‘ಸರ್ವರಿಗೂ ಸೂರು’ | ಮೂಲ ಸೌಕರ್ಯ ಇಲ್ಲದ ಮನೆಗಳ ಗೋಳು ಕೇಳುವವರಾರು?

Date:

ಸ್ವಂತ ಸೂರಿನ ಕನಸಿನೊಂದಿಗೆ ಕಳೆದ ನಾಲ್ಕು ವರ್ಷಗಳಿಂದ ಕೂಡಿಟ್ಟ ಹಣವನ್ನೆಲ್ಲ ಸುರಿದು, ಸರ್ಕಾರ ನಿರ್ಮಿಸಿದ ಮನೆಗಳನ್ನು ಕಾದಿರಿಸಿರುವ 240 ಕುಟುಂಬಗಳು ಈಗ ಸಂಕಷ್ಟದ ಸರಮಾಲೆಯನ್ನೇ ಎದುರಿಸುತ್ತಿವೆ. ವಸ್ತುಶ: ಬೀದಿಗೆ ಬಿದ್ದಿವೆ. ಮನೆಗಳು ಹಂಚಿಕೆಯಾಗಿದ್ದರೂ, ಮೂಲ ಸೌಕರ್ಯವಿಲ್ಲದೆ, ಮನೆಗಳು ಹಸ್ತಾಂತರಗೊಳ್ಳದೆ ಬಾಡಿಗೆ ಮನೆಯಲ್ಲಿ ವಾಸುಸುತ್ತಿವೆ. ಅತ್ತ ಬ್ಯಾಂಕ್ ಸಾಲಕ್ಕೆ ಪ್ರತಿ ತಿಂಗಳು ಕಟ್ಟಬೇಕಾದ ಬಡ್ಡಿ, ಇತ್ತ ಇರುವ ಮನೆಗೆ ಬಾಡಿಗೆ ಕಟ್ಟಬೇಕಾದ ಅನಿವಾರ್ಯತೆ ಎದುರಿಸುತ್ತಿವೆ – ಇದು ಉಡುಪಿ ಜಿಲ್ಲೆಯ ಹೆರ್ಗ ಗ್ರಾಮದ ಬಬ್ಬುಸ್ವಾಮಿ ಲೇಔಟ್‌ನಲ್ಲಿ ನಿರ್ಮಾಣವಾಗಿರುವ ವಸತಿ ಸಮುಚ್ಛಯದ ಫಲಾನುಭವಿಗಳು ಪಾಡು. ಅವರೆಲ್ಲರೂ ಉಡುಪಿ ನಗರ ಸಭೆಯ ಅಧಿಕಾರಿಗಳು ಮತ್ತು ಮಾಜಿ ಶಾಸಕರ ವಿರುದ್ಧ ಆಕ್ರೋಶಿತರಾಗಿದ್ದಾರೆ.

ಮಾಜಿ ಶಾಸಕ ಕೆ ರಘುಪತಿ ಭಟ್ ಅವರು ಉಡುಪಿ ಶಾಸಕರಾಗಿದ್ದಾಗ ಕರ್ನಾಟಕ ರಾಜ್ಯದಲ್ಲಿ ಪ್ರಪ್ರಥಮವಾಗಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ‘ಸರ್ವರಿಗೂ ಸೂರು ಕಾರ್ಯಕ್ರಮ’ದಡಿ ಉಡುಪಿ ನಗರಸಭಾ ವ್ಯಾಪ್ತಿಯ ಫಲಾನುಭವಿಗಳಿಗೆ ಹೆರ್ಗ ಗ್ರಾಮದ ಬಬ್ಬುಸ್ವಾಮಿ ಲೇಔಟ್ ನಲ್ಲಿ G+3 ಮಾದರಿಯಲ್ಲಿ 460 ಮನೆಗಳನ್ನು ಒಳಗೊಂಡ ವಸತಿ ಸಮುಚ್ಛಯ ನಿರ್ಮಿಸಲಾಗಿತ್ತು. ಇದಕ್ಕೆ ಅರ್ಜಿ ಹಾಕಿ ಆಯ್ಕೆಯಾದ ಫಲಾನುಭವಿಗಳಿಗೆ ಮೊದಲ ಹಂತದಲ್ಲಿ 240 ಮನೆಗಳನ್ನು, ದ್ವಿತೀಯ ಹಂತದಲ್ಲಿ 106 ಮನೆಗಳನ್ನು ಚೀಟಿ ಎತ್ತುವ ಪ್ರಕ್ರಿಯೆ ಮೂಲಕ ಅಂದಿನ ಶಾಸಕರು ಫಲಾನುಭವಿಗಳಿಗೆ ಹಂಚಿಕೆ ಮಾಡಿ, ಹಕ್ಕು ಪತ್ರವನ್ನು ನೀಡಿದ್ದರು. ಆದರೆ, ಇದೀಗ ಹಕ್ಕುಪತ್ರ ಕೈ ಸೇರಿ ಐದು ತಿಂಗಳು ಕಳೆದರೂ ಸರ್ಕಾರಿ ವಸತಿ ಸಮುಚ್ಚಯಕ್ಕೆ ಮೂಲ ಸೌಕರ್ಯಗಳನ್ನು ಒದಗಿಸಲಾಗಿಲ್ಲ. ಮನೆಗಳು ದೊರೆತಿದ್ದರೂ, ಅಲ್ಲಿ ವಾಸಿಸಲಾಗದೆ ಫಲಾನುಭವಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

