ಉಡುಪಿ | ‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ

Date:

ಘನ ಮೋಹನ್ ಸಿ.ಲಾಝರಸ್ ನೇತೃತ್ವದಲ್ಲಿ ಮಾ.20ರಿಂದ 22ರವರೆಗೆ ಉಡುಪಿಯ ಮಿಷನ್ ಕಾಂಪೌಂಡಿನಲ್ಲಿ ಆಯೋಜಿಸಿರುವ ‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ತೋರಿದೆ ಎಂದು ಭಾರತೀಯ ಕ್ರೈಸ್ತ ಒಕ್ಕೂಟ ಇದರ ರಾಜ್ಯಾಧ್ಯಕ್ಷರಾದ ಪ್ರಶಾಂತ್ ಜತ್ತನ್ನ ತಿಳಿಸಿದ್ದಾರೆ.

ಮೂರು ದಿನಗಳ ಸಮಾಧಾನ ಮಹೋತ್ಸವ ಕಾರ್ಯಕ್ರಮವನ್ನು ಫೆಲೋಶಿಪ್ ಓಫ್ ಉಡುಪಿ ಚರ್ಚಸ್ ಇದರ ವತಿಯಿಂದ ಆಯೋಜಿಸಲು ನಿರ್ಧರಿಸಲಾಗಿದ್ದು, ಸುಮಾರು ಐದಾರು ತಿಂಗಳುಗಳಿಂದ ಇದಕ್ಕಾಗಿ ಸಂಪೂರ್ಣ ತಯಾರಿಯನ್ನು ಕೂಡ ನಡೆಸಲಾಗಿದೆ. ಇದರಲ್ಲಿ ಮುಖ್ಯ ಪ್ರವಚನಕಾರರಾಗಿ ಘನ ಮೋಹನ್ ಸಿ.ಲಾಝರಸ್ ಅವರು ಆಗಮಿಸಲಿದ್ದಾರೆ. ಅವರು ಉಡುಪಿಗೆ ಈ ಹಿಂದೆ ಕೂಡ ಎರಡು ಬಾರಿ ಪ್ರವಚನಕಾರರಾಗಿ ಆಗಮಿಸಿದ್ದಾರೆ.

ಕ್ರೈಸ್ತ ಬಾಂಧವರಿಗೆ ಪ್ರಸ್ತುತ ತಪಸ್ಸು ಕಾಲವಾಗಿದ್ದು ಈ ಸಂದರ್ಭದಲ್ಲಿ ಬಹಳಷ್ಟು ಭಕ್ತಿ ಸಂಜೀವನ ಕೂಟಗಳನ್ನು ಆಯೋಜಿಸಲಾಗುತ್ತದೆ. ಅದೇ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು ಅಧಿಕಾರಿಗಳಿಗೆ ಕೂಡ 20 ದಿನಗಳ ಮೊದಲೇ ಮಾಹಿತಿ ನೀಡಲಾಗಿತ್ತು. ಆದರೆ ಕೆಲವೊಂದು ಸಂಘಟನೆಗಳು ಬಂದು ಸಮಾಧಾನ ಮಹೋತ್ಸವ ಮಾಡಲು ಬಿಡುವುದಿಲ್ಲ ಎಂಬ ಬೆದರಿಕೆಯ ಮಾತುಗಳನ್ನು ಮಾಧ್ಯಮದ ಮೂಲಕ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Untitled design 20260315 161436 0000
ಜಾಹಿರಾತು

ಈ ಕುರಿತು ಪೊಲೀಸ್ ಇಲಾಖೆಯವರನ್ನು ಸಂಪರ್ಕಿಸಿದಾಗಿ ಸಂದೇಶ ನೀಡುವ ವ್ಯಕ್ತಿಯನ್ನು ಬದಲಾಯಿಸಲು ಪೊಲೀಸರು ಮನವಿ ಮಾಡಿದ್ದರು. ಆದರೆ ಈಗಾಗಲೇ ಪೂರ್ಣ ತಯಾರಿ ಆಗಿದ್ದು ಯಾವುದೇ ರೀತಿಯ ಸಮಸ್ಯೆ ಆಗಬಾರದು ಎಂಬ ನಿಟ್ಟಿನಲ್ಲಿ ಸಂಘಟಕರು ಮಾನ್ಯ ಉಚ್ಚ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದು ವಾದ ವಿವಾದಗಳನ್ನು ಆಲಿಸಿ ಕೊನೆಗೆ ಕಾರ್ಯಕ್ರಮವನ್ನು ನಡೆಸಲು ನ್ಯಾಯಾಲಯ ಪರವಾನಿಗೆಯನ್ನು ನೀಡಿದೆ. ಈ ಮೂಲಕ ನ್ಯಾಯಾಲಯ ನಮ್ಮ ಮೂಲಭೂತ ಹಕ್ಕುಗಳನ್ನು ಎತ್ತಿ ಹಿಡಿದು ಕಾರ್ಯಕ್ರಮಕ್ಕೆ ಸೂಕ್ತ ಭದ್ರತೆಯನ್ನು ಒದಗಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದೆ. ನ್ಯಾಯಾಲಯದ ಆದೇಶದಂತೆ ಈಗಾಗಲೇ ತಯಾರಿ ಕೊನೆಯಹಂತದಲ್ಲಿದ್ದು ಕಾರ್ಯಕ್ರಮ ಯಶಸ್ವಿಯಾಗಿ ಜರುಗಲಿದೆ. ಸಾರ್ವಜನಿಕ ಕ್ರೈಸ್ತ ಬಂಧುಗಳು ಗಾಳಿಸುದ್ದಿಗೆ ಕಿವಿಗೊಡದೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಶಾಂತ್ ಜತ್ತನ್ನ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...