ಉಡುಪಿ | ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷನ ದೇಶದ್ರೋಹ ಪ್ರಕರಣ: ಸಮಗ್ರ ತನಿಖೆಗೆ ಯುವ ಕಾಂಗ್ರೆಸ್ ಮನವಿ

Date:

ಉಡುಪಿ ಜಿಲ್ಲೆಯ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಎಂಬಾತನು ನಡೆಸುತ್ತಿರುವ ರೆಸಾರ್ಟ್ ನಲ್ಲಿ ಯಾವುದೇ ಮಾನ್ಯ ದಾಖಲೆಗಳಿಲ್ಲದ ವಿದೇಶಿಗರನ್ನು ಅಕ್ರಮವಾಗಿ ಕೆಲಸಕ್ಕೆ ಇಟ್ಟುಕೊಂಡು ದೇಶದ ಭದ್ರತೆಗೆ ಆತಂಕ ಒಡ್ಡಿರುವ ಘಟನೆ ದೇಶದ್ರೋಹವಾಗಿದ್ದು ಕೂಡಲೇ ಆತನನ್ನು ಬಂಧಿಸಿ ತನಿಖೆ ನಡೆಸಬೇಕು ಹಾಗು ಇದರ ಹಿಂದಿರುವ ಷಡ್ಯಂತ್ರ ಬಯಲಿಗೆ ಎಳೆಯಬೇಕೆಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಇಂದು ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿ ಹರಿರಾಂ ಶಂಕರ್‌ ರವರಿಗೆ ಮನವಿಯನ್ನು ನೀಡುವ ಮೂಲಕ ಒತ್ತಾಯಿಸಿದ್ದಾರೆ.

ಯಾವುದೇ ದೇಶದ ಪ್ರಜೆಗಳು ಅಕ್ರಮವಾಗಿ ದೇಶದಲ್ಲಿ ವಾಸಿಸುವುದು ದೇಶದ ಆಂತರಿಕ ಭದ್ರತೆ ಮಾರಕವಾಗುವ ಸಾಧ್ಯತೆ ಇರುವುದರಿಂದ, ಇಂತಹವರ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುವುದು ಅಗತ್ಯವಾಗಿದೆ. ರೆಸಾರ್ಟ್/ಲಾಡ್ಜ್ ಗಳು ಯಾವುದೇ ಮಾಹಿತಿಗಳಿಲ್ಲದ ವ್ಯಕ್ತಿಗಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಅಪರಾಧವಾಗಿದೆ. ಅಂತಹ ರೆಸಾರ್ಟ್/ಲಾಡ್ಜ್ ಗಳ ಮಾಲಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದು ಸೇರಿದಂತೆ ರೆಸಾಟರ್ಟ್/ಲಾಡ್ಜ್ ಗಳಲ್ಲಿ ಯಾವುದೇ ದೇಶದ ಪ್ರಜೆಗಳು ಬಂದಲ್ಲಿ ಅವರಿಂದ ಇ ಫಾರ್ಮ್ ಪಡೆದು ಜಿಲ್ಲಾ ಪೊಲೀಸ್ ಕಚೇರಿಗೆ ಕಡ್ಡಾಯವಾಗಿ ಮಾಹಿತಿ ನೀಡಬೇಕು. ಯಾವುದೇ ದೇಶದ ಪ್ರಜೆ ಬಂದಿದ್ದು, ಅವರಲ್ಲಿ ಸಮರ್ಪಕ ದಾಖಲಾತಿ ಇಲ್ಲದೇ ಇದ್ದಲ್ಲಿ ಕೂಡಲೇ ಸ್ಥಳೀಯ ಪೊಲೀಸ್ ಮತ್ತು ಜಿಲ್ಲಾ ಪೊಲೀಸ್ ಕಚೇರಿಗೆ ಕೂಡಲೇ ಮಾಹಿತಿ ನೀಡಬೇಕು ಎಂದು ರೆಸಾರ್ಟ್/ಲಾಡ್ಜ್ ಗಳಲ್ಲಿ ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡುವಂತಹ ರೆಸಾರ್ಟ್/ಲಾಡ್ಜ್ ಗಳ ಮ್ಯಾನೇಜರ್ ಹಾಗೂ ಮಾಲಕರ ವಿರುದ್ದ ಪ್ರಕರಣ ದಾಖಲಿಸುವಂತೆ ಯುವ ಕಾಂಗ್ರೆಸ್ ಒತ್ತಾಯಿಸಿದೆ . ಆದುದರಿಂದ ಜಿಲ್ಲೆಯ ಯಾವುದೇ ರೆಸಾರ್ಟ್/ಲಾಡ್ಜ್ ಗಳಲ್ಲಿ ಯಾವುದೇ ರೀತಿಯ ಅನೈತಿಕ/ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡಬಾರದು. ಉಡುಪಿ ಜಿಲ್ಲೆಯಲ್ಲಿ ರೆಸಾರ್ಟ್/ಲಾಡ್ಜ್ ಗಳಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ಕಟ್ಟುನಿಟ್ಟಿನ ಕ್ರಮ ತೆಗುದುಕೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ಯುವ ಕಾಂಗ್ರೆಸ್ ಮನವಿ ಮಾಡಿದೆ. ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೃಷ್ಣ ಶೆಟ್ಟಿ,ನವೀನ್ ಸಾಲಿಯಾನ್,ಮಮತಾ ನಾಯ್ಕ್,ಶಮಂತ್ ಕುಂದಾಪುರ, ಅಫ್ರಿದ್,ಪ್ರವೀಣ್ ಬಾರ್ಕೂರ್ ಹಾಗೂ ಯುವ ಕಾಂಗ್ರೆಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಹಹಹಹ

