ಉಡುಪಿ ಜಿಲ್ಲೆಯ ಸಂತೆಕಟ್ಟೆ ಪ್ರದೇಶದಲ್ಲಿ ಇಂದು ಕಾರು ಮತ್ತು ಎಕ್ಸ್‌ಪ್ರೆಸ್ ಬಸ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಹಲವರು ಗಾಯಗೊಂಡ ಘಟನೆ ಸಂಭವಿಸಿದೆ.
ವಾಹನವೊಂದನ್ನು ಹಿಂದಿಕ್ಕುವ ವೇಳೆ ನಿಯಂತ್ರಣ ತಪ್ಪಿದ ಕಾರು ಎದುರಿಗೆ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಪರಿಣಾಮವಾಗಿ ಬಲೆನೊ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಅವರ ಸ್ಥಿತಿ ಆತಂಕಕಾರಿ ಎನ್ನಲಾಗಿದೆ.

ಇನ್ನೊಂದೆಡೆ, ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆ ನಡೆದ ತಕ್ಷಣ ಸ್ಥಳೀಯರು ಹಾಗೂ ಸಾರ್ವಜನಿಕರು ಧಾವಿಸಿ ರಕ್ಷಣಾ ಕಾರ್ಯಗಳಲ್ಲಿ ತೊಡಗಿಕೊಂಡರು. ಗಾಯಾಳುಗಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗಳಿಗೆ ಸಾಗಿಸಲಾಯಿತು.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.





