ಉಡುಪಿ | ಮಹಿಳೆಯರು ಸ್ವಾವಲಂಬಿಗಳಾದಾಗ ದೇಶದ ಅಭಿವೃದ್ಧಿ ಸಾಧ್ಯ: ಎಂ ಎ ಗಫೂರ್

Date:

ತಮ್ಮ ಜೀವಿತಾವಧಿಯಲ್ಲಿ ಮಹಿಳೆಯರು ತಾಯಿ, ಸಹೋದರಿ, ಹೆಂಡತಿ, ಮಗಳು ಹೀಗೆ ಹತ್ತು ಹಲವು ಜವಾಬ್ದಾರಿಗಳನ್ನು ನಿಭಾಯಿಸಿ ಕುಟುಂಬವನ್ನು ಮುನ್ನಡೆಸುತ್ತಾರೆ. ಕುಟುಂಬದ ಜೊತೆ ಸಮಾಜವನ್ನು ಮುನ್ನಡೆಸುವ ಹೊಣೆಗಾರಿಕೆಯೂ ಮಹಿಳೆಯರ ಮೇಲಿದೆ. ಮಹಿಳೆಯರು ಸ್ವಾವಲಂಬಿಗಳಾದಾಗ ದೇಶದ ಅಭಿವೃದ್ಧಿ ಸಾಧ್ಯ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಹೇಳಿದರು.

ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಹಾಗೂ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ, ಜಿಲ್ಲಾ ಹಾಗೂ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟ, ಪರ್ಯಾಯ ಶ್ರೀ ಶಿರೂರು ಮಠ ಉಡುಪಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

