಯ ಸ್ವಚ್ಛತೆ ಸೇರಿದಂತೆ ಹಲವು ಕೆಲಸಗಳನ್ನು ಮಾಡಿಸಿಕೊಂಡಿದ್ದು, ಸರಿಯಾದ ಕೂಲಿ ನೀಡದೆ ದನದ ಕೊಟ್ಟಿಗೆಯಲ್ಲೇ ಮಲಗಲು ವ್ಯವಸ್ಥೆ ಮಾಡಲಾಗಿತ್ತು ಎಂದು ಆರೋಪಿಸಲಾಗಿದೆ. ತಿಂಡಿ ತಟ್ಟೆಗಳು, ಬಟ್ಟೆಗಳು ಸೇರಿದಂತೆ ಎಲ್ಲಾ ವಸ್ತುಗಳನ್ನು ದನದ ಕೊಟ್ಟಿಗೆಯಲ್ಲೇ ಇಡುವಂತೆ ಒತ್ತಾಯಿಸಲಾಗುತ್ತಿದ್ದು, ಊಟವನ್ನೂ ಬಾಳೆ ಎಲೆಯಲ್ಲಿ ಕೊಟ್ಟಿಗೆಯಲ್ಲೇ ನೀಡಲಾಗುತ್ತಿತ್ತು. ಜೊತೆಗೆ ಸಂಬಳ ನೀಡದೆ ಮನೆಯಿಂದ ಹೊರಗೆ ಹೋಗಲು ಅವಕಾಶ ನೀಡದೆ ದೌರ್ಜನ್ಯ ಎಸಗಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1009982136

ಈ ಕುರಿತು ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 13/2026ರಡಿ ಎಸ್‌.ಸಿ/ಎಸ್‌.ಟಿ ಕಾಯ್ದೆ ಅನ್ವಯ ಪ್ರಕರಣ ದಾಖಲಾಗಿದೆ.

ಪ್ರಕರಣದ ತನಿಖೆ ನಡೆಸಿದ ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಹೆಚ್‌.ಡಿ. ಕುಲಕರ್ಣಿ ಅವರು ಆರೋಪಿತೆಯಾದ ರಜನಿ ಶೆಟ್ಟಿ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿತೆಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ಅವರನ್ನು ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.

ಘಟನಾ ಸ್ಥಳಕ್ಕೆ ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು, ಸಹಾಯಕ ನಿರ್ದೇಶಕರು, ಕಾರ್ಮಿಕ ಇಲಾಖೆ ಅಧಿಕಾರಿಗಳು, ಕುಂದಾಪುರ ಉಪ ತಹಶೀಲ್ದಾರರು, ಗ್ರಾಮ ಆಡಳಿತಾಧಿಕಾರಿ ಹಾಗೂ ಹಟ್ಟಿಯಂಗಡಿ ಗ್ರಾಮ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನೊಂದ ವ್ಯಕ್ತಿ ನಾಗ ಅವರನ್ನು ವಿಚಾರಿಸಿ ಅವರಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...