WhatsApp Image 2023 10 18 at 8.27.51 AM

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆರ್ಗ ಗ್ರಾಮದ ಸರ್ಕಾರಿ ನಿವೇಶನ ಸ್ಥಳದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಸುಮಾರು 240 ಸುಸಜ್ಜಿತ ವಸತಿ ಸಮುಚ್ಛಯ ನಿರ್ಮಾಣ ಕಾಮಗಾರಿ ಅಂತಿಮ ಹಂತ ತಲುಪಿ ವರ್ಷ 4 ಕಳೆದಿವೆ. ಆದರೂ ಅವುಗಳು ಪೂರ್ಣಗೊಂಡು ಇನ್ನೂ ಫಲಾನುಭವಿಗಳಿಗೆ ಹಸ್ತಾಂತರವಾಗಿಲ್ಲ. ಫಲಾನುಭವಿಗಳು ತಮ್ಮ ಪಾಲಿನ ಮಾರ್ಜಿನ್ ಹಣ 90,000 ರೂ.ವನ್ನು (ಪರಿಶಿಷ್ಟಜಾತಿ/ ಪಂಗಡದವರಿಗೆ 60,000ರೂ.) ಪಾಲು ಹಣವಾಗಿ ಸಂಬಂಧಪಟ್ಟ ಇಲಾಖೆಗೆ ಕಟ್ಟಿದ್ದಾರೆ. ಬ್ಯಾಂಕ್‌ನ ಸಹಾಯಧನದೊಂದಿಗೆ ಸಾಲ ಸೌಲಭ್ಯ ಪಡೆದು ವಸತಿ ಸಮುಚ್ಚಯ ಕಟ್ಟಡದ ಹಕ್ಕುಪತ್ರ ಪಡೆದಿದ್ದಾರೆ. ಆದರೂ, ವಸತಿ ಸಮುಚ್ಚಯದ ಪಲಾನುಭವಿಗಳು ಆ ಮನೆಗಳಲ್ಲಿ ವಾಸ ಮಾಡಲು ಮೂಲ ಸೌಕರ್ಯಗಳನ್ನು ಒದಗಿಸಲಾಗಿಲ್ಲ. ವಸತಿ ಸಮುಚ್ಛಯ ಅವ್ಯವಸ್ಥೆಗಳ ಆಗರವಾಗಿದೆ. ಸರ್ಕಾರಿ ವಸತಿ ಸಮುಚ್ಛಯದಲ್ಲಿ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ಪಕ್ಕಾ ಸಂಪರ್ಕ ರಸ್ತೆ, ದಾರಿದೀಪಗಳನ್ನು ಇನ್ನೂ ಅಳವಡಿಸಲಾಗಿಲ್ಲ. ಈ ಎಲ್ಲ ಸೌಲಭ್ಯಗಳನ್ನು ತ್ವರಿತವಾಗಿ ಒದಗಿಸುವಂತೆ ಉಡುಪಿ ನಗರಸಭೆಗೆ ಒತ್ತಾಯಿಸುತ್ತಿದ್ದಾರೆ.

ಈ ವರದಿ ಓದಿದ್ದೀರಾ?: ರಾಜ್ಯದ ಬರ ಪರಿಸ್ಥಿತಿಗೆ ಎಲ್‌ ನಿನೊ ಕಾರಣ? ಏನಿದು ‘ಎಲ್‌ ನಿನೊ’!

