ಉಡುಪಿ | ಹೆರಿಗೆ ವೇಳೆ ಮಗು ಸಾವು; ಆಸ್ಪತ್ರೆ ಎದುರು ಕುಟುಂಬಸ್ಥರ ಪ್ರತಿಭಟನೆ

Date:

ಸರ್ಕಾರಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದ ಹೆರಿಗೆ ವೇಳೆ ಮಗು ಮೃತಪಟ್ಟಿದೆ ಎಂದು ಆರೋಪಿಸಿ  ಕುಟುಂಬಸ್ಥರು ಹಾಗೂ ಸ್ಥಳೀಯರು ಉಡುಪಿ ಜಿಲ್ಲೆಯ ಕುಂದಾಪುರ ಸರ್ಕಾರಿ ಆಸ್ಪತ್ರೆ ಎದುರು ಆಹೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ.

“ನವೆಂಬರ್ 17ರಂದು ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಗೆ ಗಂಗೊಳ್ಳಿ ಮೂಲದ ಶ್ರೀನಿವಾಸ ಖಾರ್ವಿ ಅವರ ಹೆಂಡತಿ ಜ್ಯೋತಿ ಅವರು ದಾಖಲಾಗಿದ್ದರು. ಸೋಮವಾರ ಬೆಳಿಗ್ಗೆ ಹೆರಿಗೆ ಮಾಡಿದ ವೈದ್ಯರು ಮಗು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಮಗು ಮೃತಪಟ್ಟಿದೆ” ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

“ಪ್ರಕರಣ ಕುರಿತು ಸಂಪೂರ್ಣ ತನಿಖೆ ನಡೆಸಬೇಕು, ಡಿಸಿ ಮತ್ತು ಜಿಲ್ಲಾ ಆರೋಗ್ಯಾಧಿಕಾರಿ ಸ್ಥಳಕ್ಕೆ ಬರಬೇಕು” ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೊಕ್ಕುಳ ಬಳ್ಳಿ ಸುತ್ತಿಕೊಂಡು ಮಗು ಮೃತಪಟ್ಟಿರುವುದಾಗಿ ವೈದ್ಯರು ಉಡಾಫೆಯಾಗಿ ಮಾತನಾಡಿದ್ದಾರೆ. ಹೆರಿಗೆ ಸಂದರ್ಭದಲ್ಲಿ ರಕ್ತಸ್ರಾವವಿದೆ ಎಂದರೂ ಯಾವುದೇ ಮುಂಜಾಗ್ರತಾ ಕ್ರಮ ತೆಗೆದುಕೊಂಡಿಲ್ಲ” ಎಂದು ಆರೋಪಿಸಿ ಎಂಟೂವರೆ ತಿಂಗಳಿನಿಂದ ಸ್ಕ್ಯಾನಿಂಗ್ ಮಾಡಲು ಒಪ್ಪದ ಡಾಕ್ಟರ್ ವಿರುದ್ಧ ಮನೆಯವರು ಆಕ್ರೋಶ ಹೊರ ಹಾಕಿದ್ದು, ಇಡೀ ರಾತ್ರಿ ಕುಂದಾಪುರ ಸರ್ಕಾರಿ ಆಸ್ಪತ್ರೆೆ ಎದುರು ಪ್ರತಿಭಟನೆ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಶಾಲಾ ಶೈಕ್ಷಣಿಕ ಪ್ರವಾಸ, ಮದುವೆಗಳಿಗಿಲ್ಲ ಸಾರಿಗೆ ಬಸ್‌ಗಳು

ಇನ್ನು ಸ್ಥಳಕ್ಕೆ ಬಂದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಕೂಡ ವೈದ್ಯರ ನಿರ್ಲಕ್ಷ್ಯ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಬಂದ ಡಿಎಚ್‌ಒ, ವೈದ್ಯಾಧಿಕಾರಿ ರಾಬರ್ಟ್ ರೆಬೆಲ್ಲೋ, ಜಿಲ್ಲಾಧಿಕಾರಿ ಹಾಗೂ ಎಸ್‌ಪಿ ಅವರು ಪ್ರತಿಭಟನೆ ನಿಲ್ಲಿಸುವಂತೆ ಮನವಿ ಮಾಡಿದ್ದು, ನುರಿತ ವೈದ್ಯರ ತಂಡ ರಚಿಸಿ ಪ್ರಕರಣದ ತನಿಖೆ ಕೈಗೊಳ್ಳುತ್ತೇವೆ. ವೈದ್ಯರ ನಿರ್ಲಕ್ಷ್ಯ ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಭರವಸೆ ಣಿಡಿದ್ದು, ಈ ಸದ್ಯ ಸದರಿ ವೈದ್ಯರನ್ನು ಬೇರೆಡೆಗೆ ವರ್ಗಾವಣೆ ಮಾಡುತ್ತೇವೆಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...