ಶಿಕ್ಷಕರ ದಿನಾಚರಣೆ | ‘ಕನ್ನಡ ಮಾಧ್ಯಮ ಶಾಲೆ ಉಳಿಸಿ’ ಆಂದೋಲನದ ಮನೋಜ್ ಕಡಬ ಅವರಿಗೆ ರಾಜ್ಯಮಟ್ಟದ ಪ್ರಶಸ್ತಿ

Date:

‘ಕನ್ನಡ ಮಾಧ್ಯಮ ಶಾಲೆ ಉಳಿಸಿ’ ಆಂದೋಲನದಲ್ಲಿ ಸಕ್ರಿಯವಾಗಿ ತೊಡಗಿರುವ, ವಿದ್ಯಾರ್ಥಿಗಳಿಗೆ ನಾನಾ ರೀತಿಯಲ್ಲಿ ನೆರವು ನೀಡುತ್ತಿರುವ ಮನೋಜ್‌ ಅವರನ್ನು ‘ರಾಜ್ಯಮಟ್ಟದ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ.

ಉಡುಪಿ ಜಿಲ್ಲೆಯ ಅಂಬಲಪಾಡೊಯಲ್ಲಿ ಸೆಪ್ಟೆಂಬರ್‌ 5ರಂದು ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು, ಶ್ರೀ ಜನಾರ್ದನ ಮಹಾಂಕಾಳಿ ದೇವಸ್ಥಾನ ಸಮಿತಿ, ಅಂಬಲಪಾಡಿ ಒಗ್ಗೂಡಿಆಯೋಜಿಸಿರುವ ‘ಶಿಕ್ಷಕ ಸಾಹಿತಿಗಳ ಸಮ್ಮೇಳನ’ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಲಾಗುತ್ತದೆ ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ.

ಮನೋಜ್ ಕಡಬ ಅವರು ಕನ್ನಡ ಮಾಧ್ಯಮ ಶಾಲೆ ಉಳಿಸಿ ಆಂದೋಲನವನ್ನು ಆರಂಭಿಸಿದ್ದಾರೆ. ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸುವ ಕಾಯಕದಲ್ಲಿ ನಿರತಗಿದ್ದಾರೆ. ಅವರು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಅತಿಥಿ ಹಾಗೂ ಗೌರವ ಶಿಕ್ಷಕಿಯರಿಗೆ ಹಾಗೂ ಮಕ್ಕಳಿಗೆ ವರ್ಷ ಪೂರ್ತಿ ಉಚಿತ ಸ್ಪೋಕನ್ ಇಂಗ್ಲಿಷ್ ತರಬೇತಿ ನೀಡುತ್ತಿದ್ದಾರೆ. ಸರ್ಕಾರಿ ಶಾಸಲೆಗಳ ಮಕ್ಕಳು ಇಂಗ್ಲಿಷ್‌ನಲ್ಲಿ ಮಾತನಾಡುವುದನ್ನು ಕಾಣುವ ನೆರೆಮನೆಯ ಮಕ್ಕಳೂ ಕನ್ನಡ ಮಾಧ್ಯಮ ಶಾಲೆಗಳತ್ತ ಆಕರ್ಷಿತರಾಗುವಂತೆ ಮಾಡುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕೋಟ ಜಾಮಿಯಾ ಮಸ್ಜಿದ್ ಸಾಮಾಜಿಕ ಕಾರ್ಯ ಸೌಹಾರ್ದತೆಗೆ ಸಾಕ್ಷಿ‌ : ಇದ್ರಿಸ್ ಹೂಡೆ

ರಂಜಾನ್ ಮಾಸ ಪವಿತ್ರವಾದ ಮಾಸದ ಜೊತೆಗೆ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಪಸರಿಸಿಕೊಂಡಿದೆ...

ಉಡುಪಿ | ‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ

ಘನ ಮೋಹನ್ ಸಿ.ಲಾಝರಸ್ ನೇತೃತ್ವದಲ್ಲಿ ಮಾ.20ರಿಂದ 22ರವರೆಗೆ ಉಡುಪಿಯ ಮಿಷನ್ ಕಾಂಪೌಂಡಿನಲ್ಲಿ...

ಉಡುಪಿ | ಜಿಲ್ಲೆಯಾದ್ಯಂತ ಸಂಭ್ರಮದ ʼಈದುಲ್ ಫಿತ್ರ್ʼ ಆಚರಣೆ

ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಶುಕ್ರವಾರ ಸಂಭ್ರಮ...

ಕರಾವಳಿ ಹೊರತುಪಡಿಸಿ ರಾಜ್ಯಾದ್ಯಂತ ಮಾ.21ರಂದು ಈದುಲ್ ಫಿತ್ ಆಚರಣೆ

ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಇತರ ಭಾಗಗಳಲ್ಲಿ ಈ ವರ್ಷ ಈದುಲ್...