ಉಡುಪಿ | ನಾಲ್ವರ ಹತ್ಯೆ ಪ್ರಕರಣ: 11 ಮಂದಿಗೆ ಪೊಲೀಸ್ ನೋಟಿಸ್?

Date:

ಉಡುಪಿಯ ನೇಜಾರಿನಲ್ಲಿ ನಡೆದಿದ್ದ ನಾಲ್ವರ ಬರ್ಬರ ಹತ್ಯೆ ಪ್ರಕರಣದಲ್ಲಿ ಆರೋಪಿಯನ್ನು ಮಹಜರಿಗೆ ಕರೆದೊಯ್ದಿದ್ದಾಗ ನಡೆದಿದ್ದ ಘಟನೆ ಸಂಬಂಧ ಪೊಲೀಸರು 11 ಮಂದಿಗೆ ನೋಟೀಸ್‌ ನೀಡಿದ್ದಾರೆ. ಇದರಿಂದಾಗಿ, ನೇಜಾರು ಗ್ರಾಮಸ್ಥರು ಪೊಲೀಸ್ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಆತಂಕಕ್ಕೀಡಾಗಿದ್ದಾರೆ ಎಂದು ವರದಿಯಾಗಿದೆ.

ನವೆಂಬರ್ 12ರಂದು ಹತ್ಯೆ ಆರೋಪಿ ಪ್ರಮೀಣ್ ಚೌಗಲೆ, ತನ್ನ ಸಹೋದ್ಯೋಗಿ ಸೇರಿ ಆಕೆಯ ಕುಟುಂಬದ ನಾಲ್ವರನ್ನು ಹತ್ಯೆಗೈದಿದ್ದ. ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿದ್ದ ಪೊಲೀಸರು, ಆತನನ್ನು ನವೆಂಬರ್ 16ರಂದು ಸ್ಥಳ ಮಹಜರು ಮಾಡಲು ನೇಜಾರಿಗೆ ಕರೆದೊಯ್ದಿದ್ದರು. ಈ ವೇಳೆ, ಆತನಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಆರೋಪಿ ಮೇಲೆ ಹಲ್ಲೆಗೆ ಮುಂದಾಗಿದ್ದರು.

ಗ್ರಾಮಸ್ಥರನ್ನು ತಡೆಯಲು ಪೊಲೀಸರು ಲಾಠಿ ಜಾರ್ಜ್‌ ಕೂಡ ನಡೆಸಿದ್ದರು. ಇದೀಗ, ಆ ಘಟನೆಯ ಸಂಬಂಧ 11 ಮಂದಿಯನ್ನು ಪೊಲೀಸರು ಗುರುತಿಸಿದ್ದು, ಅವರಿಗೆ ನೋಟಿಸ್‌ ಜಾರಿ ಮಾಡಿದ್ದಾರೆ. ಅವರಲ್ಲಿ, ಮೂವರ ವಿರುದ್ಧ ಕೊಲೆ ಯತ್ನ (307) ಆರೋಪದ ಮೇಲೆ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ ಎಂಬ ಹೇಳಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...