ಉಡುಪಿ | ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಜನಪರ ಬಜೆಟ್ : ಉದಯ್ ಶೆಟ್ಟಿ ಮುನಿಯಾಲು

Date:

ಬಹು ನಿರೀಕ್ಷಿತ ರಾಜ್ಯ ಬಜೆಟನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಡಿಸಿದ್ದು, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಜನರ ಅನುಕೂಲತೆಗಳನ್ನು ಸೂಕ್ಷ್ಮವಾಗಿ ಪರಿಗಣಿಸಿ ಬಜೆಟ್ ಮಂಡಿಸಲಾಗಿದೆ ಎಂದು ಕಾರ್ಕಳ ಕಾಂಗ್ರೆಸ್ ನಾಯಕ ಉದಯ್ ಶೆಟ್ಟಿ ಮುನಿಯಾಲು ಹೇಳಿದ್ದಾರೆ.

ವಿಶೇಷವಾಗಿ ಮೀನುಗಾರರಿಗೆ ಉಚಿತವಾಗಿ ನೀಡುವ ಮೀನುಗಾರಿಕೆ ಸಲಕರಣೆ ಕಿಟ್‌ ದರ ₹10,000ದಿಂದ ₹20,000ಕ್ಕೆ ಹೆಚ್ಚಳ, ಜೈವಿಕ ತಂತ್ರಜ್ಞಾನದ ಉದ್ಯಮಗಳು, ನವೀನ ತಂತ್ರಜ್ಞಾನದ ಅಭಿವೃದ್ಧಿ ಮತ್ತು ಸಮುದ್ರ ಕೃಷಿಯನ್ನು ಪ್ರೋತ್ಸಾಹಿಸಲು ಮಂಗಳೂರು ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ಸೆಂಟರ್‌ ಆಫ್‌ ಎಕ್ಸಲೆನ್ಸ್ ಸ್ಥಾಪನೆ
ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಮತ್ತು ಚಿಕ್ಕಮಗಳೂರಿನಲ್ಲಿ ಮತ್ಸ್ಯದರ್ಶಿನಿಗಳ ಸ್ಥಾಪನೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಮೀನು ಮಾರುಕಟ್ಟೆಯನ್ನು ನಿರ್ಮಿಸುವ ಯೋಜನೆಯಿದೆ ಎಂದು ಹೇಳಿದ್ದಾರೆ.

ಶಿಕ್ಷಣಕ್ಕೆ ವಿಶೇಷವಾಗಿ ಯೋಜನೆ ರೂಪಿಸಿ 3,900 ಕೋಟಿ ಅನುದಾನದಡಿ ʼಉತ್ತಮ ಕಲಿಕೆ ಉಜ್ವಲ ಭವಿಷ್ಯʼ ಎಂಬ ಘೋಷವಾಕ್ಯದೊಂದಿಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ಒಟ್ಟಾರೆ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್‌ ಶಾಲೆಗಳಾಗಿ ಉನ್ನತೀಕರಿಸುವ ಯೋಜನೆ ನೀಡಲಾಗಿದ್ದು ಆ ಮೂಲಕ ಶಿಕ್ಷಣ ವ್ಯವಸ್ಥೆಯಲ್ಲಿ ಹೊಸ ಮೈಲಿಗಲ್ಲನ್ನು ಸ್ಥಾಪಿಸಲು ಸರಕಾರ ಬದ್ಧವಾಗಿದೆ. ರಾಜ್ಯದ ಕಟ್ಟ ಕಡೆಯ ವ್ಯಕ್ತಿಯ ಕುರಿತು ಕಾಳಜಿ ಹೊಂದಿರುವ ರಾಜ್ಯ ಸರಕಾರ ಜನಪರ ಬಜೆಟ್ ಮಂಡಿಸಿದೆ ಎಂದು ಉದಯ್ ಶೆಟ್ಟಿ ಅವರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...