ಅಕ್ರಮ ವಿದೇಶಿಗರಿಗೆ ಕೆಲಸ: ಯುವ ಮೋರ್ಚಾ ಅಧ್ಯಕ್ಷರ ಬಂಧನಕ್ಕೆ ಕೃಷ್ಣ ಶೆಟ್ಟಿ ಬಜಗೋಳಿ ಆಗ್ರಹ
ರೆಸಾರ್ಟ್‌ನಲ್ಲಿ ಯಾವುದೇ ಮಾನ್ಯ ದಾಖಲೆಗಳಿಲ್ಲದ ಅಕ್ರಮ ವಿದೇಶಿ ವಲಸಿಗರಿಗೆ ಕೆಲಸ ನೀಡಿರುವುದು ಗಂಭೀರ ದೇಶದ್ರೋಹದ ಕೃತ್ಯವಾಗಿದ್ದು, ತಕ್ಷಣವೇ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸಬೇಕು ಎಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ಹೇಳಿದ್ದು. ದೇಶಪ್ರೇಮದ ಬಗ್ಗೆ ಭಾಷಣ ಮಾಡುವ ಬಿಜೆಪಿ ನಾಯಕರು ತಮ್ಮದೇ ಸಂಸ್ಥೆಗಳಲ್ಲಿ ಅಕ್ರಮ ವಲಸಿಗರಿಗೆ ಆಶ್ರಯ ನೀಡಿರುವುದು ಡೋಂಗಿ ದೇಶಪ್ರೇಮವನ್ನು ಬಹಿರಂಗಪಡಿಸಿದೆ ಎಂದು ಟೀಕಿಸಿದರು. ಪ್ರಕರಣದ ಹಿಂದೆ ಇರುವ ಉದ್ದೇಶ, ಎಷ್ಟು ದಿನಗಳಿಂದ ಅಕ್ರಮ ವಲಸಿಗರು ಇಲ್ಲಿ ವಾಸವಾಗಿದ್ದಾರೆ, ರೆಸಾರ್ಟ್‌ನಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇಶದ್ರೋಹ ಪ್ರಕರಣ: ಸಮಗ್ರ ತನಿಖೆಗೆ ರಮೇಶ್ ಕಾಂಚನ್ ಆಗ್ರಹ
ರಾಜ್ಯದ ಯಾವುದೇ ಮೂಲೆಯಲ್ಲಿ ಅಕ್ರಮ ವಿದೇಶಿ ನುಸುಳುಕೋರರ ಬಂಧನವಾದರೆ ಕಾಂಗ್ರೆಸ್ ವಿರುದ್ದ ಆರೋಪ ಮಾಡುವ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ತಮ್ಮದೇ ಪಕ್ಷದ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ನಿರ್ವಹಿಸುವ ಹೋಟೆಲಿನಲ್ಲಿ ಅಕ್ರಮವಾಗಿ ದೇಶದೊಳಗೆ ಬಂದಿರುವ ವಿದೇಶಿಯರನ್ನು ಕೆಲಸಕ್ಕಿಟ್ಟಿರುವ ಕುರಿತು ಮೌನ ವಹಿಸಿರುವುದು ಯಾಕೆ? ದೇಶದ ಭದ್ರತೆಗೆ ಅಪಾಯ ತಂದೊಡ್ಡಬಲ್ಲ ಈ ಗಂಭೀರ ದೇಶದ್ರೋಹ ಪ್ರಕರಣವನ್ನು ಶಾಸಕರು ಸಮರ್ಥಿಸಿಕೊಳ್ಳುವರೇ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಅಕ್ರಮ ನುಸುಳುಕೋರರ ಪರ ಎಂದು ಹೋದಲೆಲ್ಲಾ ಭಾಷಣ ಬಿಗಿಯುವ,ತಾವೇ ದೊಡ್ಡ ದೇಶ ಭಕ್ತರು ಎಂದು ಪೋಸು ಕೊಡುವ ಶಾಸಕರು ಹಾಗೂ ಬಿಜೆಪಿ ನಾಯಕರಿಗೆ ಉಡುಪಿ ಜಿಲ್ಲೆಯ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಎಂಬಾತನು ನಡೆಸುತ್ತಿರುವ ರೆಸಾರ್ಟ್ ನಲ್ಲಿ ಯಾವುದೇ ಮಾನ್ಯ ದಾಖಲೆಗಳಿಲ್ಲದ ವಿದೇಶಿಗರನ್ನು ಅಕ್ರಮವಾಗಿ ಕೆಲಸಕ್ಕೆ ಇಟ್ಟುಕೊಂಡು ದೇಶದ ಭದ್ರತೆಗೆ ಆತಂಕ ಒಡ್ಡಿರುವಾಗ ದೇಶದ ಭದ್ರತೆಯನ್ನು ಗುತ್ತಿಗೆ ಪಡೆದುಕೊಂಡಿರುವ ಬಿಜೆಪಿಗರಿಗೆ ಆತನ ದೇಶದ್ರೋಹದ ಕೃತ್ಯವನ್ನು ಖಂಡಿಸಲು ನಾಲಿಗೆ ಹೊರಡದಿರುವುದು ವಿಪರ್ಯಾಸ. ಬಿಜೆಪಿಗರು ಹೇಳುವುದು ವೇದಾಂತ ಮಾಡುವುದು ಎಲ್ಲಾ ಅನಾಚಾರ ಎಂಬುದು ಈ ಪ್ರಕರಣ ಮೂಲಕ ಸಾಬೀತಾಗಿದೆ. ಈ ಹಿಂದೆ ಕೂಡ ಬ್ರಹ್ಮಾವರದಲ್ಲಿ ಬಿಜೆಪಿ ಯುವ ಮುಖಂಡ ಮನೆಯಲ್ಲಿ ಅಕ್ರಮ ಪಟಾಕಿ ದಾಸ್ತಾನು ಮಾಡಿದ್ದು ಕೂಡ ಬೆಳಕಿಗೆ ಬಂದಿತ್ತು. ಬಿಜೆಪಿಗರು ಒಟ್ಟಾರೆಯಾಗಿ ಅಕ್ರಮ ಚಟುವಟಿಕೆಗಳಿಗೆ ನೇರವಾಗಿ ಬೆಂಬಲಿಸುವುದಲ್ಲದೆ ಬಳಿಕ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ.

