ಉಡುಪಿ | ಕ್ರೈಸ್ತ ವಿದ್ಯಾರ್ಥಿಗಳು ಸರ್ಕಾರಿ ಸೇವೆಯತ್ತ ಆಸಕ್ತಿ ಹೊಂದಬೇಕು: ಬಿಷಪ್ ಜೆರಾಲ್ಡ್ ಲೋಬೊ

Date:

ವಿದ್ಯಾರ್ಥಿ ಜೀವನದಲ್ಲಿ ಅತೀ ಹೆಚ್ಚಿನ ಪರಿಶ್ರಮ ಪಟ್ಟು ಶಿಕ್ಷಣದಲ್ಲಿ ಸಾಧನೆ ತೋರಿದ್ದಲ್ಲಿ, ಮುಂದಿನ ಜೀವನದಲ್ಲಿ ಉನ್ನತ ಸ್ಥಾನ ಗಳಿಸಬಹುದು ಎಂದು ಉಡುಪಿ ಕ್ರೈಸ್ತ ಧರ್ಮಾಧ್ಯಕ್ಷ ಡಾ. ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.

ಉಡುಪಿತ ಅಂಬಾಗಿಲಿನಲ್ಲಿರುವ ಧರ್ಮಪ್ರಾಂತ್ಯದ ಪಾಲನಾ ಕೇಂದ್ರದಲ್ಲಿ  ಕಥೊಲಿಕ್ ಸಭಾ ಉಡುಪಿ ಪ್ರದೇಶ್ ಹಾಗೂ ಮುಂಬೈ ಜಾನ್ ಡಿಸಿಲ್ವಾ ಫೌಂಡೇಶನ್ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಶಿಕ್ಷಣ ಕ್ಷೇತ್ರ ವಿಸ್ತಾರವಾಗಿದ್ದು, ಹೊಸ ಹೊಸ ಪ್ರಯೋಗಗಳಿಗೆ ಇಂದಿನ ವಿದ್ಯಾರ್ಥಿ ಸಮುದಾಯ ಆಸಕ್ತಿ ತೋರಿದಾಗ ಉನ್ನತ ಸ್ಥಾನ ಲಭಿಸಲು ಸಾಧ್ಯವಿದೆ. ಸಮುದಾಯದ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ಸೇವೆಯತ್ತ ಆಸಕ್ತಿ ತೋರಬೇಕು. ಸಮಾಜದಲ್ಲಿ ಹಲವಾರು ಅವಕಾಶಗಳಿವೆ. ಅವುಗಳ ಸದುಪಯೋಗವನ್ನು ವಿದ್ಯಾರ್ಥಿಗಳು ಪಡೆಯಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಇಂದಿನ ಮಕ್ಕಳು ಹೆಚ್ಚು ಹೆಚ್ಚು ಎದುರಿಸುವತ್ತ ಗಮನ ಹರಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತೀಯ ಅಂಚೆ ಸೇವೆಗಳ ನಿವೃತ್ತ ಸದಸ್ಯ ಡಾ. ಚಾರ್ಲ್ಸ್ ಲೋಬೊ ಮಾತನಾಡಿ, “ಕ್ರೈಸ್ತ ಸಮುದಾಯ ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಸರ್ಕಾರಿ ಹುದ್ದೆಗಳತ್ತ ಆಸಕ್ತಿ ತೋರಬೇಕು. ಇದಕ್ಕಾಗಿ ಪ್ರಾಥಮಿಕ ಹಂತದಲ್ಲಿಯೇ ಪ್ರಯತ್ನ ಮಾಡಿದಾಗ ಉತ್ತಮ ಫಲಿತಾಂಶ ಪಡೆಯಲು ಸಾಧ್ಯವಿದೆ” ಎಂದರು.

ಕಾರ್ಯಕ್ರಮದಲ್ಲಿ ಉಡುಪಿ ಧರ್ಮಪ್ರಾಂತ್ಯ ವ್ಯಾಪ್ತಿಯಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು. ಅಲ್ಲದೆ, ಪಿಎಚ್‌ಡಿ ಪದವಿ ಪಡೆದ ಡಾ.ಸಿಂಡ್ರೆಲ್ಲಾ ಗೊನ್ಸಾಲ್ವಿಸ್ ಮತ್ತು ಸಿಎ ಪರೀಕ್ಷೆಯಲ್ಲಿ ಸಾಧನೆ ಮಾಡಿದ ವಿನಲ್ ಜೋಸೇಫ್ ಡಿಕೊಸ್ತಾ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಥೊಲಿಕ್ ಸಭಾ ಉಡುಪಿ ಪ್ರದೇಶ ಅಧ್ಯಕ್ಷ ಸಂತೋಷ್ ಕರ್ನೆಲಿಯೋ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಾನ್ ಡಿಸಿಲ್ವಾ ಫೌಂಡೇಶನ್ ಅಧ್ಯಕ್ಷ ಜಾನ್ ಗ್ಲ್ಯಾಡಿಸ್ ಡಿಸಿಲ್ವಾ, ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ಆಧ್ಯಾತ್ಮಿಕ ನಿರ್ದೇಶಕ, ಧರ್ಮಪ್ರಾಂತ್ಯದ ಶ್ರೇಷ್ಠಗುರು ಮೊನ್ಷಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ನಿಯೋಜಿತ ಅಧ್ಯಕ್ಷರಾದ ರೊನಾಲ್ಡ್ ಆಲ್ಮೇಡಾ, ಕೋಶಾಧಿಕಾರಿ ಜೆರಾಲ್ಡ್ ರೊಡ್ರಿಗಸ್, ಮಾಜಿ ಅಧ್ಯಕ್ಷರಾದ ವಲೇರಿಯನ್ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಂಚಾಲಕರಾದ ಡಾ. ಜೆರಾಲ್ಡ್ ಪಿಂಟೊ ಸ್ವಾಗತಿಸಿ, ಕಾರ್ಯದರ್ಶಿ ಒಲಿವೀಯಾ ಡಿಮೆಲ್ಲೊ ವಂದಿಸಿದರು. ಲೆರಿಸ್ಸಾ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...