1009954499

ಮಹಿಳೆಯರು ಈ ಸಮಾಜದ ಆಸ್ತಿ. ಮಹಿಳೆಯರನ್ನು ಸ್ವಾವಲಂಬಿಗಳಾಗಿ ಮಾಡಿದಾಗ ಇಡೀ ಕುಟುಂಬ ಏಳಿಗೆ ಕಾಣುತ್ತದೆ. ಮಹಿಳೆಯರ ಸಬಲೀಕರಣಕ್ಕಾಗಿ ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಮಹಿಳೆಯರು ನಾಯಕರಾದಾಗ ಯಾವುದೇ ಗೊಂದಲಕ್ಕೆ ಆಸ್ಪದ ನೀಡದೆ ಆಡಳಿತ ನಡೆಸುತ್ತಾರೆ. ಮಹಿಳೆಯರು ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಕಾರ್ಯ ನಿರ್ವಹಿಸುತ್ತಾರೆ. ದೇಶದಲ್ಲಿ ರಾಜೀವ್ ಗಾಂಧಿ ನೇತೃತ್ವದ ಸರ್ಕಾರವಿದ್ದಾಗ ಸಂವಿಧಾನಕ್ಕೆ ತಿದ್ದುಪಡಿ ತಂದು ಜಿಲ್ಲಾ ಮತ್ತು ತಾಲ್ಲೂಕು ಪಂಚಾಯ್ತಿಗಳಲ್ಲಿ ಶೇ. 33% ಮಹಿಳಾ ಪ್ರಾತಿನಿಧ್ಯ ನೀಡುವ ಕಾರ್ಯ ನಡೆಯಿತು. ಇದು ಮಹಿಳೆಯರ ಸಬಲೀಕರಣಕ್ಕಾಗಿ ತೆಗೆದುಕೊಂಡ ದಿಟ್ಟ ನಿರ್ಧಾರವಾಗಿತ್ತು. ಇಂದಿನ ಸರ್ಕಾರ ಇದನ್ನು ಕಾನೂನಾಗಿ ಪರಿವರ್ತಿಸಿ ಮಹಿಳೆಯರಿಗೆ ನ್ಯಾಯ ಒದಗಿಸಬೇಕು ಎಂದ ಅವರು, ಜಿಲ್ಲಾ ಮಹಿಳಾ ಮಂಡಳಿಯ ಒಕ್ಕೂಟಕ್ಕೆ ಸ್ವಂತ ಕಟ್ಟಡದ ಅವಶ್ಯಕತೆ ಇದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ಮೂಲಕ ಸರ್ಕಾರದ ಗಮನ ಸೆಳೆದು ಸ್ವಂತ ಕಟ್ಟಡದ ಕನಸನ್ನು ನನಸು ಮಾಡಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಮಾತನಾಡಿ, ಮಹಿಳೆಯರು ತಮ್ಮ ಹಕ್ಕುಗಳು ಹಾಗೂ ನ್ಯಾಯಕ್ಕಾಗಿ ಹೋರಾಡಬೇಕು. ಮಹಿಳೆಯರ ಹಕ್ಕುಗಳಿಗಾಗಿ ಹೋರಾಡಲು ಸರಕಾರದಲ್ಲಿ ಸರಿಯಾದ ಜನಪ್ರತಿನಿಧಿಗಳು ಇರಬೇಕು. ಸರಕಾರದಲ್ಲಿ ಮಹಿಳಾ ಪ್ರಾತಿನಿಧ್ಯ ಹೆಚ್ಚಿಸಲು ಶೇ 33% ಮೀಸಲಾತಿ ನೀಡುವ ಕಾಯ್ದೆ ತರಲಾಗಿದ್ದು, ರಾಷ್ಟ್ರೀಯ ಜನಗಣತಿ ನಡೆದ ಬಳಿಕ ಇದು ಕಾನೂನಾಗಿ ಜಾರಿಯಾಗಲಿದೆ. ಮಹಿಳೆಯರಿಗೆ ಮೀಸಲಾತಿ ದೊರೆತಾಗ ಅವರ ಧ್ವನಿ ಪಂಚಾಯತ್‌ನಿಂದ ಸಂಸತ್ ಸದನದವರೆಗೆ ಪ್ರತಿಧ್ವನಿಸುವುದು. ಇದಕ್ಕಾಗಿ ಮಹಿಳೆಯರು ಈಗಿನಿಂದಲೇ ತಯಾರಿ ನಡೆಸಿ ನಾಯಕತ್ವ ಗುಣವನ್ನು ಬೆಳೆಸಿಕೊಂಡು ಸಿಕ್ಕಿರುವ ಅವಕಾಶವನ್ನು ಉಪಯೋಗಿಸಿಕೊಳ್ಳಬೇಕು. ಮಹಿಳೆಯರು ಶಾಸಕರಾಗಿ, ಸಂಸದರಾಗಿ ತಮ್ಮ ಕಾರ್ಯಕ್ಷೇತ್ರವನ್ನು ವಿಸ್ತರಿಸಲು ಇದು ಸಕಾಲ. ದೇಶದಲ್ಲಿ ಎಂದು ಮಹಿಳಾ ಮೀಸಲಾತಿ ಶೇ. 50 ರಷ್ಟು ಏರುವುದೋ ಅಂದು ಸಮಾನತೆಯ ಉದ್ದೇಶ ಸಾಕಾರವಾಗುವುದು ಮಹಿಳೆಯರಿಗೆ ನ್ಯಾಯ ದೊರೆಯುವುದು ಎಂದರು.

1009954498

ಈ ಸಂದರ್ಭದಲ್ಲಿ ಮಹಿಳೆಯರು ಉತ್ಪಾದಿಸಿದ ವಸ್ತುಗಳ ಮಳಿಗೆಗಳನ್ನು ಅನಾವರಣಗೊಳಿಸಲಾಯಿತು. ಅತ್ಯುತ್ತಮ ಸೇವೆಗಾಗಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿವೃತ್ತ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.

ಹೆಣ್ಣು ಮಗಳನ್ನು ಉಳಿಸಿ, ಹೆಣ್ಣು ಮಗಳನ್ನು ಓದಿಸಿ ಸಹಿ ಸಂಗ್ರಹಣೆ ಅಭಿಯಾನ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಮಹಿಳಾ ರಕ್ಷಣಾಧಿಕಾರಿ ನಾಗರತ್ನ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ, ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಶೋಭಾ ಕಲ್ಕೂರ, ಹಿರಿಯರಾದ ಸರಳ ಕಾಂಚನ್, ಶ್ಯಾಮಲಾ ಸಿ.ಕೆ, ಜಿಲ್ಲಾ ಹಾಗೂ ತಾಲೂಕು ಮಹಿಳಾ ಮಂಡಳಿಗಳ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಅನುರಾಧಾ ಹಾದಿಮನಿ ಸ್ವಾಗತಿಸಿ, ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ವಸಂತಿ ರಾವ್ ಕೊರಡ್ಕಲ್ ವಂದಿಸಿ, ಸಂಗೀತ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...