ಇತ್ತೀಚೆಗೆ ಬಿಜೆಪಿಗರು ದೇವರು ಎಂದು ಭಾವಿಸಿರುವ ಉತ್ತರ ಪ್ರದೇಶದ ಯೋಗಿ ಅದಿತ್ಯನಾಥ್ ಅವರು ಆಡಳಿತ ನಡೆಸುವ ರಾಜ್ಯದಿಂದ ಬಂದು ಮಲ್ಪೆಯ ಕೊಚ್ಚಿನ ಶಿಪ್ ಯಾರ್ಡ್ ನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ನೌಕೆಗಳ ಕುರಿತು ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಿ ಬಂಧನಕ್ಕೆ ಒಳಗಾಗಿದ್ದರು. ಅನ್ಯಾಯವೇ ನಡೆಯಲು ಬಿಡುವುದಿಲ್ಲ ಎನ್ನುವ ಯೋಗಿ ಅವರ ರಾಜ್ಯದ ಜನರು ಕರ್ನಾಟಕದಲ್ಲಿ ಬಂದು ಅಕ್ರಮ ಚಟುವಟಿಕೆ ಮಾಡಿದಾಗಲೂ ಕೂಡ ಬಿಜೆಪಿಗರು ಮೌನವಾಗಿದ್ದರು ಎನ್ನುವುದು ಒಂದು ರೀತಿಯಲ್ಲಿ ಇವರ ದೇಶಪ್ರೇಮದ ಬಗ್ಗೆ ಸಂಶಯ ಮೂಡುತ್ತದೆ. ಈ ನಿಟ್ಟಿನಲ್ಲಿ ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷನ ರೆಸಾರ್ಟ್ ನಲ್ಲಿ ಬಂಧಿಸಿರುವ ಆಕ್ರಮ ನುಸುಳುಕೋರರಾದ ವಿದೇಶಿಗರ ಹಾಗೂ ಅವರಿಗೆ ಆಶ್ರಯ ಕೊಟ್ಟು ಉದ್ಯೋಗ ನೀಡಿರುವ ಗಂಭೀರ ದೇಶ ದ್ರೋಹದ ಪ್ರಕರಣದ ಬಗ್ಗೆ ಪೊಲೀಸ್ ಇಲಾಖೆ ನಿಷ್ಪಕ್ಷಪಾತವಾದ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ರಮೇಶ್ ಕಾಂಚನ್ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕೋಟ ಜಾಮಿಯಾ ಮಸ್ಜಿದ್ ಸಾಮಾಜಿಕ ಕಾರ್ಯ ಸೌಹಾರ್ದತೆಗೆ ಸಾಕ್ಷಿ‌ : ಇದ್ರಿಸ್ ಹೂಡೆ

