ಉಡುಪಿ | ಅಡುಗೆ ಅನಿಲ ಕೊರತೆ ಇಲ್ಲ, ವದಂತಿಗಳಿಗೆ ಕಿವಿಗೊಡಬೇಡಿ – ಜಿಲ್ಲಾಡಳಿತ ಸ್ಪಷ್ಟನೆ

Date:

ಯುದ್ಧ ಸನ್ನಿವೇಶದ ಹಿನ್ನೆಲೆ, ಅನಿಲ ಕೊರತೆ ಉಂಟಾಗುತ್ತದೆ ಎಂದು ಸಾರ್ವಜನಿಕರು ಏಕಕಾಲದಲ್ಲಿ ಅನಿಲ ಸಂಪರ್ಕಕ್ಕೆ ಬುಕ್ಕಿಂಗ್ ಮಾಡುತ್ತಿದ್ದು, ಇದರಿಂದ ಬುಕ್ಕಿಂಗ್ ಕ್ರಾಷ್ ಆಗುತ್ತಿದೆ. ಸಾರ್ವಜನಿಕ ಆಸ್ಪತ್ರೆಗಳು, ವಸತಿ ನಿಲಯಗಳು, ಗೃಹಬಳಕೆ, ಅತೀ ಅವಶ್ಯಕ ವಸ್ತುಗಳನ್ನು ಉತ್ಪಾದಿಸುವ ಕೈಗಾರಿಕಾ ಘಟಕಗಳು, ಸೇರಿದಂತೆ ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಆದ್ಯತೆಯ ಮೇಲೆ ಅನಿಲ ಪೂರೈಸಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಪ್ರಸ್ತುತ ಗೃಹ ಬಳಕೆಯ ಎಲ್‌ಪಿಜಿ ಗ್ಯಾಸ್ ಮತ್ತು ವಾಣಿಜ್ಯ ಬಳಕೆಯ ಗ್ಯಾಸ್ ಬಗ್ಗೆ ಗ್ಯಾಸ್ ಏಜೆನ್ಸಿ ಮಾಲೀಕರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

1009997263

ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮದಿಂದ ದೇಶದಲ್ಲಿ ಅಡುಗೆ ಅನಿಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಬಹುದು ಎಂಬ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ವಂದತಿಗಳಿಗೆ ಜಿಲ್ಲೆಯ ಸಾರ್ವಜನಿಕರು ಕಿವಿಗೊಡದಂತೆ ಅವರುಗಳಿಗೆ ಪ್ರಸ್ತುತ ಸನ್ನಿವೇಶವನ್ನು ವಿವರಿಸಿ, ಅರಿವು ಮೂಡಿಸಬೇಕು. ಜಿಲ್ಲೆಯಲ್ಲಿ ಗೃಹಬಳಕೆ ಅಡುಗೆ ಅನಿಲದ ದಾಸ್ತಾನು ಸಾಕಷ್ಟು ಪ್ರಮಾಣದಲ್ಲಿದ್ದು, ಗ್ರಾಹಕರು ಯಾವುದೇ ಆತಂಕಪಡುವ ಅಗತ್ಯವಿಲ್ಲ ಎಂಬುದನ್ನು ಗ್ರಾಹಕರುಗಳಿಗೆ ಮನದಟ್ಟು ಮಾಡಿಸಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯಲ್ಲಿ ಹೆಚ್ಚು ಗೃಹ ಬಳಕೆದಾರರು ಎರಡು ಅನಿಲ ಸಂಪರ್ಕ ಹೊಂದಿದ್ದು, ಏಕ ಸಿಲಿಂಡರ್ ಹೊಂದಿದ್ದವರಿಗೆ ಆದ್ಯತೆಯ ಮೇಲೆ ಅನಿಲ ಪೂರೈಕೆ ಮಾಡಬೇಕು. ಅನಿಲದ ಮಿತ ಬಳಕೆಯ ಬಗ್ಗೆ ಸಾರ್ವಜನಿಕರು, ಸಂಘ-ಸಂಸ್ಥೆಗಳು ಮತ್ತು ಇತರರಿಗೆ ಜಾಗೃತಿ ಮೂಡಿಸಬೇಕು. ಆರೋಗ್ಯ, ವಾಣಿಜ್ಯ, ಕೈಗಾರಿಕೆ, ಇಂಧನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಾರಿಗೆ, ಪೊಲೀಸ್ ಇಲಾಖೆ ಸೇರಿದಂತೆ ಪ್ರಮುಖ ಇಲಾಖೆಗಳ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘ-ಸAಸ್ಥೆಗಳಿಗೆ ಅಗತ್ಯವಿರುವ ಅನಿಲ ಸಿಲಿಂಡರ್‌ಗಳ ಬೇಡಿಕೆಯ ಪಟ್ಟಿಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಗೆ ಸಲ್ಲಿಸುವಂತೆ ಸೂಚಿಸಿದರು.

