ಉಡುಪಿ | ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ 14 ಕೋಟಿ ರೂ. ವಂಚನೆ; ತನಿಖೆಗೆ ಕೋರ್ಟ್‌ ಆದೇಶ

Date:

ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇರುವ ಬ್ರಹ್ವಾವರದ ಏಕೈಕ ಸಕ್ಕರೆ ಕಾರ್ಖಾನೆಯಲ್ಲಿದ್ದ ಗುಜರಿ ಮಾರಾಟದಲ್ಲಿ 14 ಕೋಟಿ ರೂ. ಹೆಚ್ಚು ಅಕ್ರಮ ನಡೆದಿದೆ. ಬಿಜೆಪಿ ಬೆಂಬಲಿತ ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ಅಕ್ರಮ ಎಸಗಿದ್ದಾರೆ. ಅವರ ವಿರುದ್ಧ ತನಿಖೆ ನಡೆಸಬೇಕೆಂದು ಉಡುಪಿ ಜಿಲ್ಲಾ ರೈತ ಸಂಘ ಸಲ್ಲಿಸಿದ್ದ ದೂರನ್ನು ಹೆಚ್ಚುವರಿ ಸಿವಿಲ್ ನ್ಯಾಯಾಲಯ ದಾಖಲು ಮಾಡಿಕೊಂಡಿದೆ.

ಅರ್ಜಿದಾರರ ಪರವಾಗಿ ವಕೀಲ ಆರ್. ಜಗನ್ನಾಥ್ ವಾದ ಮಂಡಿಸಿದ್ದು, ವಾದ ಆಲಿಸಿದ ನ್ಯಾಯಾಧೀಶರು, “ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಿ ಡಿಸೆಂಬರ್ 12ರೊಗಳಗೆ ವರದಿ ಸಲ್ಲಿಸಬೇಕು” ಎಂದು ಬ್ರಹ್ಮಾವರ ಪೊಲೀಸ್ ಠಾಣೆ ಪೊಲೀಸರಿಗೆ ಆದೇಶಿಸಿದ್ದಾರೆ.

ಗುಜರಿ ಮಾರಾಟದಲ್ಲಿನ ಭ್ರಷ್ಟಾಚಾರವನ್ನು ತನಿಖೆ ನಡೆಸಬೇಕೆಂದು ಒತ್ತಾಯಿಸಿ ಇತ್ತೀಚೆಗೆ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಕಾರ್ಖಾನೆಯ ಆಡಳಿತ ಮಂಡಳಿ ಗುಜರಿ ಸರಕುಗಳನ್ನು 21 ಕೋಟಿ ರೂಪಾಯಿಗೆ ಮಾರಿ, ಅದರಲ್ಲಿ 14 ಕೋಟಿಗಿಂತಲೂ ಹೆಚ್ಚು ಹಣವನ್ನು ಸರ್ಕಾರ ಮತ್ತು ರೈತರಿಗೆ ವಂಚನೆ ಮಾಡಿದೆ. ಇದರಲ್ಲಿ ಬಿಜೆಪಿಯ ಕೈವಾಡವೂ ಇದೆ ಎಂದು ಆರೋಪಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುಜರಿ ಮಾರಾಟದ ಪ್ರಕ್ರಿಯೆಯನ್ನು ಶಾಸನಬದ್ಧವಾಗಿ ಇ-ಪ್ರಾಕ್ಯುರ್‌ಮೆಂಟ್ ಟೆಂಡರ್ ಮುಖೇನ ಮಾಡಬೇಕಿತ್ತು. ಅಥವಾ ಕೇಂದ್ರ ಸರ್ಕಾರದ ಅಂಗ ಸಂಸ್ಥೆಯಾದ ಸೆಂಟ್ರಲ್ ಸ್ಕ್ಯಾಪ್ ಬೋರ್ಡ್ ಮುಖಾಂತರ ವಿಲೇವಾರಿ ಮಾಡಬೇಕಾಗಿತ್ತು. ಆದರೆ, ಆಡಳಿತ ಮಂಡಳಿಯವರು ಕಾನೂನುಗಳನ್ನು ಗಾಳಿಗೆ ತೂರಿ, ಸಂಬಂಧಪಟ್ಟ ಇಲಾಖೆಯ ಅನುಮೋಧನೆ ಪಡೆಯದೇ 4 ಜನರ ತಾಂತ್ರಿಕ ಸಮಿತಿಯನ್ನು ರಚಿಸಿಕೊಂಡು ಅವರಿಗೆ ಬೇಕಾದಂತೆ ಟೆಂಡರ್‌ ಕರೆದಿದ್ದಾರೆ. ಟೆಂಡರ್‌ನಲ್ಲಿ ಅತಿಹೆಚ್ಚು ಬಿಡ್‌ ದರ ನಮೂದಿಸಿದ ನ್ಯೂ ರಾಯಲ್ ಟ್ರೇಡರ್ಸ್‌ ಅವರಿಗೆ ಅನುಕೂಲವಾಗುವಂತೆ ಮತ್ತು ಸಕ್ಕರೆ ಕಾರ್ಖಾನೆಗೆ ವಂಚನೆ ಮಾಡಲು ಪೂರ್ವ ನಿಯೋಜಿತವಾಗಿ ಗುಜರಿಯ ಅಂದಾಜು ಮೌಲ್ಯವನ್ನು ಕಡಿಮೆ ಮಾಡಲಾಗಿದೆ ಎಂದು ಆರೋಪಿಸಿದೆ.

ಈ ಸುದ್ದಿ ಓದಿದ್ದೀರಾ?: ಉಡುಪಿ | ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ 14 ಕೋಟಿ ರೂ. ವಂಚನೆ; ಆರೋಪ

ಟೆಂಡರ್ ಕಂಡೀಷನ್ ಪ್ರಕಾರ ಅತೀ ಹೆಚ್ಚು ಬಿಡ್ ಸಲ್ಲಿಸಿದ ಗುತ್ತಿಗೆದಾರ ಮೆ. ನ್ಯೂ ರಾಯಲ್ ಟ್ರೇಡರ್ಸ್ ರವರು ಗುಜರಿ ಎತ್ತುವಳಿ ಪ್ರಾರಂಭ ಮಾಡುವ ಮೊದಲು ಮುಂಗಡ ಠೇವಣಿಯಾಗಿ 5 ಕೋಟಿ ರೂಪಾಯಿಗಳ ಬ್ಯಾಂಕ್ ಗ್ಯಾರಂಟಿಯನ್ನು ರಾಷ್ಟ್ರೀಕೃತ ಬ್ಯಾಂಕಿನಿಂದ ಪಡೆದು ಕಾರ್ಖಾನೆಗೆ ಸಲ್ಲಿಸಬೇಕಾಗಿತ್ತು. ಆದರೆ, ಆಡಳಿತ ಮಂಡಳಿಯವರು ಹಾಗೂ ತಾಂತ್ರಿಕ ಸಮಿತಿಯವರು ಜಂಟಿಯಾಗಿ ಟೆಂಡರ್ ಕಂಡೀಷನ್‌ಗೆ ವಿರುದ್ಧವಾಗಿ ಟೆಂಡರ್‌ ಪಡೆದ ಗುತ್ತಿಗೆದಾರರಿಗೆ 5 ಕೋಟಿ ರೂಪಾಯಿಗಳ ಬ್ಯಾಂಕ್ ಗ್ಯಾರಂಟಿಯನ್ನು ಕೈ ಬಿಡಲಾಗಿರುವುದು ಮಹಾ ವಂಚನೆಯ ಮುಂದುವರಿದ ಭಾಗವಾಗಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...