ರಂಜಾನ್ ಮಾಸ ಪವಿತ್ರವಾದ ಮಾಸದ ಜೊತೆಗೆ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಪಸರಿಸಿಕೊಂಡಿದೆ...

ಉಡುಪಿ | ‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ

ಘನ ಮೋಹನ್ ಸಿ.ಲಾಝರಸ್ ನೇತೃತ್ವದಲ್ಲಿ ಮಾ.20ರಿಂದ 22ರವರೆಗೆ ಉಡುಪಿಯ ಮಿಷನ್ ಕಾಂಪೌಂಡಿನಲ್ಲಿ...

ಉಡುಪಿ | ಜಿಲ್ಲೆಯಾದ್ಯಂತ ಸಂಭ್ರಮದ ʼಈದುಲ್ ಫಿತ್ರ್ʼ ಆಚರಣೆ

ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಶುಕ್ರವಾರ ಸಂಭ್ರಮ...

ಕರಾವಳಿ ಹೊರತುಪಡಿಸಿ ರಾಜ್ಯಾದ್ಯಂತ ಮಾ.21ರಂದು ಈದುಲ್ ಫಿತ್ ಆಚರಣೆ

ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಇತರ ಭಾಗಗಳಲ್ಲಿ ಈ ವರ್ಷ ಈದುಲ್...