ಉಡುಪಿ | ಮಧ್ಯಪ್ರಾಚ್ಯದಲ್ಲಿ ಯುದ್ದದ ಉದ್ವಿಗ್ನತೆ: ಉಡುಪಿ ಧರ್ಮಪ್ರಾಂತ್ಯದಲ್ಲಿ ಶಾಂತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಕೆ

Date:

ಮಧ್ಯಪ್ರಾಚ್ಯ ಪ್ರದೇಶದಲ್ಲಿ, ವಿಶೇಷವಾಗಿ ಇರಾನ್ ಹಾಗೂ ನೆರೆಯ ರಾಷ್ಟ್ರಗಳನ್ನು ಒಳಗೊಂಡ ಇತ್ತೀಚಿನ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆ, ದೇಶದ ಕ್ರೈಸ್ತ ಸಮುದಾಯವು ಶಾಂತಿಗಾಗಿ ಪ್ರಾರ್ಥನೆ ಸಲ್ಲಿಸಲು ಬಿಷಪರ ಮಂಡಳಿ ನೀಡದಂತೆ ಉಡುಪಿ ಧರ್ಮಪ್ರಾಂತ್ಯದ ಎಲ್ಲಾ ಚರ್ಚುಗಳಲ್ಲಿ ಭಾನುವಾರ ಶಾಂತಿಗಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಭಾನುವಾರ ಬೆಳಗ್ಗಿನ ಬಲಿಪೂಜೆಯ ವೇಳೆ ಧರ್ಮಪ್ರಾಂತ್ಯ ವ್ಯಾಪ್ತಿಯ ಚರ್ಚುಗಳಲ್ಲಿ ಧರ್ಮಗುರುಗಳು ಶಾಂತಿಗಾಗಿ ವಿಶೇಷ ಪ್ರಾರ್ಥನೆಯನ್ನು ಮಾಡಿದರು. ವಿವಿಧ ಚರ್ಚುಗಳಲ್ಲಿ ಬಲಿಪೂಜೆಗೂ ಮುನ್ನ ಪರಮಪ್ರಸಾದದ ಆರಾಧನೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ಯುದ್ದದ ಭೀತಿ ಕಡಿಮೆಯಾಗಿ ಮಧ್ಯಪ್ರಾಚ್ಯ ಹಾಗೂ ಗಲ್ಫ್ ರಾಷ್ಟ್ರಗಳಲ್ಲಿ ಶಾಂತಿ ನೆಲೆಸಲು ಜಗತ್ತಿನ ಮುಖಂಡರಿಗೆ ದೇವರು ಬೆಳಕಾಗಲಿ ಎಂದು ಪ್ರಾರ್ಥಿಸಿದರು.

ಯುದ್ದಗಳಿಂದಾಗಿ ಆಮಾಯಕರು ತಮ್ಮ ಪ್ರಾಣವನ್ನು ಅರ್ಪಿಸಬೇಕಾಗಿದ್ದು ಇದರಿಂದಾಗಿ ಅವರ ಕುಟುಂಬವರ್ಗಕ್ಕೆ ಮರೆಯಲಾಗದ ನೋವು ತಂದಿಡುತ್ತದೆ. ಯುದ್ದ ಪೀಡಿತ ಪ್ರದೇಶದಲ್ಲಿ ಉಪಯೋಗಿಸುವ ಸ್ಪೋಟಕಗಳಿಂದಾಗಿ ಪರಿಸರದ ವಿನಾಶಕ್ಕೂ ಅವಕಾಶ ಮಾಡಿಕೊಟ್ಟಂತಾಗುತ್ತದೆ. ವಿಶ್ವದ ನಾಯಕರು ಯುದ್ದದ ಬದಲು ಸಂವಾದದ ಮೂಲಕ ಶಾಂತಿಯ ಮಂತ್ರವನ್ನು ಪಠಿಸುವ ಅಗತ್ಯತೆ ಇದ್ದು ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಕಾರ್ಯಪ್ರವೃತ್ತರಾಗಲಿ ಎಂದು ಧರ್ಮಗುರುಗಳು ತಮ್ಮ ಸಂದೇಶದಲ್ಲಿ ಪ್ರಾರ್ಥೀಸಿದರು.
ಉಡುಪಿ ಶೋಕಮಾತಾ ದೇವಾಲಯದಲ್ಲಿ ಧರ್ಮಗುರು ವಂ|ಚಾರ್ಲ್ಸ್ ಮಿನೇಜಸ್, ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ ಧರ್ಮಗುರು ವಂ|ಫರ್ಡಿನಾಂಡ್ ಗೊನ್ಸಾಲ್ವಿಸ್, ಕುಂದಾಪುರದ ಹೋಲಿ ರೋಜರಿ ಚರ್ಚಿನಲ್ಲಿ ವಂ|ಪಾವ್ಲ್ ರೇಗೊ, ಕಾರ್ಕಳ ಸಂತ ಲಾರೆನ್ಸ್ ಬಸಿಲಿಕಾದಲ್ಲಿ ವಂ|ಆಲ್ಬನ್ ಡಿಸೋಜಾ ಸೇರಿದಂತೆ ವಿವಿಧ ಚರ್ಚುಗಳಲ್ಲಿ ಶಾಂತಿಗಾಗಿ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1009934918