ಬೇಡಿಕೆಯ ಭಾಗವನ್ನು ನಿರ್ವಹಿಸಲು ಪ್ರತಿ ಗ್ರಾಹಕರಿಗೆ ಕೊನೆಯ ಮರುಪೂರಣದ ದಿನಾಂಕದಿಂದ 25 ದಿನಗಳವರೆಗೆ ಇಂಟರ್-ಬುಕಿಂಗ್ ಅವಧಿಯನ್ನು ನಿಗದಿಪಡಿಸಲಾಗಿದೆ. ಈ ಬಗ್ಗೆ ಆಹಾರ ಇಲಾಖೆ ಸಾರ್ವಜನಿಕರಿಗೆ ಮಾಹಿತಿ ಪ್ರಚುರಪಡಿಸಬೇಕು ಎಂದ ಅವರು, ಜಿಲ್ಲೆಯ ಇಂದಿರಾ ಕ್ಯಾಂಟೀನ್‌ಗಳಲ್ಲಿ ಆಹಾರ ಪೂರೈಕೆಯಲ್ಲಿ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅನಿಲ ಪೂರೈಕೆ ಕುರಿತು ಸಾರ್ವಜನಿಕ ಜಾಲತಾಣಗಳ ಮೂಲಕ ತಪ್ಪು ಸಂದೇಶಗಳನ್ನು ಹರಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದ ಅವರು, ಸಾರ್ವಜನಿಕರು ತೊಂದರೆಗಳನ್ನು ನಿವಾರಿಸಲು ಸಹಾಯವಾಣಿ ಸಂಖ್ಯೆಯನ್ನು 112 ಪ್ರಚಾರಪಡಿಸುವುದರೊಂದಿಗೆ ಸ್ವೀಕರಿಸಿದ ದೂರುಗಳನ್ನು ತಕ್ಷಣವೇ ಪರಿಹರಿಸುವಂತೆ ತಿಳಿಸಿದರು.

ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆಯ ಸಿಲಿಂಡರ್‌ಗಳು ಕಾಳಸಂತೆಯಲ್ಲಿ ಮಾರಾಟ, ಸಂಗ್ರಹಣೆ, ಶೇಖರಣೆ ಹಾಗೂ ಸಾಗಾಣಿಕೆ ಮಾಡುವುದು ಕಂಡುಬಂದಲ್ಲಿ ಜಿಲ್ಲಾಡಳಿತದ ವತಿಯಿಂದ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದ ಅವರು, ಅನಧಿಕೃತವಾಗಿ ಗ್ಯಾಸ್ ಸಿಲಿಂಡರ್‌ಗಳ ದಾಸ್ತಾನು, ಸಾಗಾಣಿಕೆ ಹಾಗೂ ರಿಫಿಲ್ಲಿಂಗ್ ಪ್ರಕರಣಗಳು ಕಂಡುಬಂದಲ್ಲಿ ಕಾನೂನಿನ ಅನ್ವಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ಅನಾವಶ್ಯಕವಾಗಿ ಜನರು ಗೃಹ ಬಳಕೆಯ ಅನಿಲಗಳನ್ನು ಆಟೋಮೋಬೈಲ್ ಗಳಿಗೆ ಬಳಸದಂತೆ ನೋಡಿಕೊಳ್ಳಬೇಕು. ಅನಿಲಗಳು ಕಾಳಸಂತೆಯಲ್ಲಿ ಮಾರಾಟ ಆಗದಂತೆ ನೋಡಿಕೊಳ್ಳಲು ಗ್ಯಾಸ್ ಏಜೆನ್ಸಿಯ ಸಪ್ಲೈಯರ್, ಡೀಲರ್ಸ್ ಹಾಗೂ ಕಂಪನಿಗಳ ಸಹಕಾರ ಅತ್ಯಗತ್ಯ ಎಂದರು.

ಸಭೆಯಲ್ಲಿ ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ರವೀಂದ್ರ, ಗ್ಯಾಸ್ ಏಜೆನ್ಸಿಯ ಮಾಲೀಕರುಗಳು, ಸರಬರಾಜುದಾರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...