ಉಡುಪಿ | ಅಲೋಪತಿ ಔಷಧಗಳ ಬಳಕೆಗೆ ಕಾಯ್ದೆಗೆ ತಿದ್ದುಪಡಿ ತರುವಂತೆ ಆಗ್ರಹ

Date:

ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ನಮ್ಮ ಮೂಲ ಪದ್ಧತಿಯೊಂದಿಗೆ ಅವಶ್ಯಕ ಅಲೋಪತಿ ಔಷಧಗಳನ್ನು ಬಳಕೆ ಮಾಡಲು ಕಾಯ್ದೆಗೆ ತಿದ್ದುಪಡಿ ತರುವಂತೆ ಆಗ್ರಹಿಸಿ ತುಳುನಾಡು ರಕ್ಷಣಾ ವೇದಿಕೆ ವೈದ್ಯರ ಘಟಕದಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಆಯುರ್ವೇದ ವೈದ್ಯರು ಪ್ರತಿಭಟನೆ ನಡೆಸಿದರು.

ತುಳುನಾಡು ರಕ್ಷಣಾ ವೇದಿಕೆ ವೈದ್ಯರ ಘಟಕದಿಂದ ಉಡುಪಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.

ಉಡುಪಿಯಲ್ಲಿ ನಡೆದ ಆಯುರ್ವೇದಿಕ್‌ ವೈದ್ಯರ ಪ್ರತಿಭಟನೆಯಲ್ಲಿ ತುಳುನಾಡು ರಕ್ಷಣಾ ವೇದಿಕೆ ವೈದ್ಯರ ಘಟಕದ ಜಿಲ್ಲಾಧ್ಯಕ್ಷ ಡಾ ರವೀಂದ್ರ ಮಾತನಾಡಿ, “ಆಯುರ್ವೇದ ಚಿಕಿತ್ಸೆಯು ಅತ್ಯಂತ ಪುರಾತನ ಆರೋಗ್ಯ ಸಂರಕ್ಷಣೆಯ ವ್ಯವಸ್ಥೆಯಾಗಿದ್ದು, ಅದು ಔಷಧ ಮತ್ತು ತತ್ವಶಾಸ್ತ್ರ ಎರಡರ ಸಮ್ಮಿಶ್ರಣವಾಗಿದೆ. ಇದು ಮಾನವನ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಯತ್ತಾ ಮುನ್ನಡೆಸುತ್ತದೆ. ಕೊರೊನಾ ಸಂದರ್ಭದಲ್ಲಿ ನಮ್ಮ ಜೀವ ಪಣಕ್ಕಿಟ್ಟು ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಿ ಅವರಿಗೆ ಹೊಸ ಜೀವನ ಕಲ್ಪಿಸಿದ್ದಲ್ಲದೆ, ಗ್ರಾಮೀಣ ಭಾಗದ ಜನರ ಜೀವನಾಡಿಯಾಗಿ ಸೇವೆ ಸಲ್ಲಿಸುತ್ತಿದ್ದೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ವೈದ್ಯರಿಗೆ ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ನಮ್ಮ ಮೂಲ ಪದ್ಧತಿಯೊಂದಿಗೆ ಅವಶ್ಯಕ ಅಲೋಪತಿ ಔಷಧಗಳನ್ನು ಬಳಕೆ ಮಾಡಬಾರದು ಎನ್ನುವ ರಾಜ್ಯ ಸರ್ಕಾರದ ಕಾನೂನು ನಮ್ಮ ವೃತ್ತಿ ಜೀವನವನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಈಗಾಗಲೇ ನಮ್ಮ ದೇಶದ ಹಲವು ರಾಜ್ಯಗಳಲ್ಲಿ ಅಲ್ಲಿನ ರಾಜ್ಯ ಸರ್ಕಾರಗಳು ಆಯುರ್ವೇದ ವೈದ್ಯರುಗಳಿಗೆ (ಬಿಎಎಂಎಸ್‌) ಅವಶ್ಯಕ ಅಲೋಪತಿ ಔಷಧಗಳನ್ನು ನೀಡಲು ಅನುಮತಿ ನೀಡಿರುತ್ತದೆ” ಎಂದರು.

