ವೈಯಕ್ತಿಕ ದ್ವೇಷದಿಂದ ನನ್ನ ರೆಸಾರ್ಟ್ ನಿರ್ಮಾಣಕ್ಕೆ ಉಡುಪಿ ಶಾಸಕರಿಂದ ಅಡ್ಡಗಾಲು : ಕೆ.ರಘುಪತಿ ಭಟ್ ಆರೋಪ

Date:

ಉಡುಪಿ ನಗರದ ಬಡನಿಡಿಯೂರಿನ ಸಮುದ್ರ ತೀರದಲ್ಲಿ ರೆಸಾರ್ಟ್ ನಿರ್ಮಿಸಲು ಕಾನೂನಿನಲ್ಲಿ ಯಾವುದೇ ತೊಡಕಿಲ್ಲದೇ ಇದ್ದರೂ ವೈಯಕ್ತಿಕ ದ್ವೇಷದಿಂದ ಶಾಸಕ ಯಶ್ವಾಲ್ ಸುವರ್ಣ ಅವರು ರೆಸಾರ್ಟ್ ನಿರ್ಮಾಣಕ್ಕೆ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಆರೋಪಿಸಿದ್ದಾರೆ.

ಕರಂಬಳ್ಳಿಯ ಅವರ ನಿವಾಸದಲ್ಲಿ ಕರೆಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜಕಾರಣಿಗಿಂತ ಮೊದಲು ನಾನು ಉದ್ಯಮಿ. ರಾಜಕೀಯ ನನ್ನ ವೃತ್ತಿಯಲ್ಲಿ ಪ್ರವೃತ್ತಿ. ಹೋಟೆಲ್ ಉದ್ಯಮ ನಡೆಸಿಕೊಂಡು ಪ್ರವಾಸೋದ್ಯಮ ಬೆಳೆಸುವ ಉದ್ದೇಶದಿಂದ ಕಡಲ ತೀರದಲ್ಲಿ 1.60 ಎಕರೆ ಜಾಗದಲ್ಲಿ ರೆಸಾರ್ಟ್ ಮಾಡಲು ಹೊರಟಿದ್ದೆ.

ಅನುಮತಿ ಕೂಡ ಪಡೆದಿದ್ದೆ. ಸಿಂಗಲ್ ಲೇ ಔಟ್ ಗೆ 2 ವರ್ಷಗಳಿಂದ ಅರ್ಜಿ ಹಾಕಿದರೂ ಇವರೆಗೂ ಸಿಕ್ಕಿಲ್ಲ. ಇದಕ್ಕೆ ಹೈಕೋರ್ಟ್ ಮೊರೆ ಹೋದರೂ ಬೇರೆ ಬೇರೆ ಕಾರಣ ನೀಡಿ ನಿರಾಕರಿಸಿದರು. ಆದರೆ ಫೆ. 20 ರಂದು ಸಿಂಗಲ್ ಲೇ ಔಟ್ ನೀಡಲು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಪತ್ರ ಬಂದಿದೆ. ಆದರೆ ಒಂದು ತಿಂಗಳಾದರೂ ಈತನಕ ಅನುಮತಿ ಪತ್ರ ಕೊಡುತ್ತಿಲ್ಲ. ಮೂರು ಬಾರಿ ಶಾಸಕನಾಗಿದ್ದ ಸಮಯದಲ್ಲಿ ಯಾರಿಗೆ ಸಮಸ್ಯೆಯಾದರೂ ಜಾತಿ ಧರ್ಮ ಮರೆತು ಸ್ಪಂದಿಸಿದ್ದೇನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ ಈಗ ನನಗೆ ಸಮಸ್ಯೆಯಾಗುತ್ತಿದೆ. ಉಡುಪಿ ಶಾಸಕ ಯತ್ಪಾಲ್ ಸುವರ್ಣ ಅವರು ವೈಯಕ್ತಿಕ ದ್ವೇಷಕ್ಕಾಗಿ 24 ತಿಂಗಳಿನಿಂದ ತೊಂದರೆಯನ್ನುಂಟು ಮಾಡುತ್ತಿದ್ದಾರೆ ಎಂದು ದೂರಿದರು.

ಶಾಸಕ ಯಶ್ ಪಾಲ್ ಸುವರ್ಣ ಅವರು ವೈಯಕ್ತಿಕ ದ್ವೇಷದಿಂದ ರೆಸಾರ್ಟ್ ನಿರ್ಮಾಣಕ್ಕೆ ತೊಂದರೆ ಮಾಡುತ್ತಿದ್ದರು ಕೂಡ ಜಿಲ್ಲಾಡಳಿತವು ಸುಮ್ಮನಿದೆ. ಕೋರ್ಟ್ ಆದೇಶಕ್ಕೂ ಬೆಲೆ ಇಲ್ಲ. ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ರೌಡಿಸಂಗೆ ಬೆದರುತ್ತಿದ್ದಾರೆ ಎಂದು ಆರೋಪಿಸಿದರು.

ಪ್ರಾಧಿಕಾರದ ಎದುರು ಪ್ರತಿಭಟನೆ: ಮಾರ್ಚ್ 23 ರಂದು ಬೆಳಗ್ಗೆ 9.30ಗಂಟೆಯಿಂದ ಸಂಜೆ 6 ಗಂಟೆಗೆವರೆಗೆ ನಗರಾಭಿವೃದ್ಧಿ ಪ್ರಾಧಿಕಾರದ ಎದುರು ಸಾತ್ವಿಕ ಪ್ರತಿಭಟನೆ ನಡೆಸುವುದಾಗಿ ಹೇಳಿದರು. ನ್ಯಾಯ ಸಿಗುವರೆಗೂ ಹೋರಾಟ ಮುಂದುವರಿಸುವುದಾಗಿ ಹೇಳಿದ ಕೆ.ರಘುಪತಿ ಭಟ್, ಸಿಂಗಲ್ ಲೇ ಔಟ್ ಕೊಡಬೇಕು. ಕೊಡುವುದಿಲ್ಲ ಎಂದಾದರೆ ಹಿಂಬರಹ ಆದರೂ ಕೊಡಲಿ. ಹಿಂಬರಹ ಕೊಟ್ಟರೆ ಧರಣಿ ಕೈಬಿಟ್ಟು ಕಾನೂನಿನ ಮೊರೆ ಹೋಗುವುದಾಗಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...