ಪತ್ರಕರ್ತ ಹೆಸರಿನಲ್ಲಿ ಬ್ಲಾಕ್‌ಮೇಲ್ ದಂಧೆಗೆ ಕಡಿವಾಣ ಅಗತ್ಯ: ಶಿವಾನಂದ ತಗಡೂರು

Date:

ಇತ್ತೀಚಿನ ದಿನಗಳಲ್ಲಿ ಪತ್ರಕರ್ತ ಎಂಬ ಲೇಬಲ್ ಇಟ್ಟುಕೊಂಡು ಕೆಲವರು ಬ್ಲಾಕ್‌ಮೇಲ್ ದಂಧೆ ಹಾಗೂ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿರುವುದು ಹೆಚ್ಚಾಗಿ ಕಂಡುಬರುತ್ತಿದೆ. ಇದಕ್ಕೆ ಕಡಿವಾಣ ಹಾಕುವ ಕಾರ್ಯವನ್ನು ನಾವು ಮಾಡಬೇಕು. ಇಲ್ಲದಿದ್ದರೆ ಪತ್ರಕರ್ತರಿಗೆ ಈ ಸಮಾಜದಲ್ಲಿ ಗೌರವ ಸಿಗಲು ಸಾಧ್ಯವಿಲ್ಲ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದ್ದಾರೆ.

ಉಡುಪಿ ಬ್ರಹ್ಮಗಿರಿಯ ಐಎಂಎ ಭವನದಲ್ಲಿ ಶನಿವಾರ ಆಯೋಜಿಸಲಾದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿ ಮತ್ತು ಕಾರ್ಕಳ, ಕುಂದಾಪುರ, ಬೈಂದೂರು, ಕಾಪು, ಬ್ರಹ್ಮಾವರ, ಹೆಬ್ರಿ ತಾಲೂಕು ಘಟಕಗಳ 2025–28ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

1009927129

ಪತ್ರಕರ್ತರು ಮಾಡುವ ಸುದ್ದಿಯಿಂದ ಸಮಾಜಕ್ಕೆ ಪ್ರಯೋಜನವಾದರೆ ಮಾತ್ರ ಈ ವೃತ್ತಿ ಸಾರ್ಥಕ ಎನಿಸುತ್ತದೆ. ಇಂದಿನ ಮಾಧ್ಯಮಗಳು ಸಮಾಜದ ಅಸಮತೋಲನಗಳನ್ನು ತಿದ್ದುವ ಸುದ್ದಿಗಳಿಗಿಂತ ‘ಸ್ಟೇಟ್‌ಮೆಂಟ್ ಓರಿಯೆಂಟೆಡ್’ ಸುದ್ದಿಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿರುವುದು ಕಂಡುಬರುತ್ತಿದೆ. ಇದಕ್ಕೆ ಕಡಿವಾಣ ಹಾಕಿ ಜನಪರ ಸುದ್ದಿಗಳತ್ತ ಗಮನ ಹರಿಸಬೇಕು. ವರದಿ ಮಾಡುವಾಗ ಸಾಮಾಜಿಕ ಪ್ರಜ್ಞೆ ಕೂಡ ಪತ್ರಕರ್ತರಿಗೆ ಅತ್ಯಂತ ಮುಖ್ಯವಾಗಿದೆ ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಾಜವು ಪತ್ರಕರ್ತರನ್ನು ಬಹಳ ಜವಾಬ್ದಾರಿಯುತ ಸ್ಥಾನದಲ್ಲಿ ಇಟ್ಟಿದೆ. ಆ ನಂಬಿಕೆಯನ್ನು ಉಳಿಸಿಕೊಳ್ಳಬೇಕು. ಪತ್ರಕರ್ತರು ಎಚ್ಚರಿಕೆಯಿಂದ ಮತ್ತು ಜಾಗೃತಿಯಿಂದ ಕಾರ್ಯನಿರ್ವಹಿಸಬೇಕು. ಪತ್ರಕರ್ತನ ಬರವಣಿಗೆಯಷ್ಟೇ ಅಲ್ಲ, ಅವರ ನಡೆನುಡಿಗಳೂ ಮುಖ್ಯವಾಗಿವೆ. ಪತ್ರಕರ್ತರ ವೃತ್ತಿಯನ್ನು ಸ್ವೀಕರಿಸಿದ ನಂತರ ಅದಕ್ಕೆ ತಕ್ಕಂತೆ ನಡೆದುಕೊಳ್ಳುವುದು ಮತ್ತು ವೃತ್ತಿ ಮನೋಭಾವ ರೂಢಿಸಿಕೊಳ್ಳುವುದು ಅಗತ್ಯ. ಈ ನಿಟ್ಟಿನಲ್ಲಿ ಸಂಘ ಕೂಡ ಕಾರ್ಯನಿರ್ವಹಿಸಬೇಕು ಎಂದು ಅವರು ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ನೂತನ ಜಿಲ್ಲಾಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಂಘದ ಉಸ್ತುವಾರಿ ಹಾಗೂ ರಾಜ್ಯ ಉಪಾಧ್ಯಕ್ಷ ಅಜ್ಜಮಾಡ ರಮೇಶ್ ಕುಟ್ಟಪ್ಪ ಮತ್ತು ಉಡುಪಿ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಮಾತನಾಡಿದರು.

1009927128 1

ಈ ಸಂದರ್ಭದಲ್ಲಿ ಸಂಘದ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡುವ ಮಾಸಿಕ ಪತ್ರಿಕೆ ‘ಸನ್ಮತಿ’ಯನ್ನು ರಾಜ್ಯಾಧ್ಯಕ್ಷರು ಬಿಡುಗಡೆಗೊಳಿಸಿದರು. ಸಂಘದ ನಿಕಟಪೂರ್ವ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ರಾಜ್ಯ ಸಮಿತಿ ಸದಸ್ಯ ಅಸ್ಟೋ ಮೊಹನ್, ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು ಹಾಗೂ ಜಿಲ್ಲಾ ಸಂಘದ ಕೋಶಾಧಿಕಾರಿ ಹರೀಶ್ ಕುಂದರ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರು ಸೇರಿದಂತೆ ಜಿಲ್ಲೆ ಮತ್ತು ತಾಲೂಕು ಘಟಕಗಳ ನೂತನ ಪದಾಧಿಕಾರಿಗಳಿಗೆ ಪ್ರಮಾಣಪತ್ರ ನೀಡಿ ಗೌರವಿಸಲಾಯಿತು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಲಕ್ಷ್ಮೀ ಮಚ್ಚಿನ, ಜಿಲ್ಲಾ ಸ್ಕೌಟ್ ಆಯುಕ್ತರಾಗಿ ಆಯ್ಕೆಯಾದ ಜನಾರ್ದನ ಕೊಡವೂರು ಹಾಗೂ ವೀರ ರಾಣಿ ಅಬ್ಬಕ್ಕ ಪ್ರಶಸ್ತಿ ಪುರಸ್ಕೃತೆ ಯಶೋಧಾ ಕೇಶವ್ ಅವರನ್ನು ಸನ್ಮಾನಿಸಲಾಯಿತು.

ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನೂತನ ಪದಾಧಿಕಾರಿಗಳ ಪಟ್ಟಿಯನ್ನು ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಅಜಿತ್ ಆರಾಡಿ ವಾಚಿಸಿದರು. ರಾಮಾಂಜಿ ನಮ್ಮಭೂಮಿ ಆಶಯಗೀತೆ ಹಾಡಿದರು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಚೇತನ್ ಮಟಪಾಡಿ ವಂದಿಸಿದರು. ಪತ್ರಕರ್ತ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...