“ನಮ್ಮ ಆಯರ್ವೇದ ವೈದ್ಯರು ಪದವಿಯನ್ನೇ ಐದೂವರೆ ವರ್ಷ ಕಲಿತು ಸರ್ಕಾರದ ಮಾನ್ಯತೆಯುಳ್ಳ ರಾಜೀವ್‌ಗಾಂಧಿ ಯುನಿವರ್ಸಿಟಿ ಹಾಗೂ ‌ಕೆಎಯುಪಿ ಬೋರ್ಡ್‌ನಲ್ಲಿ ಪದವಿ ಪಡೆದಿರುತ್ತಾರೆ. ಬಿಎಎಂಎಸ್‌ ಕೋರ್ಸ್‌ನಲ್ಲಿ ಆಯುರ್ವೇದದ ಜೊತೆಗೆ ಮಾಡರ್ನ್ ಮೆಡಿಕಲ್ ಸೈನ್ಸ್‌ ಕೂಡ ಕಲಿಸಿರುತ್ತಾರೆ. 6 ತಿಂಗಳು ಕಡ್ಡಾಯವಾಗಿ ತಾಲೂಕು ಸರ್ಕಾರಿ ಆಸ್ಪತ್ರೆಗಳಲ್ಲಿ ಇಂಟರ್ನ್‌ಶಿಪ್ ಮತ್ತು 6 ತಿಂಗಳು ಆಯುರ್ವೇದ ಚಿಕಿತ್ಸೆ ಪದ್ಧತಿಯಲ್ಲಿ ಇಂಟರ್ನ್‌ಶಿಪ್ ಮಾಡಿರುತ್ತೇವೆ”‌ ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಶ್ರಮಿಕರ ಸಮಸ್ಯೆಗಳ ಪರಿಹಾರಿಸುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹ

“ರಾಜ್ಯದಲ್ಲಿ ಆಯುರ್ವೇದ ವೈದ್ಯರಿಗೆ ಕೆಪಿಎಂಎಎ ಕಾಯ್ದೆಯಡಿಯಲ್ಲಿ ಪರಿವೀಕ್ಷಣೆ ಹೆಸರಿನಲ್ಲಿ ವಿನಾಕಾರಣ ಆಗುತ್ತಿರುವ ಕಿರುಕುಳ ನಿಲ್ಲಿಸಬೇಕು. ಕಾನೂನಿನಲ್ಲಿರುವ ಅವಕಾಶಗಳನ್ನು ಬಳಸಿಕೊಂಡು ರಾಜ್ಯದ ಆಯುರ್ವೇದ ವೈದ್ಯರಿಗೆ ಪ್ರಾಥಮಿಕ ಹಂತದ ಚಿಕಿತ್ಸೆಯಲ್ಲಿ ನಮ್ಮ ಮೂಲ ಪದ್ಧತಿಯೊಂದಿಗೆ ಅವಶ್ಯಕ ಅಲೋಪತಿ ಔಷಧಿಯನ್ನು ಬಳಕೆ ಮಾಡಲು, ಈಗಾಗಲೇ ಮಹಾರಾಷ್ಟ್ರ ಸೇರಿದಂತೆ ಇತರ ಹಲವು ರಾಜ್ಯಗಳಲ್ಲಿ ಜಾರಿಯಲ್ಲಿರುವ ಕಾನೂನಿನಂತೆ ಡ್ರಗ್ಸ್ ಆಂಡ್ ಕಾಸ್ಮ್ಯಾಟಿಕ್ ಆಕ್ಟ್ (Drugs and Cosmatics Act 1940 Rule 2EE (iii)ರನ್ವಯ ನಮ್ಮ ರಾಜ್ಯದಲ್ಲಿಯೂ ಕೂಡಾ ತಿದ್ದುಪಡಿ ಮಾಡಿ ಜಾರಿಗೆ ತರಬೇಕು. ಕರ್ನಾಟಕ ರಾಜ್ಯ ಆಯುರ್ವೇದ ಯುನಾನಿ ಬೋರ್ಡ್ ಮತ್ತು ಹೋಮಿಯೋಪತಿ ಬೋರ್ಡ್‌ಗಳ ಕಾಯ್ದೆಯಲ್ಲಿ ತಿದ್ದುಪಡಿ ತಂದು ಜಾರಿಗೆ ತರಬೇಕು” ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ತುಳುನಾಡು ರಕ್ಷಣಾ ವೇದಿಕೆಯ ಸ್ಥಾಪಕ ಅಧ್ಯಕ್ಷ ಯೋಗೇಶ್ ಶೆಟ್ಟಿ ಜೆಪ್ಪು, ಎಎಫ್‌ಐ ಜಿಲ್ಲಾ ಕಾರ್ಯದರ್ಶಿ ಡಾ ಸತೀಶ್ ರಾವ್, ಡಾ ನಾರಾಯಣ್ ಟಿ ಅಂಚನ್, ಡಾ.‌ಸುನಿತಾ ಶೆಟ್ಟಿ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...