ಉಡುಪಿ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ತಮ್ಮ ಸಂದೇಶದಲ್ಲಿ ಪ್ರತಿಯೊಂದು ಬಿಕ್ಕಟ್ಟುಗಳಿಗೆ ಯುದ್ದವೊಂದೇ ಪರಿಹಾರವಲ್ಲ ಯುದ್ಧ ಮತ್ತು ಅಸ್ಥಿರತೆಯಿಂದ ಉಂಟಾಗುತ್ತಿರುವ ಮಾನವೀಯ ದುಃಖವು ವಿಶ್ವಮಾನವ ಕುಟುಂಬಕ್ಕೆ ಆಳವಾದ ಗಾಯವನ್ನುಂಟುಮಾಡುತ್ತಿದೆ. ಮಧ್ಯಪ್ರಾಚ್ಯದ ಹಲವು ದೇಶಗಳಲ್ಲಿ ಕೆಲಸ ಮಾಡುತ್ತಿರುವ ಮತ್ತು ವಾಸಿಸುತ್ತಿರುವ ಭಾರತದ ಸಹೋದರ-ಸಹೋದರಿಯರ ಸುರಕ್ಷತೆ ಕುರಿತು ಚಿಂತಿಸಬೇಕಾಗಿದೆ. ದೂರದೇಶದಲ್ಲಿ ದುಡಿದು ತಮ್ಮ ಕುಟುಂಬಗಳನ್ನು ಪೋಷಿಸುತ್ತಿರುವ ಅವರು ಧರ್ಮಸಭೆ ಮತ್ತು ದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಿದ್ದಾರೆ. ಈ ಅನಿಶ್ಚಿತ ಸಮಯದಲ್ಲಿ ಅವರ ಸುರಕ್ಷತೆ, ಭದ್ರತೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕಾಗಿರುವುದು ಆಡಳಿತ ವರ್ಗದ ಜವಾಬ್ದಾರಿಯಾಗಿದ್ದು ಈ ನಿಟ್ಟಿನಲ್ಲಿ ಸೂಕ್ತ ಕ್ರಮಕ್ಕೆ ಮುಂದಾಗಲು ದೇವರು ವಿಶ್ವದ ನಾಯಕರಿಗೆ ಪ್ರೇರಣೆ ನೀಡಲಿ ಎಂದು ಅವರು ತಿಳಿಸಿದರು.

ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ|ಡೆನಿಸ್ ಡೆಸಾ ತಮ್ಮ ಪ್ರವಚನದಲ್ಲಿ ಪ್ರತಿಯೊಬ್ಬ ಮಾನವ ತನ್ನ ಜೀವನದಲ್ಲಿ ಸದಾ ಬಯಸುವುದು ಶಾಂತಿ ಸಮಾಧಾನ ಮತ್ತು ಸಂತೋಷ. ಕಳೆದ ಹತ್ತಾರು ದಿನಗಳಿಂದ ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಯುದ್ದ ಭೀತಿಯಿಂದಾಗಿ ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ ನಮ್ಮ ಸಹೋದರ ಸಹೋದರಿಯರಿರಲ್ಲಿ ಆತಂಕದ ವಾತಾವರಣ ಸೃಷ್ಠಿ ಮಾಡಿದೆ. ನಮ್ಮ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರು ನೀಡಿದ ಸೂಚನೆಯಂತೆ ಶಾಂತಿಗಾಗಿ ಚರ್ಚುಗಳಲ್ಲಿ ವಿಶೇಷ ಪ್ರಾರ್ಥನಾ ದಿನವನ್ನಾಗಿ ಆಚರಿಸಿದ್ದೇವೆ. ಪವಿತ್ರ ಪೂಜಾ ವಿಧಿಯಲ್ಲಿ ಶಾಂತಿ ಸಮಾಧಾನದ ಕುರಿತು ಉಲ್ಲೇಖಿಸುವುದರೊಂದಿಗೆ ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಲಾಗಿದೆ. ಮಾನವ ಜೀವ ಪವಿತ್ರವಾದುದಾಗಿದ್ದು ಇದರ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹಿಂಸೆ ದಾರಿಯಲ್ಲ ಬದಲಾಗಿ ಸಂವಾದ ಮೂಲಕ ಸಮಾಧಾನ ಮತ್ತು ಶಾಂತಿಯನ್ನು ನೆಲೆಸುವ ನಿಟ್ಟಿನಲ್ಲಿ ಜಗತ್ತಿನ ನಾಯಕರು ಕಾರ್ಯಪ್ರವೃತ್ತರಾಗಲಿ ಎಂದರು.

ಇದರೊಂದಿಗೆ ವೇಳೆ, ಮಾರ್ಚ್ 8ರಿಂದ 14ರವರೆಗೆ ಪ್ರತಿದಿನವೂ ಶಾಂತಿಗಾಗಿ ವಿಶೇಷವಾಗಿ ಪವಿತ್ರ ಜಪಸರ ಪ್ರಾರ್ಥನೆ ಮಾಡುವಂತೆ ಮನವಿ ಮಾಡಲಾಗಿದೆ. ಮಾರ್ಚ್ 13ರಂದು ಶುಕ್ರವಾರ ಉಪವಾಸ ಮತ್ತು ಪ್ರಾರ್ಥನಾ ದಿನವಾಗಿ ಆಚರಿಸಿ, ವಿಶ್ವಶಾಂತಿ ಹಾಗೂ ಹಿಂಸಾಚಾರದಿಂದ ಬಳಲುತ್ತಿರುವ ಎಲ್ಲರ ಸುರಕ್ಷತೆಗೆ ತ್ಯಾಗ ಸಮರ್ಪಿಸಲು ಕೋರಲಾಗಿದೆ. ಈ ಮೂಲಕ ದ್ವೇಷದ ಮನೋಭಾವಗಳು ದೂರವಾಗಿ, ಹಿಂಸಾಚಾರ ನಿಂತು, ವಿಶ್ವದಲ್ಲಿ ಶಾಂತಿ ನೆಲೆಸಲೆಂದು ಕ್ರೈಸ್ತ ಧರ್ಮಸಭೆ ಆಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...