ಈ ಬಗ್ಗೆ ಈದಿನ.ಕಾಮ್ ಜೊತೆ ಮಾತನಾಡಿದ ಸಂದೇಶ್, “ಈಗಾಗಲೇ ಸಾಲ ಮಾಡಿ ಹಣವನ್ನು ಕಟ್ಟಿದ್ದೇನೆ. ಮನೆಯಲ್ಲಿ ಮೂಲ ಸೌಕರ್ಯ ಇಲ್ಲದೆ ಬಾಡಿಗೆ ಮನೆಯಲ್ಲಿ ಉಳಿಯುವ ಪರಿಸ್ಥಿತಿ ಎದುರಾಗಿದೆ. ಪ್ರತಿದಿನ ಮಾನಸಿಕವಾಗಿ ಕುಗ್ಗುತ್ತಿದ್ದೇನೆ. ಕಳೆದ ಬಾರಿ ನಿವೇಶನ ರಹಿತರ ಸಮಸ್ಯೆಗಳ ಪರಿಹಾರಕ್ಕಾಗಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಜರುಗಿದ ಜನ ಸಂಪರ್ಕ ಸಭೆಯಲ್ಲಿ ಮನವಿ ಸಲ್ಲಿಸಿದ್ದರೂ ಈ ತನಕ ಯಾವುದೇ ಸ್ಪಂದನೆ ವ್ಯಕ್ತವಾಗಿಲ್ಲ” ಎಂದು ಹೇಳಿದರು.

WhatsApp Image 2023 10 18 at 8.28.38 AM

“ಇನ್ನೂ ಎರಡು ತಿಂಗಳ ಒಳಗಾಗಿ ಮೂಲ ಸೌಕರ್ಯ ಒದಗಿಸಿ ಕೊಡುವ ಬಗ್ಗೆ ಈಗಿನ ಶಾಸಕರು ಯಶ್ಪಾಲ್ ಸುವರ್ಣರವರು ಭರವಸೆ ಕೊಟ್ಟಿದ್ದಾರೆ. ಮುಂದೆ ಏನು ಮಾಡಬೇಕು ಎನ್ನುವ ಬಗ್ಗೆ ನಾವೇ ಒಂದು ಹೋರಾಟ ಸಮಿತಿ ಮಾಡಿದ್ದೇವೆ. ಅದರ ಮ‌ೂಲಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದರು.

ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವ ಹಾಗೇ ಸ್ವತಃ ಮನೆಗಾಗಿ ನೂರಾರು ಕನಸುಗಳು ಹೊತ್ತ ಬಡ ಮಾಧ್ಯಮ ವರ್ಗದ ಜನರಿಗೆ ಮನೆಯನ್ನು ಕೊಟ್ಟು ಮೂಲ ಸೌಕರ್ಯ ಒದಗಿಸದಿದ್ದರೆ ಆ ಮನೆಯಲ್ಲಿ ಜೀವನ ನಡೆಸುವುದಾದರೂ ಹೇಗೆ ? ಒಟ್ಟಿನಲ್ಲಿ ಹಾಲಿ ಶಾಸಕರು ಮಾತು ಕೊಟ್ಟಂತೆ ಡಿಸೆಂಬರ್ ಅಂತ್ಯದ ವರೆಗೆ ಮೂಲ ಸೌಕರ್ಯ ಒದಗಿ ಬಂದು ವಸತಿ ರಹಿತರಿಗೆ ಶಾಶ್ವತ ಪರಿಹಾರ ಸಿಗಬಹುದೇ ಎಂದು ಕಾದು ನೋಡಬೇಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಶಾರೂಕ್ ತೀರ್ಥಹಳ್ಳಿ
ಶಾರೂಕ್ ತೀರ್ಥಹಳ್ಳಿ
ಮೂಲತಃ ತೀರ್ಥಹಳ್ಳಿಯವರಾದ ಇವರು ಪ್ರಸ್ತುತ ಈದಿನ. ಕಾಮ್ ಉಡುಪಿ ಜಿಲ್ಲಾ ವರದಿಗಾರರಾಗಿ ಮತ್ತು ಕರಾವಳಿ ಮಲೆನಾಡು ಭಾಗದ ವಲಯ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 2017 ರಿಂದ ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡ ಇವರು ದಿನ ಪತ್ರಿಕೆ, ವಾರ ಪತ್ರಿಕೆ, ನ್ಯೂಸ್ ವೆಬ್ ಪೋರ್ಟಲ್ ನಲ್ಲಿ ಕಾರ್ಯನಿರ್ವಹಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...