ಉಡುಪಿ | ಅಕ್ರಮ ಬಾಂಗ್ಲಾ ವಲಸಿಗರ ಬಂಧನ: ಎರಡು ವರ್ಷಗಳ ಸಜೆ, ₹10,000 ದಂಡ ವಿಧಿಸಿ ನ್ಯಾಯಾಲಯ ಆದೇಶ

Date:

ಕಳೆದ ವರ್ಷ ಉಡುಪಿ ಜಿಲ್ಲೆಯ ಮಲ್ಪೆ ವಡಭಾಂಡೇಶ್ವರ ಬಸ್‌ ನಿಲ್ದಾಣದ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಅಕ್ರಮ ಬಾಂಗ್ಲಾ ವಲಸಿಗರನ್ನು ಪೊಲೀಸರು ಬಂಧಿಸಿದ್ದು, ಅವರಿಗೆ ನ್ಯಾಯಾಲಯ ಎರಡು ವರ್ಷಗಳ ಸಜೆ ಮತ್ತು ₹10,000 ದಂಡ ವಿಧಿಸಿ ಆದೇಶ ನೀಡಿದೆ.

ಘಟನೆ ಹಿನ್ನೆಲೆ

ಆರೋಪಿಗಳು ಭಾರತ ದೇಶದ ಯಾವುದೇ ಅನುಮತಿ ದಾಖಲೆಗಳನ್ನು ಪಡೆಯದೆ, ಅಕ್ರಮವಾಗಿ ನಕಲಿ ಆಧಾರ್‌ ಕಾರ್ಡ್‌ ದಾಖಲೆಗಳನ್ನು ಸೃಷ್ಟಿಸಿ, ವಂಚಿಸುವ ಉದ್ದೇಶದಿಂದ ಸುಳ್ಳು ಸ್ಪಷ್ಟನೆ ನೀಡಿ, ಬಾಂಗ್ಲಾದೇಶದಿಂದ ಉಡುಪಿ ತಾಲೂಕು ಪಡುತೋನ್ಸೆ ಗ್ರಾಮದ ಹೂಡೆಗೆ ಬಂದಿದ್ದರು. ಅವರನ್ನು ವಶಕ್ಕೆ ಪಡೆದು ಠಾಣೆಗೆ ನೀಡಿದ ದೂರಿನಂತೆ, ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಅವರ ವಿರುದ್ದ ಕಲಂ 336(2), 336(3), 340(2), 319(2), 318(4) ಜೊತೆಗೆ 3(5) BNS ಮತ್ತು 14(A) ವಿದೇಶೀಗರ ಕಾಯ್ದೆ, ಕಲಂ:34 ,42 ಆಧಾರ್‌ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕ್ರಮವಾಗಿ ಉಡುಪಿಗೆ ಬಂದ ಆರೋಪಿಗಳಾದ ಹಕೀಮ್‌ ಆಲಿ, ಸುಜೋನ್‌ ಎಸ್‌ ಕೆ, ಇಸ್ಮಾಯಿಲ್‌ ಎಸ್‌ ಕೆ, ಕರೀಮ್‌ ಎಸ್‌ ಕೆ, ಸಲಾಂ ಎಸ್‌ ಕೆ, ರಾಜಿಕುಲ್‌ ಎಸ್‌ ಕೆ, ಮೊಹಮ್ಮದ್‌ ಸೋಜಿಬ್‌, ರಿಮೂಲ್‌, ಮೊಹಮ್ಮದ್‌ ಇಮಾಮ್‌ ಶೇಖ್‌ ಹಾಗೂ ಮೊಹಮ್ಮದ್‌ ಜಹಾಂಗಿರ್‌ ಆಲಂ ವಿರುದ್ದ ಪೊಲೀಸರು ಉಡುಪಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ನ್ಯಾಯಾಲಯಕ್ಕೆ ದೋಷಾರೋಪಣ ಪತ್ರ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಬಾಂಗ್ಲಾದೇಶಿಗನೆಂದು ವಲಸೆ ಕಾರ್ಮಿಕನ ಮೇಲೆ ಹಲ್ಲೆ: ಆರೋಪಿಗಳ ವಿರುದ್ಧ ಪ್ರಕರಣ ದಾಖಲು

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಡಿಸೆಂಬರ್ 08ರಂದು 10 ಮಂದಿ ಆರೋಪಿಗಳಿಗೆ 2 ವರ್ಷಗಳ ಕಾಲ ಸಜೆ ಮತ್ತು ತಲಾ 10,000 ರೂ. ದಂಡ ವಿಧಿಸಿ ಆದೇಶಿರುವ ಬಗ್ಗೆ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕೋಟ ಜಾಮಿಯಾ ಮಸ್ಜಿದ್ ಸಾಮಾಜಿಕ ಕಾರ್ಯ ಸೌಹಾರ್ದತೆಗೆ ಸಾಕ್ಷಿ‌ : ಇದ್ರಿಸ್ ಹೂಡೆ

ರಂಜಾನ್ ಮಾಸ ಪವಿತ್ರವಾದ ಮಾಸದ ಜೊತೆಗೆ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಪಸರಿಸಿಕೊಂಡಿದೆ...

ಉಡುಪಿ | ‘ಸಮಾಧಾನ ಮಹೋತ್ಸವ’ಕಾರ್ಯಕ್ರಮ ನಡೆಸಲು ಹೈಕೋರ್ಟ್ ಅನುಮತಿ : ಪ್ರಶಾಂತ್ ಜತ್ತನ್ನ

ಘನ ಮೋಹನ್ ಸಿ.ಲಾಝರಸ್ ನೇತೃತ್ವದಲ್ಲಿ ಮಾ.20ರಿಂದ 22ರವರೆಗೆ ಉಡುಪಿಯ ಮಿಷನ್ ಕಾಂಪೌಂಡಿನಲ್ಲಿ...

ಉಡುಪಿ | ಜಿಲ್ಲೆಯಾದ್ಯಂತ ಸಂಭ್ರಮದ ʼಈದುಲ್ ಫಿತ್ರ್ʼ ಆಚರಣೆ

ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಶುಕ್ರವಾರ ಸಂಭ್ರಮ...

ಕರಾವಳಿ ಹೊರತುಪಡಿಸಿ ರಾಜ್ಯಾದ್ಯಂತ ಮಾ.21ರಂದು ಈದುಲ್ ಫಿತ್ ಆಚರಣೆ

ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಇತರ ಭಾಗಗಳಲ್ಲಿ ಈ ವರ್ಷ ಈದುಲ್...